ವಿಜಯಪುರ | ದರೋಡೆಕೋರರ ಮೇಲೆ ಗುಂಡಿನ ದಾಳಿ; ಓರ್ವ ಪೊಲೀಸರ ವಶ, ನಾಲ್ವರು ಪರಾರಿ

Date:

Advertisements

ವಿಜಯಪುರ ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದ್ದು, ಬುಧವಾರ ರಾತ್ರಿ ಜೈನಾಪುರ ನಗರದ ಸಂತೋಷ್ ಎಂಬುವರ ಮನೆಗೆ ನುಗ್ಗಿದ್ದ ದರೋಡೆಕೋರರ ಮೇಲೆ ಪೊಲೀಸರು ಗುಂಡು ಹಾರಿಸಿದ್ದು, ಓರ್ವನನ್ನು ವಶಕ್ಕೆ ಪಡೆದಿದ್ದಾರೆ. ನಾಲ್ವರು ದರೋಡೆಕೋರರು ಪರಾರಿಯಾಗಿದ್ದಾರೆ.

ಮನೆಗೆ ನುಗ್ಗಿದ ದರೋಡೆಕೋರರು ಚಾಕುವಿನಿಂದ ಹಲ್ಲೆ ಮಾಡಿದ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ವಿಜಯಪುರ ಎಸ್‌ಪಿ ಲಕ್ಷ್ಮಣ್ ನಿಂಬರಗಿ ವಿಶೇಷ ತಂಡಗಳನ್ನು ರಚನೆ ಮಾಡಿದ್ದರು. ಅಂತರಾಜ್ಯ ದರೋಡೆಕೋರರ ತಂಡ ನಗರದ ಹೊರಭಾಗದಲ್ಲಿ ಬೀಡು ಬಿಟ್ಟಿದೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿದ್ದಾರೆ.

ನಸುಕಿನ ಜಾವದಿಂದಲೇ ಕಾರ್ಯಾಚರಣೆಗೆ ಇಳಿದಿದ್ದ ಖಾಕಿಪಡೆ, ಟೋಲ್ ಪ್ಲಾಜಾ ಬಳಿ ಹೆದ್ದಾರಿಯಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಐವರು ದರೋಡೆಕೋರರ ತಂಡವನ್ನು ಬೆನ್ನಟ್ಟಿದ್ದರು. ಈ ವೇಳೆ ದರೋಡೆಕೋರರು ಬೈಕ್ ಅಲ್ಲೇ ಬಿಟ್ಟು ಜಮೀನಿನತ್ತ ಓಡಿದ್ದರು. ಈ ವೇಳೆ ಗೋಳಗುಮ್ಮಟ ಠಾಣೆಯ ಸಿಪಿಐ ಮಲ್ಲಯ್ಯ ಮಠಪತಿ ಪಿಎಸ್ಐ ಘೋರಿ ಎಂಬುವವರು 5 ಸುತ್ತು ಗುಂಡು ಹಾರಿಸಿದ್ದಾರೆ. ಈ ವೇಳೆ ದರೋಡೆಕೋರರು ಸ್ಥಳದಿಂದ ಪರಾರಿಯಾಗಿದ್ದಾರೆ.

Advertisements

ನಸುಕಿನಲ್ಲಿ ಕಣ್ಮರೆಯಾಗಿದ್ದ ಗ್ಯಾಂಗ್ ಪತ್ತೆಗಾಗಿ ಪೊಲೀಸರು ಶೋಧ ಮುಂದುವರೆಸಿದ್ದರು. ಈ ವೇಳೆ, ಪೊಲೀಸರ ಗುಂಡೇಟಿನಿಂದ ದರೋಡೆಕೋರ ಜಮೀನಿನಲ್ಲಿಯೇ ಬಿದ್ದಿದ್ದ ಎಂದು ತಿಳಿದುಬಂದಿದೆ.

WhatsApp Image 2025 01 17 at 1.17.17 PM

ಪೊಲೀಸರು, ಮಧ್ಯಪ್ರದೇಶ ಮೂಲದ ಓರ್ವ ದರೋಡೆಕೋರನನ್ನು ವಶಕ್ಕೆ ಪಡೆದಿದ್ದಾರೆ. ದರೋಡೆಕೋರ ಮಹೇಶ ಎಂಬಾತನ ಕಾಲಿಗೆ ಮೂರು ಗುಂಡೇಟು ಬಿದ್ದಿದ್ದು, ಆತನನ್ನು ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಇನ್ನುಳಿದ ದರೋಡೆಕೋರರು ಪರಾರಿಯಾಗಿದ್ದಾರೆ.

ಈ ಸುದ್ದಿ ಓದಿದ್ದೀರ? ಶಿವಮೊಗ್ಗ | ಸರ್ಕಾರದ ಪತ್ರಿಕಾ ಭವನಕ್ಕೆ ಆಡಳಿತಾಧಿಕಾರಿ ನೇಮಿಸುವಂತೆ ಜಿಲ್ಲಾಧಿಕಾರಿಗೆ ಮನವಿ

ಘಟನಾ ಸ್ಥಳಕ್ಕೆ ಎಸ್‌ಪಿ ಲಕ್ಷ್ಮಣ್ ನಿಂಬರಗಿ, ಹೆಚ್ಚುವರಿ ಎಸ್‌ಪಿ ರಾಮನಗೌಡ ಹಟ್ಟಿ ಸೇರಿದಂತೆ ಇತರ ಅಧಿಕಾರಿಗಳು ಭೇಟಿ, ಪರಿಶೀಲನೆ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X