ವಿಜಯಪುರ | ಎನ್‌ಎಸ್‌ಎಸ್ ಸ್ವಯಂ ಸೇವಕರಲ್ಲಿ ತಾಳ್ಮೆ, ಶಿಸ್ತಿನ ಜೊತೆಗೆ ಧೈರ್ಯ ತುಂಬುತ್ತದೆ: ಡಾ.ಪ್ರತಾಪ್ ಲಿಂಗಯ್ಯ

Date:

“ಎನ್‌ಎಸ್‌ಎಸ್ ಎಂಬುದು ಮನುಷ್ಯನಲ್ಲಿ ಸಹನೆ, ತಾಳ್ಮೆ ಹಾಗೂ ಶಿಸ್ತಿನ ಜೊತೆಗೆ ಧೈರ್ಯವನ್ನು ಸಹ ಹೆಚ್ಚು ಮಾಡುತ್ತದೆ. ಎನ್ಎಸ್‌ಎಸ್ ಸ್ವಯಂ ಸೇವಕರು ಯಾವುದೇ ಕಷ್ಟಕರ ಸನ್ನಿವೇಶವನ್ನೂ ಸಹ ಎದುರಿಸುವಂತಹ ಶಕ್ತಿ ಹೊಂದಿರುತ್ತಾರೆ” ಎಂದು ರಾಜ್ಯ ಎನ್‌ಎಸ್ಎಸ್ ಅಧಿಕಾರಿ ಡಾ.ಪ್ರತಾಪ್ ಲಿಂಗಯ್ಯ ತಿಳಿಸಿದರು.

- Advertisement -

ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ, ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ರಾಷ್ಟ್ರೀಯ ಸೇವಾ ಯೋಜನೆ ಕೋಶ, ಬೆಂಗಳೂರು ಇವುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶ್ವವಿದ್ಯಾನಿಲಯ ಮಟ್ಟದ ಅತ್ಯುತ್ತಮ ರಾಷ್ಟ್ರೀಯ ಸೇವಾ ಯೋಜನೆ ಅಧಿಕಾಗಳು ಹಾಗೂ ಸ್ವಯಂ ಸೇವಕಿಯರ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ಎನ್‌ಎಸ್‌ಎಸ್ ಅಧಿಕಾರಿಗಳ ಹಾಗೂ ಪ್ರಾಂಶುಪಾಲರ ತರಬೇತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಎನ್‌ಎಸ್‌ಎಸ್ ಒಬ್ಬ ಮನುಷ್ಯನನ್ನು ಹೇಗೆ ಸಕಾರಾತ್ಮಕವಾಗಿ ಬದಲಾವಣೆ ಮಾಡುತ್ತದೆ. ಹಾಗೇ ಒಬ್ಬ ವ್ಯಕ್ತಿ ಒಂದು ಬಾರಿಯಾದರೂ ಎನ್‌ಎಸ್‌ಎಸ್ ಕಾರ್ಯಕರ್ತನಾಗಿದ್ದರೆ ಆತ ತನ್ನ ಜೀವನದಲ್ಲಿ ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಲಾರ” ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಮಾತನಾಡಿ, “ಎನ್‌ಎಸ್‌ಎಸ್‌ನ ಕಾರ್ಯಕ್ರಮಾಧಿಕಾರಿಗಳು ಹೆಚ್ಚಿನ ಆಸಕ್ತಿಯನ್ನು ಹೊಂದಿರಬೇಕು. ತಮಗಿರುವ ಹಲವು ಜವಾಬ್ದಾರಿಗಳ ಜೊತೆಗೆ ಎನ್‌ಎಸ್‌ಎಸ್‌ನ ಕೆಲಸ ಕಾರ್ಯಗಳಿಗೂ ಸಹಾ ಅಷ್ಟೇ ಮನ್ನಣೆಯನ್ನ ನೀಡಿ ತಮ್ಮ ಜವಾಬ್ದಾರಿಯನ್ನು ನಿರ್ವಹಿಸಬೇಕಾಗುತ್ತದೆ” ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಪ್ರಾದೇಶಿಕ ನಿರ್ದೇಶನಾಲಯದ ಉಪ ನಿರ್ದೇಶಕರಾದ ಯಲ್ಲಪ ಉಪ್ಪಿನ ಹಾಗೂ ಪ್ರಾದೇಶಿಕ ನಿರ್ದೇಶನಾಲಯದ ಪ್ರಾದೇಶಿಕ ನಿರ್ದೇಶಕರಾದ ಡಾ. ಕಾರ್ತೀಗೇನ್ ಇವರು ಎನ್‌ಎಸ್ಎಸ್ ಅಧಿಕಾರಿಗಳಿಗೆ ಹಾಗೂ ಪ್ರಾಂಶುಪಾಲರಿಗೆ ತರಬೇತಿ ನೀಡಿದರು.

ಕಾರ್ಯಕ್ರಮದಲ್ಲಿ ಅತ್ಯುತ್ತಮ ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿಗಳು ಹಾಗೂ ಸ್ವಯಂ ಸೇವಕಿಯರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ವಿವಿಯ ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂಚಂದ್ರಶೇಖರ್, ಎನ್‌ಎಸ್‌ಎಸ್ ಸಂಯೋಜನಾಧಿಕಾರಿ, ಪ್ರೊ.ಶಾಂತಾದೇವಿ ಟಿ. ಉಪಸ್ಥಿತರಿದ್ದರು. ವಿವಿಧ ಕಾಲೇಜಿನ ಎನ್‌ಎಸ್ಎಸ್ ಅಧಿಕಾರಿಗಳು, ಪ್ರಾಂಶುಪಾಲರು, ಎನ್‌ಎಸ್ಎಸ್ ಸ್ವಯಂ ಸೇವಕಿಯರು ಸೇರಿದಂತೆ ಹಲವರು ಭಾಗಿಯಾಗಿದ್ದರು. ಡಾ.ಕಲಾವತಿ ಕಾಂಬ್ಳೆ ಕಾರ್ಯಕ್ರಮ ನಿರೂಪಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...