ವಿಜಯಪುರ | ರಸ್ತೆ ಅಗಲೀಕರಣ ವಿರೋಧಿಸಿ ಪ್ರತಿಭಟನೆ; ಆಪ್‌ ಬೆಂಬಲ

Date:

ರಸ್ತೆ ಅಗಲೀಕರಣ ವಿರೋಧಿಸಿ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯ ಕುದುರಿ ಸಾಲವಾಡಗಿ ಗ್ರಾಮದಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಆಮ್‌ ಆದ್ಮಿ ಪಾರ್ಟಿ ಬೆಂಬಲ ಸೂಚಿಸಿದ್ದು, ಪಕ್ಷದ ಮುಖಂಡರು ಸ್ಥಳಕ್ಕೆ ಭೇಟಿ ನೀಡಿ ಗ್ರಾಮಸ್ಥರ ಸಮಸ್ಯೆ ಆಲಿಸಿದರು.

- Advertisement -

ರಸ್ತೆ ಅಗಲೀಕರಣ ನೆಪದಲ್ಲಿ ಗ್ರಾಮದ ಮನೆಗಳು, ಅಂಗಡಿಗಳನ್ನು ಧ್ವಂಸಗೊಳಿಸಿ ಬಡ ಕುಟುಂಬಗಳನ್ನು ಬೀದಿಗೆ ತಳ್ಳಿದ ರಾಜ್ಯ ಸರ್ಕಾರ, ಜಿಲ್ಲಾಡಳಿತ ಮತ್ತು ಗ್ರಾಮ ಪಂಚಾಯಿತಿ ಪಿಡಿಒ, ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ಹಾಗೂ ದೇವರಹಿಪ್ಪರಗಿ ಶಾಸಕರ ವಿರುದ್ಧ ಅನಿರ್ದಿಷ್ಟಾವಧಿ ಸತ್ಯಾಗ್ರಹ ನಡೆಯುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

“ತಾಲೂಕು ಆಡಳಿತ ಅಧಿಕಾರಿಗಳು 2 ತಿಂಗಳ ಹಿಂದೆ ಆರಂಭವಾದ ರಸ್ತೆ ಸುಧಾರಣೆ ಕಾರ್ಯಕ್ಕೆ ಸಂಬಂಧಿಸಿದಂತೆ ಯಾವುದೇ ನೋಟೀಸ್ ಇಲ್ಲದೆಯೇ ಬಡ ಕುಟುಂಬಗಳ 143ಕ್ಕೂ ಹೆಚ್ಚು ಮನೆಗಳನ್ನು ಧ್ವಂಸಗೊಳಿಸಿ, ಅನಾಥರನ್ನಾಗಿ ಮಾಡಿದ್ದಾರೆ. ಇದು ಸಂವಿಧಾನದ ಮೂಲಭೂತ ಹಕ್ಕುಗಳನ್ನು, ಜನರ ಜೀವನ ಹಕ್ಕನ್ನು ಉಲ್ಲಂಘಿಸುವ ಕೃತ್ಯವಾಗಿದೆ. ಈ ಕೃತ್ಯವು ಸ್ಥಳೀಯ ಶಾಸಕರ ಹಾಗೂ ಕಾಂಗ್ರೆಸ್ ಸರ್ಕಾರದ ವೈಫಲ್ಯದ ಸಂಕೇತ. ಬಡವರ ಮೇಲೆ ದೌರ್ಜನ್ಯ ಮಾಡುವ ಬದಲು ಅವರಿಗೆ ನ್ಯಾಯ ಒದಗಿಸುವುದು ಶಾಸಕರ, ಜಿಲ್ಲಾ ಆಡಳಿತ ಹಾಗೂ ಸರ್ಕಾರದ ಕರ್ತವ್ಯ” ಎಂದು ಆಮ್ ಆದ್ಮಿ ಪಾರ್ಟಿ ಜಿಲ್ಲಾಧ್ಯಕ್ಷ ಭೋಗೇಶ್ ಸೋಲಾಪುರ್ ಹೇಳಿದರು.

ಇದನ್ನೂ ಓದಿ: ವಿಜಯಪುರ | ಸರ್ಕಾರಿ ಯೋಜನೆಗಳ ಬಳಸಿಕೊಂಡು ಉದ್ಯಮಿಗಳಾಗಿ: ಡಾ. ರವೀಂದ್ರ ಬೆಳ್ಳಿಕರೆ

ಪಕ್ಷದ ಜಿಲ್ಲಾ ಮಾಧ್ಯಮ ಉಸ್ತುವಾರಿ ಸಂಜು ಶೆಟಗಾರ ಮಾತನಾಡಿ, “ದ್ವಂಸಗೊಳಿಸಲ್ಪಟ್ಟ ಕುಟುಂಬಗಳಿಗೆ ತಕ್ಷಣ ಸಾಂತ್ವನಾರ್ಥಕ ಪರಿಹಾರ ನೀಡಬೇಕು. ಉಚಿತ ಜಾಗ ನೀಡಿ ನೂತನ ಮನೆಗಳ ನಿರ್ಮಾಣಕ್ಕೆ 5 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಬೇಕು. ಈ ಕೃತ್ಯದಲ್ಲಿ ಪಾಲ್ಗೊಂಡ ಅಧಿಕಾರಿಗಳ ವಿರುದ್ಧ ಎಫ್.ಐ.ಆರ್ ದಾಖಲಿಸಿ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮುದ್ದೇಬಿಹಾಳ ತಾಲೂಕು ಅಧ್ಯಕ್ಷ ಮೆಹಬೂಬ್ ಹಡಲಗೇರಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಅವಿನಾಶ್ ಐಹೊಳೆ, ಬಸವನ ಬಾಗೇವಾಡಿ ಅಧ್ಯಕ್ಷ ಸಂತೋಷ್ ಚಲವಾದಿ ಹಾಗೂ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...

ಉಡುಪಿ | ಹೆತ್ತ ತಾಯಿಯನ್ನೇ ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟುಹೋದ ಮಗ

ಹೆತ್ತ ತಾಯಿಯನ್ನೇ ಮಗ ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿರುವ ಅಮಾನವೀಯ ಘಟನೆ...

ಬಳ್ಳಾರಿ | ಲಾರಿ ಪಲ್ಟಿ; ಸ್ಟೀನಿಂಗ್ ಯಂತ್ರ ಬಿದ್ದು ಯುವಕ ದುರ್ಮರಣ

ಜಿಲ್ಲೆ ಸಂಡೂರು ತಾಲ್ಲೂಕಿನ ಉಬ್ಬಳಗಂಡಿ ಗ್ರಾಮದ ಬಳಿ ಮೈನ್‌ಸ್‌ನ ಸ್ಟೀನಿಂಗ್ ಯಂತ್ರವನ್ನು...