ಮುದ್ದೇಬಿಹಾಳ ತಾಲೂಕಿನ ಎಪಿಎಂಸಿ ಯಾರ್ಡ್ ಗ್ಯಾಸ್ ಸಿಲೆಂಡರ್ ಏಜೆನ್ಸಿ ಮುಂದುಗಡೆ ನೂರಾರು ಗೃಹಿಣಿಯರು ಸುಳ್ಳು ಸುದ್ದಿಗೆ ಬಲಿಯಾಗಿ ಬೆಳ್ಳಂ ಬೆಳಿಗ್ಗೆ ಎಲ್ಲ ಕೆಲಸಗಳನ್ನು ಬಿಟ್ಟು ಇ-ಕೆವೈಸಿ ಮಾಡಿಸಲು ಬಂದಿದ್ದೇವೆಂದು ಹೇಳಿದ ಸಾರ್ವಜನಿಕರು ವಾಸ್ತವ ತಿಳಿಸಿದ ಕೂಡಲೇ ಸುಳ್ಳು ಸುದ್ದಿ ಹರಡುವವರ ವಿರುದ್ಧ ಇಡಿ ಶಾಪ ಹಾಕಿದರು.
ಡಿಸೆಂಬರ್ 31ರ ಒಳಗಡೆ ಗ್ಯಾಸ್ ಸಂಪರ್ಕ ಇದ್ದವರು ತಮ್ಮ ಏಜೆನ್ಸಿ ಬಳಿ ಹೋಗಿ ಇ-ಕೆವೈಸಿ ಮಾಡಿಸಬೇಕು. ಮಾಡಿಸಿದವರಿಗೆ ಜನವರಿ 1ರಿಂದ ಸಬ್ಸಿಡಿ ಬರುತ್ತದೆ. ಈಗ ಇರುವ ಸಿಲೆಂಡರಿಗೆ ₹93 ರಿಂದ ₹500 ಸಿಗುತ್ತದೆ. ಇ-ಕೆವೈಸಿ ಮಾಡದಿದ್ದರೆ ಸಬ್ಸಿಡಿ ರಹಿತವಾಗಿ ಕಮರ್ಷಿಯಲ್ ಆಗಿ ಮಾರ್ಪಟ್ಟು ₹1,400ಕ್ಕೆ ಸಿಲಿಂಡರ್ ಪಡೆದುಕೊಳ್ಳಬೇಕಾಗುತ್ತದೆಂಬ ಸುಳ್ಳು ಸುದ್ದಿಗೆ ಸ್ಪಷ್ಟೀಕರಣ ದೊರೆತಿದೆ.
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಎಪಿಎಂಸಿ ಯಾರ್ಡ್ ಗ್ಯಾಸ್ ಸಿಲೆಂಡರ್ ಏಜೆನ್ಸಿ ಎದುರು ಇ-ಕೆವೈಸಿ ಮಾಡಿಸಲು ಸ್ಥಳಿಯರು ಮುಗಿಬಿದ್ದಿದ್ದರು. ಈ ಹಿನ್ನೆಲೆಯಲ್ಲಿ ಕವಿತಾ ಎಂಟರ್‌ಪ್ರೈಸಸ್ ಗ್ಯಾಸ್ ಏಜೆನ್ಸಿಯ ನಿರ್ವಾಹಕ ವೆಂಕಟೇಶ್ ಪ್ರತಿಕ್ರಿಯೆ ನೀಡಿದ್ದು, “ಉಜ್ವಲ ಯೋಜನೆ ಅಡಿ ಸಬ್ಸಿಡಿ ಪಡೆಯುತ್ತಿರುವ ಗ್ರಾಹಕರು ಮಾತ್ರ ಡಿಸೆಂಬರ್ 31ರ ಒಳಗೆ ಇ-ಕೆವೈಸಿ ಮಾಡಿಸಬೇಕು. ಉಳಿದ ಗ್ರಾಹಕರು ಇ-ಕೆವೈಸಿ ಮಾಡಿಸಬೇಕಾದ ಅಗತ್ಯವಿಲ್ಲ” ಎಂದು ಸ್ಪಷ್ಟನೆ ನೀಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಬಿಸಿಯೂಟ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕಿ ಹೇಮಲತಾ ಅವರು ಸುದ್ದಿಗಾರರೊಂದಿಗೆ ಮಾತನಾಡಿ, “ಇ-ಕೆವೈಸಿ ಮಾಡಿದ ಕ್ಷಣ ₹500ಕ್ಕೆ ಗ್ಯಾಸ್ ಸಿಲಿಂಡರ್ ಸಿಗುತ್ತದೆ ಎಂಬುದು ಸುಳ್ಳು ಸುದ್ದಿ. ವಾಟ್ಸಪ್‌ನಲ್ಲಿ ಹರಿದಾಡುತ್ತಿರುವ ಸಂದೇಶದಲ್ಲಿ ಉರುಳಿಲ್ಲ. ಉಜ್ವಲ ಯೋಜನೆಯ ಗ್ರಾಹಕರಿಗೆ ಮಾತ್ರ ಇ-ಕೆವೈಸಿ ಕಡ್ಡಾಯವಾಗಿದೆ. ಉಳಿದ ಗ್ರಾಹಕರು ಗೊಂದಲಕ್ಕೆ ಒಳಗಾಗಬಾರದು” ಎಂದು ತಿಳಿಸಿದ್ದಾರೆ.