ವಿಜಯಪುರ | ʼನವ ಭಾರತ ನಿರ್ಮಾಣಕ್ಕೆ ಭದ್ರ ಬುನಾದಿ ಹಾಕಿದ ಮಹಾನ್ ನೇತಾರ ನೆಹರುʼ

Date:

ನವ ಭಾರತ ನಿರ್ಮಾಣಕ್ಕೆ ಅಡಿಗಲ್ಲು ಹಾಕಿ, ಭದ್ರ ಬುನಾದಿ ಹಾಕಿದ ಮಹಾನ್‌ ಚೇತನ, ಶಿಕ್ಷಣ ವ್ಯವಸ್ಥೆಗೆ ಬಲ ಕೊಟ್ಟ ನೇತಾರ ಮಾಜಿ ಪ್ರಧಾನಿ ಪಂಡಿತ್ ಜವಾಹರ್ಲಾಲ್ ನೆಹರು ಎಂದು ವಿಜಯಪುರ ಕಾಂಗ್ರೆಸ್ ಉಪಾಧ್ಯಕ್ಷ ವೈಜನಾಥ ಕರ್ಪೂರಮಠ ಹೇಳಿದರು.

- Advertisement -

ನಗರದ ಕಾಂಗ್ರೆಸ್ ಪಕ್ಷದ ಕಾರ್ಯಾಲಯದಲ್ಲಿ ಆಯೋಜಿಸಿದ್ದ ನೆಹರು ಅವರ ಪುಣ್ಯ ತಿಥಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಸಾವಿರಾರು ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಲು ಮುನ್ನುಡಿ ಬರೆದು, ಸಾಕ್ಷರತೆಯಲ್ಲಿ ಮೈಲಿಗಲ್ಲು ನಿರ್ಮಾಣ ಮಾಡಿದ ಧೀಮಂತ ನಾಯಕ, ಭಾರತದಾದ್ಯಂತ ಹಲವಾರು ಆಸ್ಪತ್ರೆಗಳನ್ನು ಕಟ್ಟಲು ಆಜ್ಞೆ ಮಾಡಿದ ವೈದ್ಯಲೋಕದ ರಾಯಭಾರಿ, ನದಿ, ಸೇತುವೆಗಳನ್ನು ಕಟ್ಟಿ ಕುಡಿಯುವ ನೀರಿನ ವ್ಯವಸ್ಥೆ ಮಾಡಿದ ನೀರಾವರಿಯ ತಜ್ಞ, ವಿಜ್ಞಾನಿಗಳ ಸಾಧನೆಯನ್ನು ಮನಗಂಡು ಇಸ್ರೋ ಬಾಹ್ಯಾಕಾಶ ಸಂಸ್ಥೆಯನ್ನು ಸ್ಥಾಪಿಸಲು ಇಚ್ಛಾಶಕ್ತಿ ತೋರಿದ ವಿಜ್ಞಾನಿಗಳ ಅಚ್ಚು ಮೆಚ್ಚಿನ ನಾಯಕ ಸರ್ವಜನಾಂಗದ ಶಾಂತಿಯ ತೋಟದ ಪರಿಪಾಲಕ, ಸಾವಿರಾರು ಕಿಲೋಮೀಟರ್ ರಸ್ತೆಗಳನ್ನು ನಿರ್ಮಿಸಲು ಶಂಕು ಸ್ಥಾಪನೆ ಮಾಡಿದ ಪ್ರಜಾಸೇವಕ ಭಾರತದ ಮೊಟ್ಟ ಮೊದಲ ಪ್ರಧಾನಿಯಾಗಿ ಜಗತ್ಪ್ರಸಿದ್ಧರಾದವರು” ಎಂದು ನೆಹರು ಅವರ ಗುಣಗಾನ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಸಂದರ್ಭದಲ್ಲಿ ಕಾಂಗ್ರೆಸ್ ಕೆಪಿಸಿಸಿ ಉಪಾಧ್ಯಕ್ಷ ಕೆ ಎಫ್ ಅಂಕಲಗಿ, ಡಿ ಎಲ್ ಚವ್ಹಾಣ, ಗಂಗಾಧರ ಸಂಬಣ್ಣಿ, ಪ್ರಧಾನ ಕಾರ್ಯದರ್ಶಿ ಎಂ ಎಂ ಮುಲ್ಲಾ (ದ್ಯಾಬೇರಿ), ವಸಂತ ಹೊನಮೋಡೆ, ದೇಸು ಚವ್ಹಾಣ, ಬ್ಲಾಕ್ ಅಧ್ಯಕ್ಷ ಜಮೀರ್‌ ಅಹಮದ್ ಬಕ್ಷಿ, ಆರತಿ ಶಾಹಪೂರ, ವಿಜಯಪುರ ಜಿಲ್ಲಾ ಕಾಂಗ್ರೆಸ್ ಮಾಜಿ ಸೈನಿಕರ ವಿಭಾಗದ ಅಧ್ಯಕ್ಷ ವಿದ್ಯಾಧರ ಪಾಟೀಲ, ಅಶ್ಪಾಕ ಮನಗೂಳಿ, ಮಹ್ಮದ ಮುಲ್ಲಾ, ಸಂತೋಷ ಬಾಲಗಾವಿ, ತಾಜುದ್ದೀನ ಖಲೀಫಾ, ಎಂ. ಬಿ. ನಾಯಕ್, ಸರಫರಾಜ ಮಿರ್ಜಿ, ಶಬೀಹಾ ಮಂಟೂರ, ಮಹಿಬೂಬ ಕರ್ಜಗಿ, ದಿಲಿಪ ಪ್ರಭಾಕರ ಹಾಗೂ ಇತರ ಕಾರ್ಯಕರ್ತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...