ವಿಜಯಪುರ | ಕುಡಿಯುವ ನೀರು ಒದಗಿಸುವ ಡಿಬಿಒಟಿ ಯೋಜನೆ-1ಯಡಿ ಪೈಪಲೈನ್‌ ಆಳವಡಿಕೆಗೆ ಸೂಚನೆ

Date:

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ 702 ಜನವಸತಿಗಳ 5 ಪುರಸಭೆಗಳಿಗೆ ಮುದ್ದೇಬಿಹಾಳ ಹಾಗೂ ಸಿಂದಗಿ ತಾಲೂಕಿನ 343 ಜನವಸತಿಗಳ ಹಾಗೂ 6 ಪುರಸಭೆಗಳಿಗೆ ಕುಡಿಯುವ ನೀರು ಒದಗಿಸುವ ಡಿಬಿಒಟಿ ಯೋಜನೆ-1ಯಡಿ ಪೈಪಲೈನ್‌ ಆಳವಡಿಸುವ ಕಾಮಗಾರಿಗೆ ಜಿಲ್ಲಾಧಿಕಾರಿ ಟಿ ಭೂಬಾಲನ್ ಅವರು ಸೂಚನೆ ನೀಡಿದ್ದಾರೆ.

- Advertisement -

ಜಿಲ್ಲಾಧಿಕಾರಿ ಈ ಕುರಿತು ಪ್ರಕಟಣೆ ಹೊರಡಿಸಿದ್ದು, “ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾಮಗಾರಿಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವುದು ಅತ್ಯಂತ ಅವಶ್ಯಕವಾಗಿರುವುದರಿಂದ ಪೈಪ್‌ಲೈನ್ ಕಾಮಗಾರಿಯನ್ನು ಭೂಮಿಯ ಆಳದಲ್ಲಿ ಅಳವಡಿಸಲಾಗುವುದರಿಂದ ಭೂಸ್ವಾಧೀನ ಪ್ರಕ್ರಿಯೆ ಅವಶ್ಯಕತೆ ಇರುವುದಿಲ್ಲ. ಆದರೆ ಕೆಲವರು ತಕರಾರು ಮಾಡಿ ಕಾಮಗಾರಿಯನ್ನು ಸ್ಥಗಿತಗೊಳಿಸುತ್ತಿದ್ದರಿಂದ ಈ ಯೋಜನೆ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಗ್ರಾಮೀಣ ಜನವಸತಿಗಳಿಗೆ ನೀರು ಪೂರೈಸುವ ಹಿತದೃಷ್ಟಿಯಿಂದ ಸಂಬಂಧಿಸಿದ ಅಧಿಕಾರಿಗಳು ಕಾಮಗಾರಿಗಳಿಗೆ ಸಾರ್ವಜನಿಕರಿಂದ ಅಡ್ಡಿಯಾಗದಂತೆ ನೋಡಿಕೊಂಡು ಕಾಮಗಾರಿ ಕೈಗೊಳ್ಳಬೇಕು. ಈ ಯೋಜನೆಯು ಕುಡಿಯುವ ನೀರನ್ನು ಒದಗಿಸುವ ಗುರಿ ಹೊಂದಿದ್ದು, ಸ್ಥಳೀಯ ಸಮುದಾಯಗಳ ಆರೋಗ್ಯ ಮತ್ತು ಯೋಗಕ್ಷೇಮಕ್ಕೆ ಪ್ರಯೋಜನಕಾರಿ ಆಗಿರುವುದರಿಂದ ವಿಳಂಬ ಅಥವಾ ಹಸ್ತಕ್ಷೇಪವಿಲ್ಲದೇ ಕೆಲಸ ಮುಂದುವರೆಯುವುದು ನಿರ್ಣಾಯಕವಾಗಿದೆ” ಎಂದು ತಿಳಿಸಿದರು.

“ಯಾವುದೇ ಸ್ಥಳದಲ್ಲಿ ಯಾವುದೇ ವ್ಯಕ್ತಿ ಕಾಮಗಾರಿಗೆ ಅಡ್ಡಿಪಡಿಸುವುದು ಅಥವಾ ನಿಲ್ಲಿಸುವುದು, ಯಾರಿಗಾದರೂ ಕೆಲಸ ಮಾಡುವವರಿಗೆ ಅಡೆತಡೆ ಮಾಡುವುದು, ಕೈಯಿಂದ ಹೊಡೆದು ಗಾಯ ಮಾಡುವುದು, ಬಡಿಗೆ ಅಥವಾ ಇತರೆ ವಸ್ತುಗಳಿಂದ ಹೊಡೆಯುವುದು, ಕೆಲಸ ಮಾಡುವವರಿಗೆ ಜೀವನ ಬೆದರಿಕೆ ಹಾಕುವುದು ಕಂಡುಬಂದಲ್ಲಿ ಬಿಎನ್‌ಎಸ್ ಕಲಂ 132 ಅಡಿ ಎರಡು ವರ್ಷ ಕಾರಾವಾಸ ಅಥವಾ ದಂಡ, ಬಿಎನ್ಎಸ್ 126(1)ರನ್ವಯ ಒಂದು ತಿಂಗಳು ಶಿಕ್ಷೆ ಅಥವಾ ₹5000 ದಂಡ, ಬಿಎನ್‌ಎಸ್ ಕಲಂ 15(2) ರನ್ವಯ ಒಂದು ವರ್ಷ ಕಾರಾವಾಸ ಅಥವಾ ₹10,000 ದಂಡ ಬಿಎನ್‌ಎಸ್ ಕಲಂ 118(1)ರನ್ವಯ ಮೂರು ವರ್ಷ ಕಾರಾವಾಸ ಅಥವಾ ₹20,000 ದಂಡ, ಬಿಎನ್ ಎಸ್ ಕಲಂ 352 ರನ್ವಯ ಎರಡು 351(2) 2 ವಿಧಿಸಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ತುಮಕೂರು | ಶೈಕ್ಷಣಿಕ ಹಂತದಲ್ಲಿಯೇ  ಜೀವನದ ಗುರಿ ನಿರ್ಧರಿಸಿ : ಎಂ.ಎಸ್ ರವಿಪ್ರಕಾಶ್

“ಕಾರಾವಾಸ ಅಥವಾ ದಂಡ ಹಾಗೂ ಬಿಎನ್ಎಸ್ ಜಿಲ್ಲಾ ಪ್ರಾಧಿಕಾರವು ನಿರ್ಧರಿಸಿದಂತೆ ಸಾರ್ವಜನಿಕ ಕಲ್ಯಾಣ ಯೋಜನೆಗಳನ್ನು ನಿಯಂತ್ರಿಸುವ ನಿಯಮಗಳಿಗೆ ಅನುಸಾರ ದಂಡ ಅಥವಾ ಇತರ ಕಾನೂನು ಕ್ರಮಗಳು ಒಳಗೊಂಡಿರುತ್ತವೆ” ಎಂದು ಹೇಳಿದರು.

“ಸಾರ್ವಜನಿಕರು ಈ ಯೋಜನೆಗೆ ಸಂಪೂರ್ಣ ಸಹಕಾರ ನೀಡಬೇಕು. ಈ ಕುರಿತು ಯಾವುದೇ ಹೆಚ್ಚಿನ ಮಾಹಿತಿಗಾಗಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ವಿಜಯಪುರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...

ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 10ನೇ ವರ್ಷದ ಸ್ವಚ್ಛತಾ ಆಂದೋಲನ

ಗಾಂಧಿ ಜಯಂತಿ ಅಂಗವಾಗಿ ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಳೆ...

ಧಾರವಾಡ | ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಗಾಂಧಿ‌ ಜಯಂತಿ‌ ಆಚರಣೆ

ಧಾರವಾಡ ಪಟ್ಟಣದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ರಾಷ್ಟ್ರಪತಿ ಮಹಾತ್ಮಾ ಗಾಂಧೀಜಿ ಹಾಗೂ ...

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...