ವಿಜಯಪುರ | ಏತ ನೀರಾವರಿಗಾಗಿ ಧರಣಿ; ಸ್ಥಳಕ್ಕೆ ಸಚಿವರ ಭೇಟಿ, ಸಮಾಲೋಚನೆ

Date:

Advertisements

ಬೂದಿಹಾಳ- ಪಿರಾಪುರ ಏತ ನೀರಾವರಿ ಯೋಜನೆ ಕಾಮಗಾರಿ ಪೂರ್ಣಗೊಳಿಸಲು ಆಗ್ರಹಿಸಿ ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲೂಕಿನ ಕೊಡಗಾನೂರ ಬಳಿ 9 ದಿನಗಳಿಂದ ರೈತರು ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಧರಣಿ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಭೇಟಿ ನೀಡಿ ಮಾತುಕತೆ ನಡೆಸಿದರು.

ಏತ ನಿರಾವರಿ ಯೋಜನೆಯನ್ನು ಶೀಘ್ರ ಪೂರ್ಣಗೊಳಿಸುವುದಾಗಿ ಸಚಿವರು ಭರವಸೆ ನೀಡಿದ ಹಿನ್ನೆಲೆಯಲ್ಲಿ ರೈತರು ಧರಣಿ ಹಿಂಪಡೆದರು. ಕೆ ಬಿ ಜೆ ಎನ್ ಎಲ್ ವ್ಯವಸ್ಥಾಪಕ ನಿರ್ದೇಶಕ ಕೆ ಪಿ ಮೋಹನ ರಾಜ ಅವರಿಗೆ ದೂರವಾಣಿ ಮೂಲಕ ಮಾತನಾಡಿದ ಯೋಜನೆಯ ಕುರಿತು ಮಾಹಿತಿ ಪಡೆದರು.

ಬಳಿಕ ಮಾತನಾಡಿದ ಅವರು, “ಬೂದಿಹಾಳ – ವೀರಪುರ ಯೋಜನೆ ನನ್ನ ಕನಸಿನ ಕೂಸು. ಈ ಹಿಂದೆ 2013-18ರ ಅವಧಿಯಲ್ಲಿ ನಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಗದರ್ಶನದಲ್ಲಿ ಈ ಯೋಜನೆಯನ್ನು ಕೈಗೊಳ್ಳಲಾಗಿತ್ತು. ಆದರೆ, ನೀರು ಹಂಚಿಕೆ ಸಮಸ್ಯೆ ಮತ್ತು ಕೆಲವು ತಾಂತ್ರಿಕ ಕಾರಣಗಳಿಂದಾಗಿ ಕಾಮಗಾರಿಗೆ ಹಿನ್ನಡೆಯಾಗಿತ್ತು. ಈಗಲೂ ನಮ್ಮದೇ ಸರಕಾರ ಅಧಿಕಾರದಲ್ಲಿದ್ದು, ನಮ್ಮ ಕನಸಿನ ಈ ಮಹತ್ವದ ಯೋಜನೆಯನ್ನು ಮರುಜೀವಿತಗೊಳಿಸಲಾಗುವುದೆಂದು” ಹೇಳಿದರು.

Advertisements

ಮುಂದಿನ ಮೂರು ತಿಂಗಳ ಒಳಗೆ ನಿರ್ಮಿಸಲಾಗುವ ಜಮೀನುಗಳ ರೈತರ ಸಹಮತಿಯೊಂದಿಗೆ ವಿವಾರವಾದ ಯೋಜನಾ ವರದಿ (ಡಿಪಿಆರ್) ಪೂರ್ಣಗೊಳಿಸಲಾಗುವುದು. 4ನೇ ತಿಂಗಳಲ್ಲಿ ಅನುಮತಿ ಪಡೆದು ಕಾಮಗಾರಿ ಪ್ರಾರಂಭಿಸಲಾಗುವುದು ಎಂದ ಅವರು, ಒಂಬತ್ತು ತಿಂಗಳಲ್ಲಿ ಹೊಲಗಲಿವೆ ಕಾಮಗಾರಿ ಪೂರ್ಣಗೊಳಿಸಲಾಗುವುದು. ವಿಜಯಪುರದಲ್ಲಿ ಸೆಪ್ಟೆಂಬರ್ ನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಯೋಜನೆಯು ಕಾಮಗಾರಿಯ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಿಸಲಾಗುವುದು ಎಂದು ಭರವಸೆ ನೀಡಿದರು.

ಇದನ್ನೂ ಓದಿ: ವಿಜಯಪುರ | ಬಿಎಲ್‌ಒ ಕೆಲಸ ನೀಡದಂತೆ ಅಂಗನವಾಡಿ ಕಾರ್ಯಕರ್ತೆಯರ ಮನವಿ

ಅಲಮೇಲ ಸ್ವಾಮೀಜಿ ಮಾತನಾಡಿ, “ಎಂ ಬಿ ಪಾಟೀಲರು ನುಡಿದಂತೆ ನಡೆಯುತ್ತಿರುವ ಬಸವ ನಾಡಿನ ಭಗೀರಥ. ಸಿದ್ದೇಶ್ವರ ಸ್ವಾಮೀಜಿ ಅವರು ಬೊಗಸೆ ನೀರು ಕೇಳಿದರೆ ಅವರು ಕೂಡ ನೀರು ತಂದುಕೊಟ್ಟಿದ್ದಾರೆ. ರೈತರು ಡಿಪಿಆರ್ ಮಾಡುವಾಗ ಅಧಿಕಾರಿಗಳೊಂದಿಗೆ ಸಹಕರಿಸಿ” ಎಂದು ಹೇಳಿದರು.

ಈ ವೇಳೆ ದೇವರ ಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ, ಮಾಜಿ ಶಾಸಕ ಶರಣಪ್ಪ ಸೋಣಗಾರ, ಅಖಂಡ ಕರ್ನಾಟಕ ರಾಜ್ಯ ರೈತ ಸಂಘದ ಅರವಿಂದ ಕುಲಕರಣಿ, ರೈತ ಮುಖಂಡರಾದ ಪ್ರಭುಗೌಡ ಲಿಂಗದಹಳ್ಳಿ, ಬಿಎಸ್ ಪಾಟೀಲ ಯಾಳಗಿ, ಸುಭಾಷ್ ಛಾಯಗೊಳ, ಸುರೇಶ್ ಬಾಬು ಬಿರಾದಾರ, ಪ್ರಭು ಬಿರಾದಾರ, ಶಿವಪುತ್ರ ಚೌದರಿ, ಕಾಶಿನಾಥ್ ತಳವಾರ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X