ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಹಾಗೂ ಪಿಂಚಣಿದಾರರ ಅಹವಾಲು ಆಲಿಕೆ ಹಾಗೂ ಅರ್ಹರಿಗೆ ಪಿಂಚಣಿ ಮಂಜೂರು ಮಾಡಲು ಡಿಸೆಂಬರ್ 7ರಂದು ಜಿಲ್ಲೆಯ 13 ಗ್ರಾಮಗಳಲ್ಲಿ ಹೋಬಳಿ ಮಟ್ಟದ ಪಿಂಚಣಿ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ವಿಜಯಪುರ ಜಿಲ್ಲಾಧಿಕಾರಿ ಟಿ ಭೂಬಾಲನ್ ತಿಳಿಸಿದ್ದಾರೆ.
ಪ್ರಕಟಣೆಯಲ್ಲಿ ನೀಡಿರುವ ಅವರು, ಡಿಸೆಂಬರ್ 7ರಂದು ಬೆಳಿಗ್ಗೆ 11 ಗಂಟೆಗೆ ತಾಳಿಕೋಟೆ ತಾಲೂಕಿನ ನೀರಲಗಿ ಗ್ರಾಮದ ಹೊಳೆ ಹುಚ್ಚೇಶ್ವರ ದೇವಸ್ಥಾನದಲ್ಲಿ ವಿಜಯಪುರ ಉಪವಿಭಾಗಾಧಿಕಾರಿಗಳು, ಸಿಂದಗಿ ತಾಲೂಕಿನ ಸುಂಗಠಾಣ ಗ್ರಾಮದ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಇಂಡಿ ಉಪವಿಭಾಗಾಧಿಕಾರಿಗಳು ಪಿಂಚಣಿ ಅದಾಲತ್ ನಡೆಸಲಿದ್ದಾರೆ.
ವಿಜಯಪುರ ತಾಲೂಕಿನ ಜಂಬಗಿ ಗ್ರಾಮದ ದ್ಯಾವತರಾಯ ಮುತ್ಯಾ ದೇವಸ್ಥಾನದಲ್ಲಿ ವಿಜಯಪುರ ಗ್ರೇಡ್-2 ತಹಶೀಲ್ದಾರ್, ಅಳಗಿನಾಳ ಗ್ರಾಮದ ಹನುಮಾನ ದೇವಸ್ಥಾನದಲ್ಲಿ ತಿಕೋಟಾ ಗ್ರೇಡ್-2 ತಹಶೀಲ್ದಾರ್, ಕಾಖಂಡಕಿ ಗ್ರಾಮ ಪಂಚಾಯಿತಿಯಲ್ಲಿ ಬಬಲೇಶ್ವರ ಗ್ರೇಡ್-2 ತಹಶೀಲ್ದಾರ್, ರೆಬಿನಾಳ ಗ್ರಾಮದ ಶ್ರೀಹನುಮಾನ ದೇವಸ್ಥಾನದಲ್ಲಿ ಬಸವನಬಾಗೇವಾಡಿ ಗ್ರೇಡ್-2 ತಹಶೀಲ್ದಾರ್ ಅವರು ಹಾಗೂ ಶಿಕಳವಾಡಿಯ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ನಿಡಗುಂದಿ ಗ್ರೇಡ್-2 ತಹಶೀಲ್ದಾರ್ ಅವರು ಪಿಂಚಣಿ ಅದಾಲತ್ ನಡೆಸಲಿದ್ದಾರೆ.
ಕುರಬರದಿನ್ನಿ ಸಭಾಭವನದಲ್ಲಿ ಕೊಲ್ಹಾರ ತಹಶೀಲ್ದಾರರು, ನಾಗಬೇನಾಳ ತಾಂಡಾದ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಮುದ್ದೇಬಿಹಾಳ ಗ್ರೇಡ್-2 ತಹಶೀಲ್ದಾರ್, ನಾದ ಬಿ ಕೆ ಗ್ರಾಮದ ಲಕ್ಷ್ಮೀ ದೇವಸ್ಥಾನದಲ್ಲಿ ಇಂಡಿ ಗ್ರೇಡ್-2 ತಹಶೀಲ್ದಾರ್, ಸಾತಲಗಾಂವ ಪಿಬಿಯ ಶಿವಯೋಗೇಶ್ವರ ದೇವಸ್ಥಾನದಲ್ಲಿ ಚಡಚಣ ಗ್ರೇಡ್-2 ತಹಶೀಲ್ದಾರ್, ಬೊಮ್ಮನಜೋಗಿ ಹನುಮಾನ ದೇವಸ್ಥಾನದಲ್ಲಿ ದೇವರಹಿಪ್ಪರಗಿ ಗ್ರೇಡ್-2 ತಹಶೀಲ್ದಾರ್ ಅವರು ಹಾಗೂ ಜಟ್ನಾಳ ಗ್ರಾಮದ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿ ಆಲಮೇಲ ತಹಶೀಲ್ದಾರ್ ಅವರು ಪಿಂಚಣಿ ಅದಾಲತ್ ನಡೆಸಲಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬೀದರ್ | ಅನುಭವ ಮಂಟಪ ವಚನ ವಿಶ್ವವಿದ್ಯಾಲಯದ ಕೇಂದ್ರವಾಗಲಿ : ಗೊ.ರು. ಚನ್ನಬಸಪ್ಪ
“ಪಿಂಚಣಿ ಅದಾಲತ್‌ನಲ್ಲಿ ಪರಿಗಣಿಸಬೇಕಾದ ಗ್ರಾಮಗಳ ಸಂಪೂರ್ಣ ಪಿಂಚಣಿದಾರರ ಮಾಹಿತಿಯೊಂದಿಗೆ ಎಲ್ಲ ಗ್ರಾಮಗಳ ಗ್ರಾಮ ಲೆಕ್ಕಿಗರು, ಪಂಚಾಯತ್ ಕಾರ್ಯದರ್ಶಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಅಂಚೆ ಕಚೇರಿ ಸಿಬ್ಬಂದಿಗಳು ಕಡ್ಡಾಯವಾಗಿ ಹಾಜರಿರಲಿದ್ದು, ಪಿಂಚಣಿದಾರರು ಅದಾಲತ್‌ನಲ್ಲಿ ಭಾಗವಹಿಸಿ ತಮ್ಮ ಸಮಸ್ಯೆ ಪರಿಹರಿಸಿಕೊಳ್ಳಬಹುದಾಗಿದೆ” ಎಂದು ತಿಳಿಸಿದ್ದಾರೆ.