ವಿಜಯಪುರ | ಅಕ್ಕಮಹಾದೇವಿ ವಿವಿ ನೂತನ ಕುಲಪತಿಯಾಗಿ ಪ್ರೊ. ವಿಜಯಾ ಕೋರಿಶೆಟ್ಟಿ ನೇಮಕ

Date:

ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ 6ನೇ ಕುಲಪತಿಯಾಗಿ ಸಮಾಜಶಾಸ್ತ್ರ ಅಧ್ಯಯನ ವಿಭಾಗದ ಮುಖ್ಯಸ್ಥೆ ಹಾಗೂ ಹಿರಿಯ ಪ್ರಾಧ್ಯಾಪಕಿ ಪ್ರೊ.ವಿಜಯಾ ಕೋರಿಶೆಟ್ಟಿ ಅವರನ್ನು ನೇಮಕ ಮಾಡಿ ರಾಜ್ಯಪಾಲರು ಹಾಗೂ ವಿವಿಯ ಕುಲಾಧಿಪತಿಯೂ ಆಗಿರುವ ಥಾವರಚಂದ ಗೆಹಲೋಟ್ ಅವರು ಗುರುವಾರ ಆದೇಶ ಹೊರಡಿಸಿದ್ದಾರೆ.

- Advertisement -

ಇಲ್ಲಿವರೆಗೆ ಹೊರಗಿನ ವಿಶ್ವವಿದ್ಯಾನಿಲಯಗಳ ಪ್ರಾಧ್ಯಾಪಕರು ಕುಲಪತಿಗಳಾಗಿ ನೇಮಕಗೊಂಡಿದ್ದರು. ಇದೇ ಮೊದಲ ಬಾರಿಗೆ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿವಿಯ ಪ್ರಾಧ್ಯಾಪಕರಿಗೇ ಕುಲಪತಿ ಹುದ್ದೆ ಒಲಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ರಾಜ್ಯಪಾಲರು ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯ ಕಾಯ್ದೆ- 2000ನ ಸೆಕ್ಷನ್ 14 (4) ರ ಅನ್ವಯ ಪ್ರದತ್ತವಾದ ಅಧಿಕಾರ ಬಳಸಿ, ಪ್ರೊ.ವಿಜಯಾ ಕೋರಿಶೆಟ್ಟಿ ಅವರನ್ನು ಅಧಿಕಾರ ವಹಿಸಿಕೊಂಡ ದಿನದಿಂದ ಅನ್ವಯವಾಗುವಂತೆ ಮುಂದಿನ ನಾಲ್ಕು ವರ್ಷಗಳ ಅವಧಿಗೆ ಕುಲಪತಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ರಾಜ್ಯಪಾಲರ ಆದೇಶದಂತೆ ನೂತನ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಅವರು ಇಂದು ಇಲ್ಲಿ ನಡೆದ ಸರಳ ಸಮಾರಂಭದಲ್ಲಿ ಮಹಿಳಾ ವಿವಿಯ 6ನೇ ಕುಲಪತಿಯಾಗಿ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಹಂಗಾಮಿ ಕುಲಪತಿಯಾಗಿದ್ದ ಪ್ರೊ.ನಾಮದೇವಗೌಡ, ಕುಲಸಚಿವ ಶಂಕರಗೌಡ ಸೋಮನಾಳ, ಸಿಂಡಿಕೇಟ್ ಸದಸ್ಯರಾದ ಶಿವಯೋಗೆಪ್ಪ ಮಾಡ್ಯಾಳ, ಅತೀಕ್ ಮಕಾನದಾರ, ಸೈದಪ್ಪ ಮಾದರ, ವಿವಿಧ ನಿಕಾಯಗಳ ಡೀನರು, ವಿವಿಧ ವಿಭಾಗಗಳ ಮುಖ್ಯಸ್ಥರು. ಸಂಯೋಜಕರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ಉಪಸ್ಥಿತರಿದ್ದರು ಎಂದು ವಿವಿ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: ವಿಜಯಪುರ | ಬಾಲಕರ ವಸತಿ ನಿಲಯದಲ್ಲಿ ಆಹಾರ ದಾಸ್ತಾನು ಕೊರತೆ; ಉಪವಾಸ ಸೊರಗಿದ ವಿದ್ಯಾರ್ಥಿಗಳು

ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಹಿರಿಯ ಪ್ರಾಧ್ಯಾಕರಾಗಿರುವ ಪ್ರೊ.ವಿಜಯಾ ಕೋರಿಶೆಟ್ಟಿ ಅವರು ಸಮಾಜಶಾಸ್ತ್ರ ಅಧ್ಯಯನ ವಿಭಾಗದ ಮುಖ್ಯಸ್ಥರಾಗಿ, ಈ ಹಿಂದೆ, ಮಹಿಳಾ ವಿವಿಯ ಹಣಕಾಸು ಅಧಿಕಾರಿಗಳಾಗಿ, ಸಮಾಜ ವಿಜ್ಞಾನ ನಿಕಾಯದ ಡೀನರಾಗಿ, ಸಿಂಡಿಕೇಟ್ ಮತ್ತು ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಅಷ್ಟೇ ಅಲ್ಲ, ಪಿಎಂಇಜಿ ನಿರ್ದೇಶಕರಾಗಿ, ಸಿಡಿಸಿ ನಿರ್ದೇಶಕರಾಗಿ, ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯದ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ.

ಪ್ರೊ.ವಿಜಯಾ ಕೋರಿಶೆಟ್ಟಿ ಅವರು 50ಕ್ಕೂ ಹೆಚ್ಚು ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣ, ಕಾರ್ಯಾಗಾರ ಮತ್ತು ಸಮ್ಮೇಳನಗಳಲ್ಲಿ ಭಾಗವಹಿಸಿದ್ದಾರೆ. ಅಲ್ಲದೇ ಏಳು ಪುಸ್ತಕಗಳು ಮತ್ತು 55 ಸಂಶೋಧನಾ ಲೇಖನಗಳನ್ನು ಪ್ರಕಟಿಸಿದ್ದಾರೆ. ಇಲ್ಲಿಯವರೆಗೆ 16 ವಿದ್ಯಾರ್ಥಿನಿಯರು ಇವರ ಮಾರ್ಗದರ್ಶನದಲ್ಲಿ ಪಿಎಚ್‌ ಡಿ ಪದವಿ ಗಳಿಸಿದ್ದಾರೆ. ನಾಲ್ಕು ಸಂಶೋಧನಾ ಪ್ರಾಜೆಕ್ಟ್‌ಗಳನ್ನು ಪೂರ್ಣಗೊಳಿಸಿದ್ದಾರೆ.

WhatsApp Image 2025 11 17 at 3.23.18 PM
ಈ ದಿನ ಸಂಪಾದಕೀಯ
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಲಾರಿ ಡಿಕ್ಕಿಗೆ ಬೈಕ್ ಸವಾರ ಗಂಭೀರ ಗಾಯ

ಲಾರಿ ಹಾಗೂ ಬೈಕ್‌ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್‌ ಸವಾರ...

ಶಿರಸಿ | ಆಗಸ್ಟ್ 23ನ್ನು ‘ಕರ್ನಾಟಕ ಕಾಫಿ ಡೇ’ ಎಂದು ಘೋಷಿಸಲು ಪವನ್ ನಾಯ್ಕ್ ಆಗ್ರಹ

ಶಿರಸಿ: ಕಾಫಿ ಡೇ ಸಂಸ್ಥಾಪಕ ದಿವಂಗತ ವಿ.ಜಿ. ಸಿದ್ಧಾರ್ಥ ಹೆಗ್ಡೆ ಅವರ...

ಭದ್ರಾವತಿಯ VISL ಎಜಿಎಂ ಗೋವಿಂದರಾಜು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, VISL ಸಂಸ್ಥೆಯಲ್ಲಿ ಎಜಿಎಂ...

ಗದಗ | ಕರ್ನಾಟಕ ಏಕೀಕರಣಕ್ಕಾಗಿ ನಾರಾಯಣರಾವ್ ಕೋಡುಗೆ ಅಪಾರ: ಹನುಮಂತಪ್ಪ ಅಬ್ಬಿಗೇರಿ

"ಕರ್ನಾಟಕ ಏಕೀಕರಣಕ್ಕಾಗಿ ಗದಗ ಜಿಲ್ಲೆಯ ಹುಯಿಲಗೋಳ ನಾರಾಯಣರಾವ್ ಅವರ ಕೊಡುಗೆ ಅಪಾರವಾಗಿದೆ....