ವಿಜಯಪುರ | ಅಮಿತ್ ಶಾ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಲು ಆಗ್ರಹಿಸಿ ಒಡಲ ದನಿ ಮಹಿಳಾ ಒಕ್ಕೂಟ ಪ್ರತಿಭಟನೆ

Date:

Advertisements

ಅಂಬೇಡ್ಕರ್ ಅವರನ್ನು ಅವಮಾನಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಿ, ದೇಶದ ಜನರ ಕ್ಷಮೆ ಕೇಳಬೇಕು. ಅದಲ್ಲದೇ, ಅಮಿತ್ ಶಾ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಬೇಕು ಇಲ್ಲವಾದರೆ ಉಗ್ರ ಹೋರಾಟ ಎದುರಿಸಬೇಕಾಗುತ್ತದೆ ಎಂದು ಒಡಲ ದನಿ ಮಹಿಳಾ ಒಕ್ಕೂಟದ ವಿಜಯಪುರ ಜಿಲ್ಲಾ ಮುಖಂಡರಾದ ಭುವನೇಶ್ವರಿ ಕಾಂಬಳೆ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು.

ಅವರು ವಿಜಯಪುರ ಜಿಲ್ಲೆಯ ಇಂಡಿ ನಗರದ ಪ್ರವಾಸಿ ಮಂದಿರದಿಂದ ಪ್ರತಿಭಟನೆ ಪ್ರಾರಂಭಿಸಿ ಬಸವೇಶ್ವರ ವೃತ್ತ, ಅಂಬೇಡ್ಕರ್ ವೃತ್ತ ಹಾಗೂ ಪ್ರಮುಖ ರಸ್ತೆಯಲ್ಲಿ ವಿವಿಧ ಘೋಷಣೆಗಳನ್ನು ಕೂಗುವ ಹಾಗೂ ತಮಟೆ ಬಾರಿಸುವ ಮೂಲಕ ಆಡಳಿತ ಸೌಧದ ಎದುರು ಬೃಹತ್‌ ಪ್ರತಿಭಟನೆ ನಡೆಸಿ ಕಂದಾಯ ಉಪವಿಭಾಗ ಅಧಿಕಾರಿ ಅಬೀದ್ ಗದ್ಯಾಳ ಅವರ ಮೂಲಕ ರಾಷ್ಟ್ರಪತಿ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದರು.

ಒಡಲ ದನಿ 1

ಮುಂದುವರಿದು ಮಾತನಾಡಿದ ಅವರು, ಕೇಂದ್ರದ ಗೃಹ ಸಚಿವ ಅಮಿತ್ ಶಾ ಚಳಿಗಾಲದ ಅಧಿವೇಶನದಲ್ಲಿ ಅವಮಾನದ ಹೇಳಿಕೆ ನೀಡುವ ಮೂಲಕ ಸಂವಿಧಾನ ಶಿಲ್ಪಿ ಡಾ. ಬಿ.ಆ‌ರ್.ಅಂಬೇಡ್ಕ‌ರ್ ಅವರನ್ನು ಅಪಮಾನಗೊಳಿಸಿದ್ದಾರೆ.ಅಂಬೇಡ್ಕ‌ರ್ ಅಂಬೇಡ್ಕ‌ರ್ ಅಂಬೇಡ್ಕ‌ರ್ ಎಂಬುದು ಇತ್ತೀಚಿನ ದಿನಗಳಲ್ಲಿ ಫ್ಯಾಷನ್ ಆಗಿದೆ. ಅಂಬೇಡ್ಕ‌ರ್ ಹೆಸರು ಜಪ ಮಾಡುವ ಬದಲಿಗೆ ದೇವರ ಹೆಸರನ್ನು ಜಪಿಸಿದ್ದರೆ ಸ್ವರ್ಗವಾದರೂ ಪ್ರಾಪ್ತಿಯಾಗುತ್ತಿತ್ತು ಎನ್ನುವ ಮೂಲಕ ಅಂಬೇಡ್ಕ‌ರ್ ಅವರನ್ನು ಅವಮಾನಿಸಿದ್ದಾರೆ. ಅಮಿತ್ ಶಾ ನೀಡಿರುವ ಹೇಳಿಕೆಯು ಅಂಬೇಡ್ಕ‌ರ್ ಅವರೊಂದಿಗೆ,ಅವರ ಸಂವಿಧಾನದಿಂದ ಸಾಮಾಜಿಕ, ಶೈಕ್ಷಣಿಕ, ರಾಜಕೀಯವಾಗಿಯೂ ಮುಖ್ಯವಾಹಿನಿಗೆ ಬಂದಿರುವ ಎಲ್ಲ ಸಮುದಾಯಗಳಿಗೂ ಅವಮಾನಿಸಿದಂತಾಗಿದೆ. ಆದ್ದರಿಂದ ಗೃಹ ಸಚಿವ ಅಮಿತ್ ಶಾ ಅವರು ಕೂಡಲೇ ದೇಶದ ಜನರ ಕ್ಷಮೆಯಾಚಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

Advertisements

ಇದನ್ನು ಓದಿದ್ದೀರಾ? ವಿಜಯಪುರ | ನಿತ್ಯವೂ ಮಾನವೀಯ ಮೌಲ್ಯಗಳನ್ನು ನಾವು ಮೈಗೂಡಿಸಿಕೊಳ್ಳಬೇಕು: ನಾಗರತ್ನ ಮನಗೂಳಿ

ಈ ಸಂದರ್ಭದಲ್ಲಿ ಶ್ರೀಮತಿ ರಮಾಬಾಯಿ ಅಂಬೇಡ್ಕ‌ರ್ ಮಹಿಳಾ ಸ್ವ-ಸಹಾಯ ಸಂಘದ ಅಧ್ಯಕ್ಷ ಇಂದಿರಾಗಾಂಧಿ ಹೊಸಮನಿ, ಸುಶೀಲಾ ಬನಸೊಡೆ, ಬೈಜಾಬಾಯಿ ಹರಿಜನ, ಮಹಾದೇವಿ ಶಿವಶರಣ, ಭಾಗವ್ವ ದಶವಂತ, ಯಲಬಾಯಿ ಬನಸೊಡೆ, ಲಕ್ಷ್ಮೀ ದ್ರಾವಿಡ, ರೇಣುಕಾ ದಶವಂತ, ಪವಿತ್ರ ಮಾದರ, ಸುನಂದ ದಶವಂತ, ಜ್ಯೋತಿ ಹೊಸಮನಿ, ರೂಪಾ ಕಾಲೇಬಾಗ, ಪವಿತ್ರ ಸಾವಳಸಂಗ, ಸರೋಜನಿ ಕಟ್ಟಿಮನಿ, ಶೋಭಾ ಲೋಗಿ, ಗುಂಡವ್ವ ಕಾಂಬಳೆ, ಸುಜಾತ ಬಬಲಾದಿ, ಸುಭಾಸ ತಳಕೇರಿ, ಪಾಂಡುರಂಗ ರೇವಪ್ಪ ಹೊಸಮನಿ, ವಿಕಾಸ ಬನಸೋಡೆ, ಆನಂದ ಅಗರಖೇಡ ಸೇರಿದಂತೆ ಇನ್ನೂ ಅನೇಕರು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಕಾಂಗ್ರೆಸ್ ಕೊಡುವ ದುಡ್ಡಿಗೆ ಅಂಬೇಡ್ಕರ್ ಹೆಸರು ಕೆಡಿಸಬೇಡಿ.
    ವಿಧಾನಸೌಧ ಲ್ಲಿ ಪಾಕಿಸ್ತಾನ ಜಿಂದಾಬಾದ್ ಹೇಳಿದಾಗ ಯಾರಿಗೂ ದೇಶದ ಬಗ್ಗೆ ಅಭಿಮಾನ ಬರಲಿಲ್ಲ,

    ಅವಾಗ ಪ್ರತಿಭಟನೆ ಮಾಡ್ಲಿಕ್ಕೆ ಯಾರು ದುಡ್ಡು ಕೊಟ್ಟಿಲ್ಲ

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X