ವಿಜಯಪುರ | ಮಹಿಳಾ ಸಬಲೀಕರಣದತ್ತ ʼಒಡಲ ಧ್ವನಿ ಒಕ್ಕೂಟʼದ ಹೆಜ್ಜೆ; ರೈತರಿಗೆ ಕೃಷಿ ಪರಿಕರ ವಿತರಣೆ

Date:

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಬಬಲಾದ ಗ್ರಾಮದ ಒಡಲ ಧ್ವನಿ ಮಹಿಳಾ ಒಕ್ಕೂಟವು ಕೃಷಿಯಲ್ಲಿ ಮಹಿಳೆಯರ ಆರ್ಥಿಕ ಸಬಲೀಕರಣದತ್ತ ಒಂದು ಹೊಸ ಉಪಕ್ರಮವನ್ನು ಕೈಗೊಂಡಿದೆ. ಈ ಉಪಕ್ರಮದ ಅಡಿಯಲ್ಲಿ, ಸಣ್ಣ ಮತ್ತು ಅತೀ ಸಣ್ಣ ಭೂಮಿ ಹೊಂದಿರುವ 20 ಮಹಿಳಾ ರೈತರಿಗೆ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಎಡೆ ಹೊಡೆಯುವ ಸೈಕಲ್‌ನ್ನು ವಿತರಿಸಲಾಗಿದೆ.

- Advertisement -

ಈ ಸಾಧನವು ಮಹಿಳೆಯರ ಕೃಷಿ ಕಾರ್ಯಗಳನ್ನು ಸುಲಭಗೊಳಿಸಿ, ಅವರ ಶ್ರಮ ಮತ್ತು ಸಮಯವನ್ನು ಉಳಿಸಲು ಸಹಾಯ ಮಾಡುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಕೃಷಿ ಮತ್ತು ಕೃಷಿಯೇತರ ಚಟುವಟಿಕೆಗಳಲ್ಲಿ ನಿರತರಾಗಿರುವ ಗ್ರಾಮೀಣ ಮಹಿಳೆಯರು ಎದುರಿಸುತ್ತಿರುವ ಸವಾಲುಗಳನ್ನು ಮನಗಂಡು, ಈ ಉಪಕರಣಗಳನ್ನು ವಿತರಿಸಲಾಗಿದೆ. ಪರಿಣಾಮಕಾರಿ ಯಂತ್ರವು, ಭೂಮಿಯಲ್ಲಿ ಕಳೆ ಕೀಳುವಂತಹ ಕಠಿಣ ಕೆಲಸಗಳನ್ನು ಸುಲಭವಾಗಿ ಮಾಡಲು ಸಹಕರಿಸುತ್ತದೆ. ಹೀಗಾಗಿ, ಈ ಉಪಕರಣಗಳ ವಿತರಣೆಯು ಮಹಿಳಾ ರೈತರಲ್ಲಿ ಹೊಸ ಹುರುಪು ಮತ್ತು ಆತ್ಮವಿಶ್ವಾಸ ತುಂಬುತ್ತದೆ.

WhatsApp Image 2025 09 04 at 9.45.33 AM

ಇದನ್ನೂ ಓದಿ: ವಿಜಯಪುರ | ವಿದ್ಯಾರ್ಥಿನಿಯರ ವ್ಯಕ್ತಿತ್ವ ವಿಕಸನಕ್ಕೆ ಅಕ್ಕಮಹಾದೇವಿ ವಿವಿ ಕಟಿಬದ್ಧ: ಕುಲಪತಿ ವಿಜಯಾ

ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಶಿವಶಂಕರ ಮೂರ್ತಿ, ವಿಜ್ಞಾನಿಗಳಾದ ಡಾ. ವೀಣಾ ಚಂದಾವರಿ ಹಾಗೂ ಡಾ. ಪ್ರಕಾಶ ರಾಠೋಡ್ ಅವರ ಬೆಂಬಲ ಮತ್ತು ಮಾರ್ಗದರ್ಶನದಿಂದ ಈ ಕಾರ್ಯಕ್ರಮ ಯಶಸ್ವಿಯಾಗಿದೆ. ಅವರ ದೂರದೃಷ್ಟಿ ಮತ್ತು ನಿಸ್ವಾರ್ಥ ಸೇವೆಯು ಗ್ರಾಮೀಣ ಪ್ರದೇಶದ ಮಹಿಳೆಯರ ಜೀವನದಲ್ಲಿ ಮಹತ್ತರ ಬದಲಾವಣೆ ತರಲು ಪ್ರೇರಣೆಯಾಗಿದೆ. ‘ಒಡಲ ಧ್ವನಿ ಮಹಿಳಾ ಒಕ್ಕೂಟ’ ಈ ಸಹಕಾರಕ್ಕೆ ಸದಾ ಋಣಿಯಾಗಿರುತ್ತವೆ ಎಂದು ಒಡಲ ಧ್ವನಿ ಮಹಿಳಾ ಒಕ್ಕೂಟದ ಮುಖ್ಯಸ್ಥೆ ಡಾ. ಭುವನೇಶ್ವರಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಂಗಭೂಮಿ ಅಭಿನಯ ಕಲಿಸುವುದಷ್ಟೇ ಅಲ್ಲ, ಬದುಕನ್ನೂ ಕಲಿಸುವ ಶಾಲೆ: ಶ್ರೀನಿವಾಸ ಪಾಲಹಳ್ಳಿ

ರಂಗಭೂಮಿ ಕೇವಲ ಅಭಿನಯ ಕಲಿಸುವ ವೇದಿಕೆಯಲ್ಲ. ಅದು ಬದುಕನ್ನು ಅರ್ಥಮಾಡಿಕೊಳ್ಳುವ, ಮಾನವೀಯ...

SIR ಅಕ್ರಮ ಆರೋಪ: ಎಸ್‌ಐಟಿ ತನಿಖೆಗೆ ಎಸ್‌ಡಿಪಿಐ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ...

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...