ವಿಜಯಪುರ | ಜು.13ರಂದು ಸಾಹಿತಿ ಅನಿಲ ಹೊಸಮನಿಯವರಿಗೆ ಅಭಿನಂದನಾ ಸಮಾರಂಭ

Date:

ವಿಜಯಪುರ ಜಿಲ್ಲೆಯ ಹಿರಿಯ ಪತ್ರಕರ್ತ ಹಾಗೂ ದಲಿತ ದಮನಿತರ ಧ್ವನಿ, ಸಾಹಿತಿ ಅನಿಲ ಹೊಸಮನಿ ಅವರಿಗೆ ನಗರದ ಅಂಬೇಡ್ಕ‌ರ್ ಭವನದಲ್ಲಿ ಜುಲೈ 13ರ ಭಾನುವಾರ ಬೆಳಿಗ್ಗೆ ಅಭಿನಂದನಾ ಸಮಾರಂಭ ನಡೆಯಲಿದೆ ಎಂದು ಲಡಾಯಿ ಪ್ರಕಾಶನದ ಬಸವರಾಜ ಸುಳಿಬಾವಿ ಹೇಳಿದರು.

- Advertisement -

ವಿಜಯಪುರ ನಗರದ ಬುದ್ಧ ವಿಹಾರದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಟಿ ಉದ್ದೇಶಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ವಿಜಯಪುರದ ಮೇ ಸಾಹಿತ್ಯ ಮೇಳ ಬಳಗದಿಂದ ನಡೆಯಲಿರುವ ಅನಿಲ ಎಂಬ ಬಿಸಿಲ ನೆಲದ ಸಂಘರ್ಷದ ಒಡನಾಡಿಯೊಂದಿಗೆ ಒಂದು ದಿನ ಎಂಬ ಕಾರ್ಯಕ್ರಮದಲ್ಲಿ ಬಿ. ಶ್ರೀನಿವಾಸ ಪ್ರಾಸ್ತಾವಿಕ ಭಾಷಣ ಮಾಡಲಿದ್ದಾರೆ.

ಉದ್ಘಾಟನೆಯನ್ನು ಮುಂಬಯಿಯ ವಿಜಯ ಸುರ್ವಾಡೆ ಮುಂಬಯಿ ನೇರವೇರಿಸುವರು. ಡಾ. ಮೂಡ್ನಾಕೂಡ ಚಿನ್ನಸ್ವಾಮಿಯವರು ‘ಡಾ. ಅಂಬೇಡ್ಕ‌ರ್ ಸಹವಾಸದಲ್ಲಿ’ ಪುಸ್ತಕದ 2ನೇ ಆವೃತ್ತಿ ಬಿಡುಗಡೆ ನೇರವೇರಿಸುವರು.

ಮುಖ್ಯ ಅತಿಥಿಗಳಾಗಿ ಡಾ. ಆರ್ ಸುನಂದಮ್ಮ, ರಾಜು ಅಲಗೂರ ಆಗಮಿಸುವರು. ಅಧ್ಯಕ್ಷತೆಯನ್ನು ರಾಜಶೇಖರ ಯಡಹಳ್ಳಿ ವಹಿಸುವರು. ಶೋಭಾ ಕಟ್ಟಿಮನಿ ಹೊಸಮನಿ ಉಪಸ್ಥಿತರಿರುವ. ಸುಜಾತ ಚಲವಾದಿ ಉಪನ್ಯಾಸ ನೀಡುವರು. ಮೋಹನ ಕಟ್ಟಿಮನಿ ಸಂಯೋಜಿಸುವರು. ಬಳಿಕಾ ಅಭಿಷೇಕ ಚಕ್ರವರ್ತಿಯವರಿಂದ ವಿಜಾಪುರ ಜಿಲ್ಲೆಯ ದಲಿತ ಚಳವಳಿ ಮತ್ತು ಅನಿಲ ಹೊಸಮನಿ ಎಂಬ ವಿಚಾರಗೋಷ್ಠಿ ನಡೆಸಿಕೊಡುವರು.

ಈ ಸುದ್ದಿ ಓದಿದ್ದೀರಾ? ಚಿಂತಾಮಣಿ | ಅಧಿಕಾರಿಗಳ ಕಣ್ತಪ್ಪಿಸಿ ಮುನಗನಹಳ್ಳಿ ಕೆರೆಯ ಮಣ್ಣು ಅಕ್ರಮ ‌ಸಾಗಣೆ: ಕ್ರಮಕ್ಕೆ ಒತ್ತಾಯ

ಅದಾದ ನಂತರ ಹಣಮಂತ ಚಿಂಚೋಳಿ ಇವರಿಂದ ಅನಿಲ ಹೊಸಮನಿ: ಜನಪರ ಚಳವಳಿಗಳ ಒಡನಾಟ, ಡಾ.ಓಂಕಾರ ಕಾಕಡೆ ಇವರಿಂದ ಅನಿಲ ಹೊಸಮನಿ: ಪತ್ರಿಕಾ ಬರಹ- ಬದುಕು ಎಂಬ ವಿಚಾರ ಗೋಷ್ಠಿ ನಡೆಯಲಿವೆ. ಸಾಯಂಕಾಲ ಅನಿಲ ಹೊಸಮನಿಯವರೊಂದಿಗೆ ಸಂವಾದ ಕಾರ್ಯಕ್ರಮ ನಡೆಯಲಿದೆ. ಬಳಿಕ ಗೌರವಾರ್ಪಣೆ ಮತ್ತು ಸಮಾರೋಪ ಹಾಗೂ ಒಡನಾಡಿಗಳ ಮಾತು ಕಾರ್ಯಕ್ರಮ ನಡೆಯಲಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪತ್ರಿಕಾಗೋಷ್ಟಿಯಲ್ಲಿ ಅಭಿಷೇಕ್ ಚಕ್ರವರ್ತಿ, ರಾಜಶೇಖರ ಯಡಹಳ್ಳಿ, ಚೆನ್ನು ಕಟ್ಟಿಮನಿ, ನಾಗರಾಜ ಲಂಬು, ಅಡಿವೆಪ್ಪ ಸಾಲಗಲ್ಲು, ಶ್ರೀನಾಥ ಪೂಜಾರಿ,‌ ಪ್ರಭುಗೌಡ ಪಾಟೀಲ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...