ವಿಜಯಪುರ | ಸಕ್ಕರೆ ದರ ನಿಗದಿಗೆ ವಿಳಂಬ ಬೇಡ: ಡಿಸಿ ಆನಂದ

Date:

ವಿಜಯಪುರ ಜಿಲ್ಲೆಯಲ್ಲಿ 10 ಸಕ್ಕರೆ ಕಾರ್ಖಾನೆಗಳಿದ್ದು, ಕೇವಲ ಒಂದು ಕಾರ್ಖಾನೆ ಮಾತ್ರ ದರ ನಿಗದಿಪಡಿಸಿದ್ದು, ಇನ್ನುಳಿದ ಕಾರ್ಖಾನೆಗಳು ಶೀಘ್ರ ದರ ನಿಗದಿಪಡಿಸಿ ಕಾರ್ಯಾರಂಭ ಮಾಡುವಂತೆ ವಿಜಯಪುರ ಜಿಲ್ಲಾಧಿಕಾರಿ ಡಾ. ಕೆ ಆನಂದ ಸೂಚಿಸಿದರು.

- Advertisement -

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರು ಹಾಗೂ ರೈತರೊಂದಿಗೆ ಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, “ಜಿಲ್ಲೆಯಲ್ಲಿರುವ ಸಕ್ಕರೆ ಕಾರ್ಖಾನೆಗಳು ಎರಡು ದಿನಗಳಲ್ಲಿ ಕಬ್ಬಿನ ಸಾಗಾಣಿಕೆ ಮತ್ತು ಕಟಾವು ದರ ಹೊರತುಪಡಿಸಿ ರೈತರಿಗೆ ಪಾವತಿಸಬೇಕಾಗುವ ದರವನ್ನು ನಿಗದಿಗೊಳಿಸಿ, ಕಬ್ಬು ನುರಿಸುವ ಕಾರ್ಯ ಪ್ರಾರಂಭಿಸಬೇಕು. ರೈತರಿಗೆ ಪಾವತಿಯಾಗಬೇಕಾದ ಈ ಹಿಂದಿನ ಯಾವುದೇ ಬಿಲ್ಲುಗಳನ್ನು ಬಾಕಿ ಉಳಿಸಿಕೊಳ್ಳದೆ ಶೀಘ್ರವಾಗಿ ಇತ್ಯರ್ಥಪಡಿಸಿ ಪಾವತಿಗೆ ಕ್ರಮವಹಿಸಬೇಕು. ಈ ಹಂಗಾಮಿನಲ್ಲಿ ಸರ್ಕಾರದ ಮಾನದಂಡವನ್ನು ಬಳಸಿಕೊಂಡು ತಮ್ಮ ಕಾರ್ಖಾನೆಯ ವತಿಯಿಂದ ಕಬ್ಬುನುರಿಸುವ ಕುರಿತು ಪತ್ರ ನೀಡಿ ಕಾರ್ಖಾನೆಗಳನ್ನು ಆರಂಭಿಸಬೇಕು” ಎಂದು ಸೂಚನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ರೈತ ಮುಖಂಡರು ತಮ್ಮ ಸಮಸ್ಯೆಗಳ ಕುರಿತು ಜಿಲ್ಲಾಡಳಿತದ ಗಮನಕ್ಕೆ ತಂದಿದ್ದು, ಬಹುತೇಕ ಸ್ಥಳೀಯವಾಗಿರುವ ಸಮಸ್ಯೆ ಪರಿಹರಿಸಲಾಗುವುದು. ವಾಯು ಮಾಲಿನ್ಯ, ನೈರ್ಮಲ್ಯ ಪರಿಶೀಲನೆ ನಡೆಸಿದ ವರದಿ ಸಲ್ಲಿಸಿ, ಸಕ್ಕರೆ ಕಾರ್ಖಾನೆಗಳು ಕೊಳಚೆ ನೀರು ಹರಿ ಬಿಡದಂತೆ ನೋಡಿಕೊಂಡು ಮಾಲಿನ್ಯವಾಗದಂತೆ ನಿಗಾ ವಹಿಸಬೇಕು” ಎಂದರು.

ಇದನ್ನೂ ಓದಿ: ವಿಜಯಪುರ | ಕರ್ನಾಟಕ ರಾಜ್ಯೋತ್ಸವ: ಸಚಿವ ಎಂ ಬಿ ಪಾಟೀಲರಿಂದ ಧ್ವಜಾರೋಹಣ

“ರೈತರು ಕಬ್ಬು ಪೂರೈಸಿದ ನಿಗದಿತ ಕಾಲಾವಧಿಯೊಳಗೆ ರೈತರಿಗೆ ಕಬ್ಬಿನ ಬಿಲ್ ಪಾವತಿಯಾಗುವಂತೆ ನೋಡಿಕೊಳ್ಳಬೇಕು. ಸಕ್ಕರೆ ಕಾರ್ಖಾನೆಗಳಲ್ಲಿ ಪ್ರತಿದಿನ ಕಾರ್ಖಾನೆಗೆ ಬರುವ ಕಬ್ಬು ತುಂಬಿದ ವಾಹನಗಳ ಕುರಿತು ಮಾಹಿತಿ ಲಾಗ್ ಬುಕ್ಕಿನಲ್ಲಿ ದಾಖಲಿಸಬೇಕು. ಕಬ್ಬಿನ ಕಾಸ್ಟ್ ಆಫ್ ಕಲ್ಟಿವೇಶನ್ ಲಾಭಾಂಶ ಕುರಿತು 15 ಅಂಶಗಳ ಕಬ್ಬಿಣ ದರ ನಿಗದಿಪಡಿಸುವಂತೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಸಕ್ಕರೆ ಕಾರ್ಖಾನೆಗಳು ರೈತರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಬೇಕು. ಕಾರ್ಖಾನೆಗಳ ಮಾಲೀಕರು ಒಂದು ನಿಖರತೆಯಿಂದ ದರ ನಿಗದಿಪಡಿಸಿ ಘೋಷಿಸಿ ಕಾರ್ಖಾನೆ ಆರಂಭಿಸಬೇಕು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಸವನ ಬಾಗೇವಾಡಿ ಸಮೀಪ 3.5 ತೀವ್ರತೆಯ ಭೂಕಂಪ ದಾಖಲು!

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ದಿಂದಾವರ ಗ್ರಾಮ ಪಂಚಾಯಿತಿ ಸಮೀಪ...

ಚಿಕ್ಕಮಗಳೂರು | ಚೇತನ್ ಗೊಡ್ಲುಮನೆ ಅವರಿಗೆ ಪಿಎಚ್‌ಡಿ ಪದವಿ ಪ್ರದಾನ 

ಗೊಡ್ಲುಮನೆ ಹೆಚ್.ಹೆಚ್. ರಮೇಶ್ ಗೌಡ ಹಾಗೂ ಹೆಚ್.ಆರ್. ಜಯಲಕ್ಷ್ಮಿ ದಂಪತಿಯ ಹಿರಿಯ...

ಹಾವೇರಿ | ಪಿಎಫ್ ಹೊಸ ನೀತಿ: ವಿರೋಧಿಸಿ ಮಹಿಳಾ ಉದ್ಯೋಗಿಗಳು ದಿಡೀರ್ ಹೆದ್ದಾರಿ ತಡೆದು ಪ್ರತಿಭಟನೆ

"ಕೇಂದ್ರ ಸರ್ಕಾರವು ಭವಿಷ್ಯನಿಧಿ (ಪಿಎಫ್) ಸೌಲಭ್ಯದಲ್ಲಿ ಹೊಸ ಆದೇಶ ಮಾಡಿರುವುದು ಗಾರ್ಮೆಂಟ್ಸ್...

ಚಿಕ್ಕಮಗಳೂರು | ರಾಷ್ಟ್ರೀಯ ಹೆದ್ದಾರಿ: ಮರಗಳ ಕಟಾವು ತನಿಖೆಗೆ ಒತ್ತಾಯ

ಮೂಡಿಗೆರೆ ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕೆ ಕೆಳಗೂರು ಸಮೀಪದ ಸಾಲು ಮರ...