ವಿಜಯಪುರ | ಪ್ರಜ್ವಲ್‌ ಪ್ರಕರಣ; ಸಂತ್ರಸ್ತೆಯರ ದೂರಿಗೆ ಕಾಯದೆ ಶೀಘ್ರ ಕ್ರಮ ಕೈಗೊಳ್ಳುವಂತೆ ಎಐಡಿವೈಒ ಆಗ್ರಹ

Date:

ಹಾಸನದ ಸಂಸದ ಹಾಗೂ ಪ್ರಸ್ತುತ ಲೋಕಸಭಾ ಚುನಾವಣೆಯ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಮಹಿಳೆಯರ ಮೇಲೆ ನಡೆಸಿರುವ ದೌರ್ಜನ್ಯಗಳ ಪ್ರಕರಣ‌ವು ಅತ್ಯಂತ ಆಘಾತಕಾರಿಯಾಗಿದೆ. ಹಾಸನದಲ್ಲಿ ಎಲ್ಲೆಂದರಲ್ಲಿ ಸಿಕ್ಕ ಪೆನ್ ಡ್ರೈವ್‌ಗಳ ಮೂಲಕ ಈ ಸಂಗತಿ ಹೊರಬಿದ್ದಿದ್ದು, ಇಡೀ ನಾಗರಿಕ ಸಮಾಜವೇ ದಿಗ್ಭ್ರಮೆಗೊಂಡಿದೆ. ಈ ಅಮಾನುಷ ಕೃತ್ಯಕ್ಕೆ ಖಡನೀಯ ಎಂದು ಎಐಡಿವೈಒ ಕರ್ನಾಟಕ ರಾಜ್ಯ ಸಮಿತಿ ಆಕ್ರೋಶ ವ್ಯಕ್ತಪಡಿಸಿದೆ.

- Advertisement -

ಎಐಡಿವೈಒ ರಾಜ್ಯ ಕಾರ್ಯದರ್ಶಿ ಸಿದ್ದಲಿಂಗ ಬಾಗೇವಾಡಿ ವಿಜಯಪುರದಲ್ಲಿ ಪತ್ರಿಕಾ ಹೇಳಿಕೆ ನೀಡಿದ್ದ, “ಚುನಾಯಿತ ಸಂಸದನಾಗಿ ಕ್ಷೇತ್ರದ ಜನತೆ ತನಗೆ ನೀಡಿದ ಜವಾಬ್ದಾರಿಯನ್ನು ಅತ್ಯಂತ ಜವಾಬ್ದಾರಿಯಿಂದ ನಿರ್ವಹಿಸಬೇಕಾದ ವ್ಯಕ್ತಿ ಹೀಗೆ ತನ್ನ ಮನೋವಿಕೃತಿಯನ್ನು ಮೆರೆದಿರುವುದು ಅತ್ಯಂತ ಹೇಯ ಕೃತ್ಯವಾಗಿದೆ. ಮಹಿಳೆಯನ್ನು ಕೇವಲ ಭೋಗದ ವಸ್ತುವೆಂದು ಪರಿಗಣಿಸಿರುವ ಇವರನ್ನು ಟೀಕಿಸಲು ಪದಗಳೇ ಸಾಲದಾಗಿದೆ. ಇವರ ಬೆದರಿಕೆಗಳಿಗೆ ಬಲಿಯಾದ ಹೆಣ್ಣು ಮಕ್ಕಳು ಈ ಪ್ರಕರಣ‌ವು ಹೊರ ಬೀಳುವ ಮೂಲಕ ಮತ್ತಷ್ಟು ಕುಸಿದು ಹೋಗಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಪೋಕ್ಸೊ ಪ್ರಕರಣ; ಜಿಲ್ಲಾ ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರಿ

“ರಾಜ್ಯ ಸರ್ಕಾರವು ಈ ಪ್ರಕರಣದ ತನಿಖೆಗೆ ತಡವಾಗಿಯಾದರೂ ಎಸ್ಐಟಿಯನ್ನು ನೇಮಿಸಿರುವುದು ಸ್ವಾಗತ. ಆದರೆ ಸಂತ್ರಸ್ತೆಯರು ಬಂದು ದೂರು ದಾಖಲೆಸುವವರೆಗೆ ಕಾಯದೆ ಶೀಘ್ರ ತನಿಖೆ ನಡೆಸಿ ಅಪರಾಧಕ್ಕೆ ತಕ್ಕ ನಿದರ್ಶನೀಯ ಶಿಕ್ಷೆಯನ್ನು ವಿಧಿಸಬೇಕಿದೆ. ಆರೋಪಿತ ವ್ಯಕ್ತಿಯು ಪ್ರಭಾವಿ ರಾಜಕಾರಣಿಯಾಗಿರುವುದರಿಂದ ಸಂತ್ರಸ್ತೆಯರು ಧೈರ್ಯವಾಗಿ ಮುಂದೆ ಬಂದು ದೂರು ನೀಡುತ್ತಿಲ್ಲ. ಅಲ್ಲದೆ ಸಂತ್ರಸ್ತ ಹೆಣ್ಣು ಮಕ್ಕಳ ಜೀವ ಮತ್ತು ಬದುಕು ಅಪಾಯದಲ್ಲಿ ಇರುವುದರಿಂದ ಅವರಿಗೆ ಸೂಕ್ತ ರಕ್ಷಣೆ, ವೈದ್ಯಕೀಯ ಆರೈಕೆ ಮತ್ತು ಸಾಂತ್ವನದ ಅವಶ್ಯಕತೆ ಇದೆ. ರಾಜ್ಯ ಸರ್ಕಾರವು ಈ ನಿಟ್ಟಿನಲ್ಲಿ ಸಕ್ರಿಯಾತ್ಮಕ ಕ್ರಮಗಳನ್ನು ಕೈಗೊಳ್ಳಬೇಕು” ಎಂದು ಎಐಡಿವೈಒ ಕರ್ನಾಟಕ ರಾಜ್ಯ ಸಮಿತಿ ಆಗ್ರಹಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ ಕಡೇ ದಿನಗಳು’

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ...

‘ದಾಖಲೆ ತೋರಿಸಿ, ಜಮೀನನ್ನು ನಿಮ್ಮ ಕುಟುಂಬಕ್ಕೇ ಬರೆದುಕೊಡ್ತೀನಿ!’: ಹೆಚ್‌ಡಿಕೆಗೆ ಬಾಲಕೃಷ್ಣ ಸವಾಲು

"ನನ್ನ ಹೆಸರಿನಲ್ಲಿ ನೈಸ್ ರಸ್ತೆ ಯೋಜನಾ ವ್ಯಾಪ್ತಿಯಲ್ಲಿ ಜಮೀನಿದ್ದರೆ ದಾಖಲೆ ಬಿಡುಗಡೆ...

ದೇಹದ ಅಪಹಾಸ್ಯ, ನಿಂದನೆ ಮಾತ್ರವೇ ಮಹಿಳೆಯ ಮರ್ಯಾದೆ ಭಂಗದ ಅಪರಾಧವಲ್ಲ: ಹೈಕೋರ್ಟ್

ಕೇವಲ ದೇಹದ ಅಪಹಾಸ್ಯ (ಬಾಡಿ ಶೇಮಿಂಗ್‌) ಮತ್ತು ಅವಾಚ್ಯವಾಗಿ ನಿಂದಿಸುವುದು ಐಪಿಸಿ...

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...