ವಿಜಯಪುರ | ನ. 19ರಿಂದ 25ರವರೆಗೆ ʼಶಾಂತಿ ಸೌಹಾರ್ದತೆ ಸಹಬಾಳ್ವೆʼ ಅಭಿಯಾನ

Date:

ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಕರ್ನಾಟಕ, ವಿಜಯಪುರ ಘಟಕ, ʼಶಾಂತಿ ಸೌಹಾರ್ದತೆ ಸಹಬಾಳ್ವೆ ನಮ್ಮ ಪರಂಪರೆ ಅದನ್ನು ಉಳಿಸೋಣ ಮತ್ತು ಬೆಳೆಸೋಣ’ ಎಂಬ ಘೋಷವಾಕ್ಯದಡಿಯಲ್ಲಿ ನ.19ರಿಂದ 25ರವರೆಗೆ ಅಭಿಯಾನವನ್ನು ಹಮ್ಮಿಕೊಂಡಿದೆ.

- Advertisement -

ಈ ಕುರಿತು ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಕರ್ನಾಟಕದ ಅಧ್ಯಕ್ಷ ಅಬ್ದುಲ್ ಅಮಿದ್ ಜಾವೇದ್ ಮಾತನಾಡಿ, ‘ಈ ಅಭಿಯಾನದ ಮುಖಾಂತರ ಸಮಾಜದಲ್ಲಿ ಶಾಂತಿ ಸೌಹಾರ್ದತೆ ವಾತಾವರಣ ನಿರ್ಮಿಸಲು ಸಾಧ್ಯ ಎಂಬ ಧೋರಣೆ ಮೂಡಿಸುವು ಆಶಯ ನಮ್ಮದು. ಭಾರತವು ಹಲವು ರಾಜ್ಯ, ಭಾಷೆ, ಧರ್ಮ ಹಾಗೂ ಸಂಸ್ಕೃತಿಯ ಬೀಡು. ಏಕಸಂಸ್ಕೃತಿ ಈ ದೇಶಕ್ಕೂ ಹಾಗೂ ರಾಜ್ಯಕ್ಕೂ ಅನ್ಯವಾಗಿದೆ. ವಿವಿಧತೆಯಲ್ಲಿ ಏಕತೆ ನಮ್ಮ ದೇಶದ ವಿಶೇಷತೆ’ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

‘ಪ್ರತಿ 10 ಕಿ.ಮೀಗೆ ವೈವಿಧ್ಯಮಯವಾದ ಸಂಸ್ಕೃತಿಯನ್ನು ನಾವು ಕಾಣಬಹುದು. ಬಹು ಸಂಸ್ಕೃತಿ ಈ ದೇಶದ ಜೀವಾಳ. ಇಲ್ಲಿನ ಭಿನ್ನತೆಯನ್ನು ಎತ್ತಿ ಹಿಡಿದು ಅದರಲ್ಲಿ ಸೌಹಾರ್ದತೆಯ, ಸಹಬಾಳ್ವೆಯ ಪಾಠಗಳನ್ನು ಹುಡುಕುವ ಮೂಲಕ ಒಂದು ಉತ್ತಮ ಸಮಾಜ ನಿರ್ಮಾಣ ಸಾಧ್ಯ’ ಎಂದರು.

‘ವಿಚಾರ ಸಂಕಿರಣ, ಜನಜಾಗೃತಿ, ಚಾವಡಿ ಚರ್ಚೆ ಮುಂತಾದ ಹಲವಾರು ಕಾರ್ಯಕ್ರಮಗಳ ಮೂಲಕ ಈ ಅಭಿಯಾನವನ್ನು ಯಶಸ್ವಿಗೊಳಿಸಲು ಪ್ರಯತ್ನಿಸಲಾಗುತ್ತಿದೆ. ಎಲ್ಲಾ ಸಮಾನಮನಸ್ಕರು ಅಭಿಯಾನದಲ್ಲಿ ಭಾಗವಹಿಸಿ’ ಎಂದು  ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...