ವಿಜಯಪುರ | ಶರಣರ ಶಕ್ತಿ ಚಿತ್ರ ಪ್ರಸಾರಗೊಳಿಸದಂತೆ ಬಸವಪರ ಸಂಘಟನೆಗಳ ಒತ್ತಾಯ

Date:

ಶರಣರ ಶಕ್ತಿ’ ಚಲನಚಿತ್ರ ಪ್ರಸಾರವನ್ನು ತಡೆಹಿಡಿಯಬೇಕು ಹಾಗೂ ನಿರ್ಭಂಧಿಸಬೇಕೆಂದು ಒತ್ತಾಯಿಸಿ ಬಸವ ಮಹಾಮನೆ ಸಮಿತಿ ನೇತೃತ್ವದಲ್ಲಿ, ಅನೇಕ ಬಸವಪರ ಸಂಘಟನೆಗಳ ಸದಸ್ಯರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನೆ ನಡೆಸಿ, ಮುದ್ದೇಬಿಹಾಳ ತಹಶೀಲ್ದಾರ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

- Advertisement -

ಪ್ರತಿಭಟನಾಕಾರರು ವಿವಾದಿತ ವಚನ ದರ್ಶನದ ವಿರುದ್ದವೂ ಘೋಷಣೆ ಕೂಗಿ, ಬರುವ 18ರಂದು ಚಲನಚಿತ್ರ ಬಿಡುಗಡೆಯಾಗುತ್ತದೆಂದು ಹೇಳಲಾಗಿದ್ದು, ಈಗಾಗಲೇ ಬಿಡುಗಡೆಯಾದ ಚಿತ್ರದ ಟ್ರೈಲರ್ ನಲ್ಲಿ ಸಮಾಜದ ಸ್ವಾಸ್ಥ್ಯ ಕೆಡಿಸುವ, ಬಸವಾದಿ ಶರಣರಿಗೆ ಅವಮಾನ ಮಾಡುವ ದೋಷಗಳು ಕಂಡುಬಂದಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಕರ್ನಾಟಕದ ಸಾಂಸ್ಕೃತಿಕ ನಾಯಕರೆಂದು ಘನ ಸರಕಾರವು ಘೋಷಿಸಿದ ಬಸವಣ್ಣನವರ ಅಕ್ಕ, ಶರಣೆ ಅಕ್ಕನಾಗಮ್ಮನವರು ಅನೈತಿಕವಾಗಿ ಗರ್ಭಧರಿಸಿದ್ದಾರೆಂದು ಚಿತ್ರಿಕರಿಸಿದ್ದು, ಲಿಂಗಾಯತ ಹಾಗೂ ಬಸವಾಭಿಮಾನಿಗಳಿಗೆ ಅವಮಾನವಾಗಿದೆ. ಇಂಥ ತಪ್ಪನ್ನು ಯಾವ ನಾಗರಿಕ ಸಮಾಜವೂ ಒಪ್ಪುವುದಿಲ್ಲ, ಇದನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದು ಗುಡುಗಿದರು.

ಬಲವಂತದಿಂದ ಲಿಂಗ ಕಟ್ಟುತ್ತೇವೆ ಎಂಬ ಮಾತು ಲಿಂಗಾಯತ ಧರ್ಮ ಪ್ರಣಾಳಿಕೆಯಲ್ಲಿ ಇಲ್ಲ. ಇದು ಧರ್ಮತತ್ವ (ವಚನವಾಙ್ಮಯ)ಕ್ಕೆ ವಿರುದ್ಧವಾದದ್ದು. ಇದನ್ನು ಬಲವಾಗಿ ಖಂಡಿಸುತ್ತೇವೆ. ವರ್ಣರಹಿತ,‌ ವರ್ಗರಹಿತ, ಸಮಸಮಾಜ ಕಟ್ಟಿದ ಶರಣರಲ್ಲಿ ಕೆಲವರನ್ನು ಕಡುನೀಲಿಬಣ್ಣನಿಂದ ಚಿತ್ರೀಕರಿಸಿದ್ದನ್ನು ಖಂಡಿಸುತ್ತೇವೆ. ಬಸವಣ್ಣನವರ ಅಂತ್ಯವು ಹೇಗಾಯಿತೆಂದು ಯಾರಿಗೂ ತಿಳಿಯದ್ದನ್ನು ಕೊಲೆಯಾಗಿದೆ ಎಂದು ಚಿತ್ರೀಕರಿಸಿರುವುದು ಅಕ್ಷಮ್ಯ ಅಪರಾಧ ಇದನ್ನು ಖಂಡಿಸುತ್ತೇವೆ ಎಂದರು.

ಇದನ್ನು ಓದಿದ್ದೀರಾ? ವಿಜಯಪುರ | ಹಣಮಾಪುರ ಗ್ರಾ.ಪಂ. ಚುನಾವಣೆ : ನೂತನ ಸದಸ್ಯರಿಗೆ ಸಚಿವರಿಂದ ಅಭಿನಂದನೆ

ಈ ಚಲನಚಿತ್ರದ ನಿರ್ದೇಶಕ ದಿಲೀಪ ಶರ್ಮ ಮತ್ತು ನಿರ್ಮಾಪಕಿ ಆರಾಧನಾ ಕುಲಕರ್ಣಿ, ವೇದಾಗಮ ಸನಾತನ ಹಿಂದೂ ಮತ್ತು ಹಿಂದುತ್ವದ ಪರ್ಯಾಯವಾದ ಬಸವಾದಿ ಪ್ರಮಥರ ತತ್ವ ಚಿಂತನೆಗಳಾದ ಲಿಂಗಾಯತವನ್ನು ಪ್ರಜ್ಞಾಪೂರ್ವಕವಾಗಿ ಅವಹೇಳನ ಮಾಡಲು ಈ ಚಲನಚಿತ್ರವನ್ನು ಚಿತ್ರೀಕರಿಸಿದ್ದಾರೆಂದು ನಮ್ಮ ಭಾವನೆಯಾಗಿದೆ. ಇದು ಸಮಾಜದಲ್ಲಿ ಕ್ಷೋಭೆಯನ್ನು ಉಂಟುಮಾಡುವ ಕಾರಣದಿಂದ ತೀವ್ರವಾಗಿ ಖಂಡಿಸುತ್ತೇವೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...