ವಿಜಯಪುರ | ಸಿಜೆಐ ಮೇಲೆ ಶೂ ಎಸೆದ ವಕೀಲನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಅ.16ರಂದು ಪ್ರತಿಭಟನೆ

Date:

ಸುಪ್ರೀಂ ಕೋರ್ಟ್ ನ್ಯಾಯಾಧೀಶ ಬಿ ಆರ್ ಗವಾಯಿ ಅವರ ಮೇಲೆ ಶೂ ಎಸೆದ ವಕೀಲನ ವಿರುದ್ಧ ಕ್ರಮ ಕೈಗೊಳ್ಳದಿರುವುದನ್ನು ಖಂಡಿಸಿ ಅ.16ರಂದು ವಿಜಯಪುರ ನಗರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಅಹಿಂದ ಮುಖಂಡ ಎಸ್ ಎಂ ಪಾಟೀಲ ಗಣಿಹಾರ ಹೇಳಿದರು.

- Advertisement -

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಓರ್ವ ನ್ಯಾಯಾಧೀಶರ ಮೇಲಿಗೆ ಈ ರೀತಿ ಹಲ್ಲೆ ಮಾಡಿದರೂ ಕೇಂದ್ರ ಸರ್ಕಾರ ಏಕೆ ಆರೋಪಿ ಮೇಲೆ ಕ್ರಮ ಕೈಗೊಳ್ಳುತ್ತಿಲ್ಲ? ಆರೋಪಿಯ ಮೇಲೆ ಪ್ರಕರಣ ದಾಖಲು ಮಾಡಿಕೊಂಡು, ತಕ್ಷಣ ಆತನನ್ನು ಬಂಧಿಸಬೇಕು ಎಂದು ಆಗ್ರಹಿಸಿ ಹೋರಾಟ ನಡೆಸಲಾಗುತ್ತಿದೆ. ಅ.16 ರಂದು ಸಂವಿಧಾನದ ರಕ್ಷಣೆಗಾಗಿ ಜಾತಿ, ಪಕ್ಷ, ಧರ್ಮತೀತವಾಗಿ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಈ ಹೋರಾಟದಲ್ಲಿ ಹಿಂದುಳಿದವರು, ದಲಿತರು, ಸಾಹಿತಿಗಳು ಹಾಗೂ ಸಮಾನ ಮನಸ್ಕರು ಸಂಘಟನೆಗಳು ಭಾಗವಹಿಸಬೇಕು” ಗಣಿಹಾರ ವಿನಂತಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

“ಸಮಾಜದಲ್ಲಿ ಸಮಾನತೆಯನ್ನು ಬಯಸದ ಸನಾತನ ಹಿನ್ನೆಲೆಯವರಿಗೆ ಇದೀಗ ಸಂಕಷ್ಟ ಎದುರಾಗಿದೆ. ಆರ್ ಎಸ್ ಎಸ್ ಹಾಗೂ ಸಂಘ ಪರಿವಾರದವರಿಗೆ ಸಮಾನತೆ ಬೇಕಾಗಿಲ್ಲ. ದೇಶದ ದಲಿತರಿಗೆ ಸ್ಥಾನಮಾನ, ಸಾಮಾಜಿಕ ನ್ಯಾಯ ಸಿಗುವುದು ಬೇಕಾಗಿಲ್ಲ. ಆರ್ ಎಸ್ ಎಸ್ ಮುಸ್ಲಿಮರನ್ನು ತೋರಿಕೆಗೆ ವಿರೋಧಿಸುತ್ತಾರೆ. ಆದರೆ ಅವರ ಅಸಲಿ ಟಾರ್ಗೆಟ್ ದಲಿತರೆ ಆಗಿದ್ದಾರೆ. ಇನ್ನು ಆರ್ ಎಸ್ ಎಸ್ ಕಾರ್ಯ ಚಟುವಟಿಕೆಗಳನ್ನು ಸರ್ಕಾರಿ ಸ್ಥಳಗಳಲ್ಲಿ ಮಾಡುವುದು ಬಂದ್ ಮಾಡಬೇಕು ಎಂದು ಸಿಎಂ ಅವರಿಗೆ ಸಚಿವ ಪ್ರಿಯಾಂಕ ಖರ್ಗೆ ಪತ್ರ ಬರೆದಿದ್ದಾರೆ. ಇದನ್ನೇ ಕೆಲವರು ಆರ್ ಎಸ್ ಎಸ್ ಬ್ಯಾನ್ ಮಾಡುವಂತೆ ಪತ್ರ ಬರೆದಿದ್ದಾರೆ ಎಂದು ತಿರುಚಲಾಗಿದೆ. ಆರ್ ಎಸ್ ಎಸ್ ಮೇಲೆ ಸರಿಯಾದ ಸಾಕಾದಾರಗಳನ್ನು ಸಂಗ್ರಹಿಸಿ ಬ್ಯಾನ್ ಮಾಡುತ್ತಾರೆ ಎಂದರು. ಸಂಘಟನೆ ಹುಟ್ಟಿ ನೂರು ವರ್ಷಗಳು ಪೂರೈಸಿದ್ದೀರಿ, ದೇಶಕ್ಕಾಗಿ ಏನು ಮಾಡಿದ್ದೀರಿ ಅದನ್ನು ಜನರಿಗೆ ತಿಳಿಸಬೇಕು. ಆರ್ ಎಸ್ ಎಸ್ ಸಂಘಟನೆ ಅಧಿಕೃತವಾಗಿ ನೋಂದಣಿಗೆ ಆಗಿಲ್ಲ. ಇಷ್ಟೇ ಅಲ್ಲದೆ ಕೈಯಲ್ಲಿ ಲಾಟಿ ಹಿಡಿದುಕೊಂಡು ಗಲ್ಲಿಗಳಲ್ಲಿ ಅಡ್ಡಾಡಿದರೆ ಏನು ಪ್ರಯೋಜನವಿದೆ? ಇದೆಲ್ಲವನ್ನು ದೇಶದ ಜನರಿಗೆ ಹೆದರಿಸಲು ಅವರು ಮಾಡುತ್ತಿದ್ದಾರೆ. ಬಿಜೆಪಿ ಸರ್ಕಾರ ಇರುವಲ್ಲಿ ಆರ್ ಎಸ್ ಎಸ್ ನವರು ಬೇಹುಗಾರಿಕೆ ಮಾಡುತ್ತಿದ್ದಾರೆ” ಎಂದು ಆರೋಪಿಸಿದರು.

ಇದನ್ನೂ ಓದಿ: ವಿಜಯಪುರ | ಬೆಳೆಹಾನಿ ಪರಿಹಾರಕ್ಕೆ ರೈತ ಸಂಘಟನೆಗಳ ಆಗ್ರಹ

ಬಸವ ಚಿಂತಕ ಡಾ. ಜೆ ಎಸ್ ಪಾಟೀಲ ಮಾತನಾಡಿ, “ಸಂವಿಧಾನ, ಸಾಮಾಜಿಕ ನ್ಯಾಯ ಬೆಂಬಲಿಸುವವರು ಪ್ರತಿಭಟನೆಗೆ ಬೆಂಬಲ ಕೊಡಬೇಕು. ಕನ್ನೆರಿ ಸ್ವಾಮೀಜಿ ಕಾವಿ ಪುಡಾರಿಯಾಗಿದ್ದು, ಅವರು ಸ್ವಾಮೀಜಿಯಾಗಲು ಯೋಗ್ಯರಲ್ಲ. ಲಿಂಗಾಯತ ಸಮಾಜವನ್ನು ನಾಶ ಮಾಡಲೆಂದೇ ಹುಟ್ಟಿರುವವನು ಕನ್ನೆರಿ ಸ್ವಾಮೀಜಿ” ಎಂದು ಆರೋಪಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಬಸನಗೌಡ ಹಾರನಾಳ, ರವಿಕುಮಾರ ಬಿರಾದಾರ, ಪ್ರಭುಗೌಡ ಪಾಟೀಲ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯನಗರ | SIR ರದ್ಧತಿ, ಜ್ಞಾನೇಶ್ ಕುಮಾರ್ ವಜಾಕ್ಕೆ ವಿದ್ಯಾರ್ಥಿ ಸಂಘಟನೆಗಳ ಆಕ್ರೋಶ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಗದಗ | ಜ್ಞಾನೇಶ್ ಕುಮಾರ್ ವಜಾಗೊಳಿಸಿ, SIR ರದ್ದುಗೊಳಿಸಲು ಆಗ್ರಹಿಸಿ ಎಸ್ ಎಫ್ ಐ ಮನವಿ

ವಿಶೇಷ ತೀವ್ರ  ಮತ ಪರಿಷ್ಕರಣೆ (ಎಸ್ ಐ ಆರ್) ರದ್ದು ಗೊಳಿಸಲು...

ಹಾವೇರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ಹುದ್ದೆಯಿಂದ ವಜಾಗೊಳಿಸಿ: ಬಸವರಾಜ ಎಸ್ ಆಗ್ರಹ

"ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದದ್ದು. ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ...