ವಿಜಯಪುರ | ಕಳಪೆ ಕಾಮಗಾರಿ: ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಧರಣಿ

Date:

Advertisements

ವಿಜಯಪುರ ಜಿಲ್ಲೆಯ ಮುಳುವಾಡ ಏತ ನೀರಾವರಿ ಯೋಜನೆ ಹಂತ 3ರ ಅಡಿಯಲ್ಲಿ ಬರುವ ಹೂವಿನ ಹಿಪ್ಪರಗಿ ಶಾಖ ಕಾಲುವೆಯ ವಿತರಣಾ ಕಾಲುವೆ ನಂ. 1 ರಿಂದ 7ರ ಅಡಿ ಬರುವ ಲ್ಯಾಟರಲ್ ಕಾಲುವೆಯ ಕಾಮಗಾರಿಗಳು ಕಳಪೆಯಾಗಿವೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಇಲ್ಲಿಯ ಮುಖ್ಯ ಇಂಜಿನಿಯರ್ ಕಚೇರಿ ಬಳಿ ಧರಣಿ ಕೈಗೊಳ್ಳಲಾಗಿದೆ.

ಭಾರತೀಯ ದ್ರಾವಿಡ ದಲಿತ ಸೇನಾ ನೇತೃತ್ವದಲ್ಲಿ ನಡೆಯುತ್ತಿರುವ ಧರಣಿ ಸತ್ಯಾಗ್ರಹ ಮೂರು ದಿನ ಪೂರ್ಣಗೊಳಿಸಿತು. ಸರ್ಕಾರದ ಅಂದಾಜು ಪತ್ರಿಕೆಯ ಪ್ರಕಾರ ಕಾಮಗಾರಿ ನಿರ್ವಹಿಸಿಲ್ಲ. ಕಳಪೆ ಕಾಮಗಾರಿಯಾಗಿದ್ದು, ಅಧಿಕಾರಿಗಳು ನಿರ್ಲಕ್ಷ ವಹಿಸಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

vijapur2

ಕೋಟ್ಯಂತರ ರೂಪಾಯಿ ಅವ್ಯವಹಾರವಾಗಿದೆ. ನಿರ್ಮಾಣಗೊಂಡ ವರ್ಷ ಕಳೆಯುವ ಮೊದಲೇ ಎಲ್ಲಾ ಲ್ಯಾಟರಲ್ ಕಾಲುವೆಗಳು ಕಳಪೆ ಕಾಮಗಾರಿಯ ಕಾರಣ ಒಡೆದು ಹೋಗಿವೆ. ಅಧಿಕಾರಿಗಳ ನಿರ್ಲಕ್ಷವೇ ಇದಕ್ಕೆ ಕಾರಣ. ಹೀಗಾಗಿ ಕಾಮಗಾರಿಯ ತನಿಖೆ ನಡೆಸಬೇಕು. ಹಾಗೂ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಬೇಕು. ಕಾಲುವೆಗಳನ್ನು ಮರು ನಿರ್ಮಿಸಬೇಕು ಎಂದು ಆಗ್ರಹಿಸಿದರು.

Advertisements

ಇದನ್ನೂ ಓದಿ: ದೇವನಹಳ್ಳಿ ಭೂಸ್ವಾಧೀನ ಕೈಬಿಟ್ಟಿದ್ದೇವೆ: ಸಿಎಂ ಸಿದ್ದರಾಮಯ್ಯ

ಧರಣಿ ನಡೆಯುತ್ತಿದ್ದ ಸ್ಥಳಕ್ಕೆ ಉಪ ಮುಖ್ಯ ಇಂಜಿನಿಯರ್ ಐ ಎಲ್ ಕಳಸಾ, ತಾಂತ್ರಿಕ ಸಹಾಯಕ ಉಮೇಶ ಭೇಟಿ ನೀಡಿ ಮನವಿ ಸ್ವೀಕರಿಸಿ, ಧರಣಿ ಹಿಂಪಡೆಯುವಂತೆ ಮನವಿ ಮಾಡಿದರು. ಆದರೆ ಪ್ರತಿಭಟನಾಕಾರರು ಪ್ರತಿಭಟನೆ ಮುಂದುವರಿಸುವುದಾಗಿ ಪಟ್ಟು ಹಿಡಿದರು.

ಈ ವೇಳೆ ಮಲ್ಲು ಜಾಲಗೇರಿ, ಸೋಮು ಹಟ್ಟಿ, ಯಮನಪ್ಪ ಮಾಯವಂಶಿ, ನಾಮದೇವ ಹೊಸಮನೆ, ಸೋಮರಾಜ ಚೆಲುವಾದಿ, ರಮೇಶ ಹಲ್ಯಾಳ, ರಾಹುಲ ಹೊಸಮನಿ ಇದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X