ವಿಜಯಪುರ | ಜಿಲ್ಲಾದ್ಯಂತ ಎಲ್ಲ ಅಧೀನ ನ್ಯಾಯಾಲಯಗಳಲ್ಲಿ ಸೆ.13ರಂದು ರಾಷ್ಟ್ರೀಯ ಲೋಕ್ ಅದಾಲತ್

Date:

Advertisements

“ಜಿಲ್ಲಾ ಕೇಂದ್ರ ಸೇರಿದಂತೆ ಜಿಲ್ಲಾದ್ಯಂತ ಎಲ್ಲ ಇರುವ ಅಧೀನ ನ್ಯಾಯಾಲಯಗಳಲ್ಲಿ ಸೆ.13ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದೆ. ಭಾಗವಹಿಸುವ ಕಕ್ಷಿದಾರರ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲಾಗುವುದು” ಎಂದು ವಿಜಯಪುರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹರೀಶ್ ಎ. ತಿಳಿಸಿದರು.

ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಎಡಿಆ‌ರ್ ಕಟ್ಟಡದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಎಲ್ಲ ವರ್ಗದ ಕಕ್ಷಿದಾರರಿಗೆ ಅನುಕೂಲವಾಗುವ ದೃಷ್ಟಿಯಿಂದ ಜಿಲ್ಲಾ ಕೇಂದ್ರ ಹಾಗೂ ತಾಲೂಕು ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿದೆ” ಎಂದು ಹೇಳಿದರು.

“ಲೋಕ್ ಅದಾಲತ್ ಕಾರ್ಯಕ್ರಮದಲ್ಲಿ ರಾಜಿ ಸಂಧಾನಕ್ಕೆ ಒಳಪಡಬಹುದಾದ ವ್ಯಾಜ್ಯ ಪೂರ್ವ ಪ್ರಕರಣಗಳು, ರಾಜಿ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕ, ರಾಜಿಯಾಗಬಲ್ಲ ೨ ಅಪರಾಧಿಕ ಪ್ರಕರಣಗಳು, ವೈವಾಹಿಕ ಮತ್ತು ರಾಜಿಯಾಗಬಲ್ಲ ಸಿವಿಲ್ ಹಾಗೂ ಇತರೆ ಸಂಧಾನದ ಕ್ಷ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ” ಎಂದು ಹೇಳಿದರು.

Advertisements
WhatsApp Image 2025 08 15 at 3.46.20 PM

“ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಆ.1ಕ್ಕೆ 46,446 ಸಿವಿಲ್ ಹಾಗೂ 25,044 ಕ್ರಿಮಿನಲ್ ಒಳಗೊಂಡಂತೆ ಒಟ್ಟು 71,490 ಪ್ರಕರಣಗಳು ವಿಚಾರಣೆಗೆ ಬಾಕಿ ಇವೆ. ಈಗಾಗಲೇ 2,334 ಸಿವಿಲ್ ಹಾಗೂ 979 ಕ್ರಿಮಿನಲ್‌ ಸೇರಿದಂತೆ ಒಟ್ಟು 3,313 ಪ್ರಕರಣಗಳನ್ನು ಇತ್ಯರ್ಥಕ್ಕೆ ಗುರುತಿಸಲಾಗಿದೆ. ಸಂಬಂಧಿಸಿದ ವಕೀಲರು ಹಾಗೂ ಕಕ್ಷಿದಾರರೊಂದಿಗೆ ಮಾತುಕತೆ ಮೂಲಕ ಇನ್ನೂ ಹೆಚ್ಚಿನ ಪ್ರಕರಣಗಳನ್ನು ಸಹ ರಾಜಿಗಾಗಿ ಗುರುತಿಸಲಾಗುತ್ತಿದೆ. ಹೆಚ್ಚಿನ ಪ್ರಕರಣಗಳು ರಾಷ್ಟೀಯ ಲೋಕ್ ಅದಾಲತ್ ನಲ್ಲಿ ಇತ್ಯರ್ಥಗೊಳ್ಳುವ ನಿರೀಕ್ಷೆ ಇದೆ ಎಂದು ಅವರು ತಿಳಿಸಿದರು.

ವಿಶೇಷ ಮಧ್ಯಸ್ಥಿಕೆ ಅಭಿಯಾನದ ಅಡಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಂಗ ಇಲಾಖೆ ಮತ್ತು ಜಿಲ್ಲಾ ನ್ಯಾಯವಾದಿಗಳ ಸಂಘದ ಸಂಯುಕ್ತಾಶ್ರಯದಲ್ಲಿ ವಿಶೇಷ ಮಧ್ಯಸ್ಥಿಕೆ ಅಭಿಯಾನ ಅ.7ರ ತನಕ ನಡೆಯಲಿದೆ” ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹರೀಶ್ ಎ. ತಿಳಿಸಿದರು.

“ಅಭಿಯಾನದಲ್ಲಿ ಭಾಗವಹಿಸಿ ಕಕ್ಷಿದಾರರ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಕ್ಕೆ ಅವಕಾಶವಿದೆ. ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಈವರೆಗೆ ಒಟ್ಟು 1,527 ಪ್ರಕರಣಗಳನ್ನು ಇತ್ಯರ್ಥಕ್ಕಾಗಿ ಗುರುತಿಸಲಾಗಿದೆ. ಇವುಗಳಲ್ಲಿ 123 ಪ್ರಕರಣಗಳು ಮಧ್ಯಸ್ಥಿಕೆ ಮೂಲಕ ಇತ್ಯರ್ಥಪಡಿಸಲಾಗಿದೆ. 17 ಪ್ರಕರಣಗಳು ರಾಜಿ ಸಂಧಾನದ ಮೂಲಕ ಇತ್ಯರ್ಥಗೊಂಡಿದ್ದು, ಇನ್ನೂ ಹೆಚ್ಚಿನ ಪ್ರಕರಣಗಳನ್ನು ಇತ್ಯರ್ಥಕ್ಕಾಗಿ ಗುರುತಿಸಲಾಗುವುದು” ಎಂದು ಹೇಳಿದರು.

ಇದನ್ನು ಓದಿದ್ದೀರಾ? ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಮನೆಯಿಂದ 1.68 ಕೋಟಿ ನಗದು, 6 ಕೆಜಿ ಚಿನ್ನ ವಶಕ್ಕೆ ಪಡೆದ ಇ.ಡಿ

ಪತ್ರಿಕಾಗೋಷ್ಠಿಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಅರವಿಂದ ಎಸ್ ಹಾಗರಿಗಿ, ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷರಾದ ಡಿಜಿ ಬಿರಾದಾರ, ಪ್ರಧಾನ ಕಾರ್ಯದರ್ಶಿ ಎಸ್ ಎಸ್ ಚೂರಿ ಇದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಎಫ್‌ಆರ್‌ಎಸ್ ಕ್ರಮ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

ಉಡುಪಿ | ಬ್ರಹ್ಮಾವರ ಪೊಲೀಸ್ ಠಾಣೆಯ 500ಮೀ ವಾಪ್ತಿಯಲ್ಲಿ ಆ.22ರವರೆಗೆ ನಿಷೇಧಾಜ್ಞೆ: ಜಿಲ್ಲಾಧಿಕಾರಿ

ಬ್ರಹ್ಮಾವರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 177/2025ಕ್ಕೆ ಸಂಬಂಧಿಸಿದಂತೆ ಸಕ್ರಿಯ ಹಿಂದೂ...

ಸಕಲೇಶಪುರ | ಮಕ್ಕಳನ್ನು ಡ್ರಗ್ಸ್‌ ದಾಸರನ್ನಾಗಿ ಮಾಡಿ ಭಾರತವನ್ನು ಮುಳುಗಿಸುವಲ್ಲಿ ದೊಡ್ಡ ದೊಡ್ಡ ದೇಶಗಳ ಕೈವಾಡವಿದೆ: ಎಚ್‌ ಎಂ ವಿಶ್ವನಾಥ್

ದೊಡ್ಡ ದೊಡ್ಡ ದೇಶಗಳು ನಮ್ಮ ದೇಶದ ಮಕ್ಕಳನ್ನು ಗುರಿಯಾಗಿಸಿಕೊಂಡು ಡ್ರಗ್ಸ್‌ನಲ್ಲಿ ಮುಳುಗಿಸುತ್ತಿದ್ದಾರೆ....

Download Eedina App Android / iOS

X