ವಿಜಯಪುರ | ಕೆಡುಕಿನ ನಿರ್ಮೂಲನೆಗೆ ಸಂಘಟಿತರಾಗಿ: ಡಾ. ಮೊಹಮ್ಮದ್ ಸಾದ್ ಬೆಳಗಾಮಿ

Date:

ಸಮಾಜದಲ್ಲಿರುವ ಕೆಡುಕುಗಳನ್ನು ನಿರ್ಮೂಲನೆಗೊಳಿಸಿ ಒಳಿತನ್ನು ಸಂಸ್ಥಾಪಿಸುವುದು ಮುಸ್ಲಿಂ ಸಮುದಾಯದ ಕರ್ತವ್ಯವಾಗಿದೆ. ಈ ಕೆಲಸವನ್ನು ಅವರು ಸಂಘಟಿತರಾಗಿ ಮಾಡಬೇಕು ಎಂದು ಜಮಾಅತೆ ಇಸ್ಲಾಮಿ ಹಿಂದ್ ರಾಜ್ಯಾಧ್ಯಕ್ಷ ಡಾ. ಮೊಹಮ್ಮದ್ ಸಾದ್ ಬೆಳಗಾಮಿ ಹೇಳಿದರು.

- Advertisement -

ವಿಜಯಪುರ ಜಿಲ್ಲೆಯ ತಾಳಿಕೋಟೆ ಪಟ್ಟಣದ ಟಿಪ್ಪು ನಗರದಲ್ಲಿರುವ ಆಲಾ ಮಸೀದಿ ಸಭಾಂಗಣದಲ್ಲಿ ಜಮಾತೆ ಇಸ್ಲಾಮೀ ಹಿಂದ್ ನಗರ ಶಾಖೆಯಿಂದ ಹಮ್ಮಿಕೊಂಡಿದ್ದ ಮುಸ್ಲಿಂ ಸಮಾಜದ ಗಣ್ಯರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

“ಪ್ರಸ್ತುತದಲ್ಲಿ ನಮ್ಮ ಸಮಾಜದಲ್ಲಿ ಸಾಮಾಜಿಕ ಕೆಡುಕುಗಳಾದ ಕೋಮುವಾದ ಭ್ರಷ್ಟಾಚಾರ ನೈತಿಕ ಅಧಿಪತನ ಸ್ವಜನಪಕ್ಷಪಾತ ಧಾರ್ಮಿಕ ಅಸಹಿಷ್ಣುತೆ ಹಾಗೂ ದ್ವೇಷವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇವು ದೇಶದ ಪ್ರಗತಿ ಹಾಗೂ ಶಾಂತಿಗೆ ಮಾರಕವಾಗಿವೆ. ಇವುಗಳನ್ನು ನಿರ್ಮೂಲನೆಗೊಳಿಸದೇ ಹೋದಲ್ಲಿ ಸದೃಢ ಭಾರತದ ನಿರ್ಮಾಣ ಅಸಾಧ್ಯವಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು.

“ದೇಶದ ಹಿತ ಚಿಂತನೆ ಎಲ್ಲರ ಕರ್ತವ್ಯವಾಗಿದೆ. ಭಾರತ ಜಗತ್ತಿನಲ್ಲಿಯೇ ಶ್ರೇಷ್ಟ ಧಾರ್ಮಿಕ ಪರಂಪರೆಯನ್ನು ಹೊಂದಿದ ದೇಶವಾಗಿದೆ. ಶತ ಶತಮಾನಗಳಿಂದ ಇಲ್ಲಿ ಎಲ್ಲ ಧರ್ಮಗಳ ಜನರೂ ಕೂಡ ಪ್ರೀತಿ ಮತ್ತು ವಿಶ್ವಾಸದಿಂದ ಬದುಕುತ್ತಿದ್ದಾರೆ. ಇದನ್ನು ಸಹಿಸದ ಕೆಲವರು ಕೇವಲ ತಮ್ಮ ಸ್ವಾರ್ಥ ಸಾಧನೆಗಾಗಿ ಜನರ ನಡುವೆ ದ್ವೇಷ ಬಿತ್ತುವ ಕೆಲಸ ಮಾಡುತ್ತಿದ್ದಾರೆ. ಇವರನ್ನು ನಿಯಂತ್ರಿಸುವ ಕೆಲಸವಾಗಬೇಕು. ನಾವೆಲ್ಲರೂ ಒಂದು ನಾವೆಲ್ಲರೂ ಭಾರತೀಯರು ಎಂಬ ಭಾವನೆ ಎಲ್ಲರಲ್ಲೂ ಬರಬೇಕಾಗಿದೆ” ಎಂದರು.

“ಮುಸ್ಲಿಂ ಸಮುದಾಯ ಇಂಥ ಸಂಕೀರ್ಣ ಸಮಯದಲ್ಲಿ ತನ್ನ ಜವಾಬ್ದಾರಿಯನ್ನು ನಿರ್ವಹಿಸಲು ಮುಂದೆ ಬರಬೇಕಾಗಿದೆ. ಜಮಾಅತೆ ಇಸ್ಲಾಮೀ ಹಿಂದ್ ಸಂಘಟನೆಯು ಮುಸ್ಲಿಂ ಸಮುದಾಯದಲ್ಲಿ ಇದರ ಕುರಿತು ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ. ಇದಕ್ಕೆ ನಿಮ್ಮೆಲ್ಲರ ಸಹಕಾರ ಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ವಿದ್ಯಾರ್ಥಿಗಳಿಗೆ, ಶಾಲೆ-ಕಾಲೇಜುಗಳ ಸಮಯಕ್ಕೆ ಸರಿಯಾಗಿ ಬಸ್ ಸೌಕರ್ಯ ಒದಗಿಸಿವಂತೆ ಎಐಡಿಎಸ್‌ಒ ಆಗ್ರಹ

ವೇದಿಕೆಯಲ್ಲಿ ಜಮಾಅತೆ ಇಸ್ಲಾಮೀ ಹಿಂದ್ ಕಾರ್ಯದರ್ಶಿ ಮಹಮ್ಮದ್ ತಲಹಾ ಬೆಂಗಳೂರು. ಬೆಳಗಾವಿ ವಿಭಾಗೀಯ ಸಂಚಾಲಕ ಎಂ ಐ ಬಡಗಣ, ಸಂಘಟನಾ ಕಾರ್ಯದರ್ಶಿ ಮಹಮ್ಮದ್ ಬಿಲಾಲ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯದ ಚರ್ಚೆ: ಅನ್ನಪೂರ್ಣ ಹೆಸರು ಮುನ್ನೆಲೆಗೆ!

ರಾಜ್ಯ ಸಚಿವ ಸಂಪುಟದಲ್ಲಿ ಸದ್ಯ ಎರಡು ಸಚಿವ ಸ್ಥಾನಗಳು ಖಾಲಿ ಉಳಿದಿದ್ದು,...

ಕೊಡಗಿನಲ್ಲಿ ಮಳೆ ಕೊರತೆ; ಭತ್ತಕ್ಕೆ ಬೆಂಕಿ ರೋಗ-ಕೀಟ ಬಾಧೆ

ಕೊಡಗು ಎಂದರೆ ಕಾಫಿ ತೋಟಗಳು, ಮೆಣಸಿನ ಬಳ್ಳಿ, ಶುಂಠಿ ಹಾಗೂ ಭತ್ತದ...

ಚಿಕ್ಕಮಗಳೂರು | ಬೇಟೆ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಯುವಕ ಸಾವು

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನ ಹಿರೇಗದ್ದೆ ಗ್ರಾಮದಲ್ಲಿ ಗುರುವಾರ ರಾತ್ರಿ ಬೇಟೆಯಾಡುತ್ತಿದ್ದ...

ಚೈತ್ರಾ ಗೋಶಾಲೆಗೆ ರೈತ ಸಂಘ ಮುತ್ತಿಗೆ; 7 ಹಸು-ಕರುಗಳ ಬಿಡುಗಡೆ

ನ್ಯಾಯಾಲಯದ ಆದೇಶವಿದ್ದರೂ ರೈತರಿಗೆ ಹಸುಗಳನ್ನು ಹಸ್ತಾಂತರಿಸದೆ ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿ,...