ವಿಜಯಪುರ | ಶಿಕ್ಷಕನ ಮೇಲೆ ಪೋಲಿಸ್ ಪೇದೆಯ ಗೂಂಡಾ ವರ್ತನೆ; ಆರೋಪ

Date:

ನಿವೇಶನ ಒತ್ತುವರಿಗೆ ಸಂಬಂಧಿಸಿದಂತೆ ಪೊಲೀಸ್‌ ಪೇದೆಯೋರ್ವ ಸರ್ಕಾರಿ ಶಾಲೆಯ ಶಿಕ್ಷಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿಸಿದ್ದು, ಹಲ್ಲೆಗೆ ಯತ್ನಿಸಿರುವ ಘಟನೆ ವಿಜಯಪುರ ನಗರದ ಎಂ ಬಿ ಪಾಟೀಲ ಕಾಲೋನಿಯಲ್ಲಿ ನಡೆದಿದೆ ಎಂದು ಆರೋಪಿಸಲಾಗಿದೆ.

- Advertisement -

ಶಿಕ್ಷಕ ಚಿದಾನಂದಗೆ ವಿಜಯಪುರ ಗ್ರಾಮೀಣ ಠಾಣೆಯ ಪೊಲೀಸ್ ಪೇದೆ ಅಶೋಕ ಮಿಂಚನಾಳ ಜೀವ ಬೆದರಿಕೆ ಹಾಕಿರುವ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ನಗರದ ಎಂ.ಬಿ ಪಾಟೀಲ ಬಡಾವಣೆಯಲ್ಲಿ ಅಕ್ಕಪಕ್ಕದಲ್ಲಿ ನಿವೇಶನ ಹೊಂದಿರುವ ತಿಕೋಟಾ ತಾಲೂಕಿನ ಬರಟಗಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಶಿಕ್ಷಕ ಚಿದಾನಂದ ಜಿಗಜೇವಣಿ ಮತ್ತು ವಿಜಯಪುರ ಗ್ರಾಮೀಣ ಪೋಲಿಸ್ ಠಾಣೆಯ ಪೇದೆ ಅಶೋಕ ಮಿಂಚನಾಳ ನಡುವೆ ನಿವೇಶನ ಒತ್ತುವರಿಗೆ ಸಂಬಂಧಿಸಿದಂತೆ ವಿವಾದ ಏರ್ಪಟ್ಟಿದೆ. ಈ ವೇಳೆ ಪೊಲೀಸ್‌ ಪೇದೆ ಶಿಕ್ಷಕನಿಗೆ ಅಶ್ಲೀಲ ಪದಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ವಿಜಯಪುರ ನಗರದಲ್ಲಿ ಗುರುವಾರ ಮಾಧ್ಯಮದ ಎದುರು ಮಾತನಾಡಿದ ಶಿಕ್ಷಕ ಚಿದಾನಂದ ಅವರು, “ಗ್ರಾಮೀಣ ಪೊಲೀಸ ಠಾಣೆಯ ಪಿ.ಸಿ ಅಶೋಕ ಮಿಂಚನಾಳ ನಿವೇಶನದ ವಿಚಾರಕ್ಕಾಗಿ ನನ್ನ ಮೇಲೆ ದಬ್ಬಾಳಿಕೆ ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ.

“ಪೊಲೋಸ್‌ ಪೇದೆ ಅಶೋಕ ಮಿಂಚಿನಹಾಳ ನನ್ನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆಗೆ ಯತ್ನ ಮಾಡಿದ್ದು, ಜೀವ ಬೆದರಿಕೆ ಹಾಕಿರುವುದರಿಂದ ನಾನು ಪೊಲೀಸ್ ಇಲಾಖೆಗೆ ದೂರು ನೀಡಿದ್ದೇನೆ. ಅಶೋಕನ ಮೇಲೆ ಎಸ್‌ಪಿ ಅವರು ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ನಾನು ರಾಜ್ಯಪಾಲರಿಗೆ ಪತ್ರ ಬರೆಯುತ್ತೇನೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಸರ್ಕಾರಿ ಜಾಗದಲ್ಲಿ ಅಂಗಡಿ ಹಾಕಿದ್ದವರ ಮೇಲೆ ಕಾಂಗ್ರೆಸ್ ಮುಖಂಡ ಗೂಂಡಾಗಿರಿ: ಆರೋಪ

“ಸಮಾಜವನ್ನು ರಕ್ಷಿಸಬೇಕಾದ ಆರಕ್ಷಕರೇ ಭಕ್ಷಕರಾದಾಗ ನಾವು ಸಮಾಜದಲ್ಲಿ ಬದುಕುವುದು ಹೇಗೆ? ನಾನೊಬ್ಬ ಶಿಕ್ಷಕನಾಗಿ ಪೊಲೀಸ್‌ ಠಾಣೆ ಕುರಿತು ಮಕ್ಕಳಿಗೆ ಏನೆಂದು ಪಾಠ ಮಾಡಲಿ? ಪೊಲೀಸರು ಗೂಂಡಾಗಳೆಂದೋ ಅಥವಾ ಸಮಾಜದ ರಕ್ಷಕರೆಂದೋ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...