ವಿಜಯಪುರ | ದೇಶದ ಹಿತಕ್ಕಾಗಿ ಜನರು ಬದಲಾವಣೆ ಬಯಸಿದ್ದಾರೆ: ಮಾಜಿ ಸಚಿವ ವಿನಯಕುಮಾರ ಸೊರಕೆ

Date:

ಜೆಡಿಎಸ್ ಬಿಜೆಪಿ ಜೊತೆ ಮೈತ್ರಿ ಆಗಿದ್ದರಿಂದ ಈ ಬಾರಿ ಜೆಡಿಎಸ್ ಮುಕ್ತ ಕರ್ನಾಟಕ ಆಗಲಿದೆ. ದೇಶದ ಹಿತಕ್ಕಾಗಿ ಜನರು ಬದಲಾವಣೆ ಬಯಸಿದ್ದಾರೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಚಿವ ವಿನಯಕುಮಾರ ಸೊರಕೆ ಅಭಿಪ್ರಾಯಪಟ್ಟರು.

- Advertisement -

ವಿಜಯಪುರ ನಗರದಲ್ಲಿ ಜಿಲ್ಲಾ ಕಾಂಗ್ರೆಸ್ ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, “ಕರ್ನಾಟಕಕ್ಕೆ ಬಿಜೆಪಿ ಸರ್ಕಾರ ಅನ್ಯಾಯ ಧೋರಣೆ ಮಾಡಿದ್ದು, ನಮಗೆ ತೆರಿಗೆಯಲ್ಲಿ ನ್ಯಾಯವಾಗಿ ಸಿಗಬೇಕಾದ ಪಾಲು ಸಿಗಲಿಲ್ಲ. ಬರಗಾಲ ಸಂದರ್ಭದಲ್ಲಿ ಪರಿಹಾರ ಕೊಡದೆ ಇರುವುದು, ದ್ವೇಷ ಹರಡುವುದು ರಾಜಕೀಯ ಲಾಭವನ್ನು ಪಡೆದುಕೊಳ್ಳುವುದು ಬಿಜೆಪಿಯ ಚಾಳಿಯಾಗಿದೆ” ಎಂದು ಟೀಕಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

“ನಾವು ಕೊಟ್ಟಿರುವ 5 ಗ್ಯಾರಂಟಿಗಳನ್ನು ಘೋಷಣೆ ಮಾಡಿರುವುದು ನುಡಿದಂತೆ ನಡೆದ ಸರ್ಕಾರ ಯಾವುದಾದರೂ ಇದ್ದರೆ ಅದು ಕಾಂಗ್ರೆಸ್ ಸರ್ಕಾರ. ಹಾಗಾಗಿ ಕರ್ನಾಟಕ ಭಾರತದಲ್ಲಿಯ ಅತಿ ಶ್ರೇಷ್ಟ 5 ಗ್ಯಾರಂಟಿಗಳನ್ನು ಜಾರಿ ಮಾಡಿ ಪ್ರತಿಯೊಬ್ಬ ಪ್ರಜೆಗೆ ತಲುಪುತ್ತಿರುವುದು ಸಾಧ್ಯವಾಗಿದೆ” ಎಂದರು.

“ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಸದೃಢವಾಗಿದೆ. ಕೇಂದ್ರದಲ್ಲಿಯೂ ಮನಮೋಹನ್‌ ಸಿಂಗ್‌ರವರ ಸರ್ಕಾರ ಮಾಡಿದ ಸಾಧನೆ ನೋಡಿದರೆ ಈಗಿನ ಬಿಜೆಪಿ ಸರ್ಕಾರದ ಸರ್ವಾಧಿಕಾರ ಧೋರಣೆಯಿಂದ ಜನ ಬೇಸತ್ತು ಹೋಗಿದ್ದಾರೆ. ಸುಳ್ಳು ಭರವಸೆಗಳನ್ನು ನೀಡುತ್ತ ಜನರ ಭಾವನೆ ಕೆರಳಿಸಿದ್ದಾರೆ. ಹೀಗಾಗಿ ಕರ್ನಾಟಕದಲ್ಲಿ ನಮ್ಮ ಕಾಂಗ್ರೆಸ್‌ನ ಅತಿ ಹೆಚ್ಚು ಸಂಸದರು ಜಯಶಾಲಿಗಳಾಗಲಿದ್ದಾರೆ” ಎಂದು ಹೇಳಿದರು.

“ರೈತರ, ಮಹಿಳೆಯರ, ಯುವಕರ ಹಾಗೂ ಶ್ರಮಿಕರ ಸಮಸ್ಯೆಗಳ ಬಗ್ಗೆ ನಾವು ಕೇಂದ್ರ ಪ್ರಣಾಳಿಕೆಯಲ್ಲಿ ಮಾನ್ಯತೆ ನೀಡುತ್ತಿದ್ದೇವೆ. ಅದನ್ನೂ ನಾವು ಕೊಡುತ್ತೇವೆ. ಎಂಎಸ್‌ಪಿ, ನಿರುದ್ಯೋಗ ಯುವಜನರಿಗೆ 2 ಕೋಟಿ ಉದ್ಯೋಗ ಕೊಡುವುದು, 15 ಲಕ್ಷ ರೂ ಕಪ್ಪುಹಣ ತರುವುದು ಸೇರಿದಂತೆ ಎಲ್ಲ ಆಶ್ವಾಸನೆಗೆ ನಮ್ಮ ಪ್ರಧಾನಿಗಳು ವಿಫಲರಾಗಿದ್ದಾರೆ. ಇವರ ಸಾಧನೆ ಶೂನ್ಯವಾಗಿದೆ. ಇಂದಿನ ಯುವಪೀಳಿಗೆ ಎಲ್ಲವನ್ನು ಅರಿತಿದ್ದು, ಈ ಚುನಾವಣೆಯಲ್ಲಿ ಪಾಠ ಕಲಿಸಲಿದ್ದಾರೆ” ಎಂದರು.

“ವಿಜಯಪುರ ಜಿಲ್ಲೆಯ ಹಿಂದಿನ ಬಿಜೆಪಿ ಸಂಸದರು ಒಂದೇ ಒಂದು ಬಾರಿಯೂ ಸಂಸತ್‌ನಲ್ಲಿ ಭಾಗಿಯಾಗಿಲ್ಲ. ಸ್ಥಳೀಯ ಸಮಸ್ಯೆಗಳನ್ನು ಬಗೆಹರಿಸಿಲ್ಲ. ಸ್ಮಾರ್ಟ್‌ಸಿಟಿ, ದತ್ತುಗ್ರಾಮದಂತಹ ಯೋಜನೆ ಅನುಷ್ಠಾನಗೊಳಿಸಿಲ್ಲ. 3 ಬಾರಿ ಸಂಸದರಾದರೂ ಕೇವಲ ಮೋದಿ ಹೆಸರು ಹೇಳಿ ಆರಿಸಿ ಬಂದು ಜಿಲ್ಲೆಯ ಜನತೆಗೆ ದ್ರೋಹ ಬಗೆದಿದ್ದಾರೆ” ಎಂದು ಆರೋಪಿಸಿದರು.

ನೀರಾವರಿಯಂತಹ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಸಿಕ್ಕಿಲ್ಲ. ಪ್ರವಾಸೋದ್ಯಮ ಬೆಳವಣಿಗೆ ಆಗಿಲ್ಲ. ಬರ ಹಣೆಪಟ್ಟಿ ಅಳಿಸುವಲ್ಲಿ ವಿಫಲರಾದ ಜಿಗಜಿಣಗಿ ಮತ್ತೇ ಮೋದಿ ಮುಖ ನೋಡಿ ಮತ ಕೇಳುತ್ತಿರುವುದು ನಾಚಿಕೆಗೇಡಿನ ಸಂಗತಿ” ಎಂದು ಹರಿಹಾಯ್ದರು.

“ನಾವು ವಿಜಯಪುರದಲ್ಲಿ ಒಳ್ಳೆಯ ಅಭ್ಯರ್ಥಿಗಳನ್ನು ನೀಡಿದ್ದೇವೆ. ವಿಜಯಪುರದ ಅಭಿವೃದ್ಧಿ ಮಾಡುವುದೇ ಮುಖ್ಯ ಗುರಿಯಾಗಿದೆ. ರಾಜ್ಯದಲ್ಲಿ ಸಾಕಷ್ಟು ಮತದಾರರು ಬದಲಾವಣೆ ಬಯಸಿರುವುದನ್ನು ನಾವು ಕೇಳಿದ್ದೇವೆ. ಬಿಜೆಪಿಯ ಶೇ.10ರಿಂದ 15ರಷ್ಟು ಮತಗಳನ್ನು ನಾವು ಹೆಚ್ಚು ತೆಗೆದುಕೊಳ್ಳಲಿದ್ದೇವೆ. 20ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಸನ್ನಿವೇಶವಿದೆ” ಎಂದು ವಿನಯಕುಮಾರ ಸೊರಕೆ ಹೇಳಿದರು.

ಕೆಪಿಸಿಸಿ ವಕ್ತಾರೆ ಹಾಗೂ ಮಾಜಿ ಸಂಸದ ತೇಜಶ್ವಿನಿ ಗೌಡ ಮಾತನಾಡಿ, “ರಾಜ್ಯದಲ್ಲಿ ನಾವು ನುಡಿದಂತೆ ೫ ಗ್ಯಾರಂಟಿಗಳನ್ನು ಅನುಷ್ಠಾನ ಮಾಡಿದ್ದು, ಇದು ರಾಜ್ಯದ ಪ್ರತಿಯೊಬ್ಬರಿಗೂ ಪ್ರತಿ ಮನೆಗೂ ಯೋಜನೆಗಳು ತಲುಪುತ್ತಿವೆ” ಎಂದರು.

ಈ ಸುದ್ದಿ ಓದಿದ್ದೀರಾ? ಉಡುಪಿ | ಕಾರ್ಕಳ ಪರಶುರಾಮ ಮೂರ್ತಿ ಸಾಕ್ಷಿ ನಾಶಕ್ಕೆ ಯತ್ನ: ಉದಯ ಕುಮಾರ್ ಶೆಟ್ಟಿ ಆರೋಪ

“ದೇವೆಗೌಡರು ಬಿಜೆಪಿಯ ಜೊತೆ ಮೈತ್ರಿ ಮಾಡಿಕೊಳ್ಳುವ ಭರದಲ್ಲಿ ಜೆಡಿಎಸ್ ಅಸ್ತಿತ್ವವನ್ನೇ ಅಳಿಸಿ ಹಾಕಿದ್ದಾರೆ” ಎಂದರು.

ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಠೋಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜನ ಲೋಣಿ, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಮಹ್ಮದ್ ರಫೀಕ್ ಟಪಾಲ್, ಕೆಪಿಸಿಸಿ ಸದಸ್ಯ ಅಬ್ದುಲ್ ಹಮೀದ್ ಮುಶ್ರೀಫ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರುಕ್ಸಾನಾ ಉಸ್ತಾದ್, ಐ ಎಂ ಇಂಡಿಕರ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ‘SIR’ ವಿರುದ್ಧ ಮಾನಸಗಂಗೋತ್ರಿಯಲ್ಲಿ ಪ್ರತಿಭಟನಾ ಜಾಥಾ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಸಂವಿಧಾನದ...

ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ: ಸಿಎಂ ಡಿ ಕೆ ಶಿವಕುಮಾರ್

“ಕರಾವಳಿಯ ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ”...

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್‌ನಲ್ಲಿ ಮಹಿಳಾ ಕಾರ್ಮಿಕರ ಸಾವು: ಸಮಗ್ರ ತನಿಖೆಗೆ ಸಿಐಟಿಯು ಒತ್ತಾಯ

ನರಸಾಪುರ ಕೈಗಾರಿಕಾ ಪ್ರದೇಶದ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯಲ್ಲಿ ಮಹಿಳಾ ಕಾರ್ಮಿಕರ ಸಾವಿನ...

ಮಹಿಳೆಯರ ಸ್ವಾವಲಂಬನೆಗೆ ಬಿ.ಎಸ್ ಡಬ್ಲ್ಯೂ ಹೊಲಿಗೆ ತರಬೇತಿ ಶಿಬಿರ ಪೂರಕ: ರಾಮಕೃಷ್ಣ

"ಮಹಿಳೆಯರು ಕೌಶಲ್ಯಾಧಾರಿತ ತರಬೇತಿಯನ್ನು ಪಡೆದು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಉಚಿತ ಹೊಲಿಗೆ ತರಬೇತಿ...