ವಿಜಯಪುರ | ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಸ್ಥಾನ ರೇಸ್‌; ಅಲ್ಪಸಂಖ್ಯಾತರಿಗೆ ಒಲಿಯುವುದೇ ಅವಕಾಶ?

Date:

ವಿಜಯಪುರ ಜಿಲ್ಲಾ ಕಾಂಗ್ರೆಸ್‌ಗೆ ಹೊಸ ಸಾರಥಿ ಯಾರಾಗಲಿದ್ದಾರೆ ಎಂಬ ಕುತೂಹಲ ಹೆಚ್ಚಿದ್ದು, ಜಿಲ್ಲಾಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿರುವ 15ಕ್ಕೂ ಹೆಚ್ಚು ಮುಖಂಡರ ಅರ್ಜಿಗಳನ್ನು ಪರಿಶೀಲಿಸಿರುವ ಪಕ್ಷದ ವೀಕ್ಷಕರ ತಂಡ, ಜಿಲ್ಲೆಯ ಪ್ರಮುಖ ನಾಯಕರ ಅಭಿಪ್ರಾಯ ಸಂಗ್ರಹಿಸಿ ವರದಿ ಸಿದ್ಧಪಡಿಸುವ ಹಂತ ತಲುಪಿದೆ.

- Advertisement -

ಎಐಸಿಸಿ ವೀಕ್ಷಕ ಹಾಗೂ ಮಧ್ಯಪ್ರದೇಶದ ಮಾಜಿ ಕೃಷಿ ಸಚಿವ, ಶಾಸಕ ಸಚಿನ್ ಯಾದವ್ ನೇತೃತ್ವದ ತಂಡ ಈಗಾಗಲೇ ಹಲವು ಸುತ್ತಿನ ಸಮಾಲೋಚನೆ ನಡೆಸಿದೆ. ಕೆಪಿಸಿಸಿ ವೀಕ್ಷಕರಾದ ಮಾಜಿ ಸಚಿವ ಎಸ್.ಆರ್. ಪಾಟೀಲ, ವೀಣಾ ಕಾಶ್ಯಪ್ಪನವರ, ಯುವಕಾಂತ್ ಧಾಬಳೆಕರ ಹಾಗೂ ರಾಘವೇಂದ್ರ ಅವರನ್ನೊಳಗೊಂಡ ತಂಡ ಸಚಿವರು, ಶಾಸಕರು, ಮಾಜಿ ಶಾಸಕರು ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಜಿಲ್ಲಾಧ್ಯಕ್ಷರ ಆಯ್ಕೆ ಕುರಿತು ಅಭಿಪ್ರಾಯ ಪಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಯಾರ ಪರ ಒಲವು?
ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಅರ್ಜಿ ಸಲ್ಲಿಸಿರುವ ಆಕಾಂಕ್ಷಿಗಳು ತಮ್ಮ ರಾಜಕೀಯ ಹಾಗೂ ಸಂಘಟನಾ ಅನುಭವ, ಪಕ್ಷದ ಸಂಘಟನೆಗೆ ನೀಡಿದ ಕೊಡುಗೆ ಮತ್ತು ಮುಂದಿನ ದಿನಗಳಲ್ಲಿ ಕೈಗೊಳ್ಳಲಿರುವ ಕಾರ್ಯತಂತ್ರಗಳ ಬಗ್ಗೆ ವೀಕ್ಷಕರ ಮುಂದೆ ವಿವರಿಸಿದ್ದಾರೆ. ಹೀಗಾಗಿ ಅಂತಿಮ ಆಯ್ಕೆ ಯಾರ ಪರವಾಗಲಿದೆ ಎಂಬ ಚರ್ಚೆ ಕಾಂಗ್ರೆಸ್ ವಲಯದಲ್ಲಿ ಜೋರಾಗಿದೆ.

ಮಾಜಿ ಶಾಸಕ ಶರಣಪ್ಪ ಸುಣಗಾರ, ಸೋಮನಾಥ ಕಳ್ಳಿಮನಿ, ಸಂಗಮೇಶ ಪಾರಸನ, ಬಾಬುಗೌಡ ಪಾಟೀಲ, ವಿಠಲ ಕೋಳಿ ಸೇರಿದಂತೆ ಹಲವು ಮುಖಂಡರು ಪ್ರಮುಖ ಆಕಾಂಕ್ಷಿಗಳಾಗಿದ್ದಾರೆ. ವಿದ್ಯಾರಾಣಿ ತುಂಗಳ ಮತ್ತು ಮಹಾದೇವಿ ಗೋಣಸಗಿ ಅವರೂ ಮಹಿಳಾ ಕೋಟಾದಿಂದ ರೇಸ್‌ನಲ್ಲಿದ್ದಾರೆ.

ಅಲ್ಪಸಂಖ್ಯಾತರಿಗೆ ಅವಕಾಶದ ಕೂಗು
ಈ ಬಾರಿ ಜಿಲ್ಲಾಧ್ಯಕ್ಷ ಸ್ಥಾನ ಅಲ್ಪಸಂಖ್ಯಾತ ಸಮುದಾಯಕ್ಕೆ ನೀಡಬೇಕು ಎಂಬ ಬೇಡಿಕೆಯೂ ಪಕ್ಷದೊಳಗೆ ಬಲ ಪಡೆದುಕೊಂಡಿದೆ. ಇದುವರೆಗೆ ವಿಜಯಪುರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಅಲ್ಪಸಂಖ್ಯಾತ ಸಮುದಾಯಕ್ಕೆ ದೊರೆತಿಲ್ಲ ಎಂಬ ವಿಚಾರವನ್ನು ಮುಖಂಡರು ಹೈಕಮಾಂಡ್ ಗಮನಕ್ಕೆ ತಂದಿದ್ದಾರೆ ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದಲ್ಲಿ ರಾಜ್ಯಮಟ್ಟದ ಜವಾಬ್ದಾರಿ ನಿರ್ವಹಿಸಿರುವ ಮೊಹಮ್ಮದ್ ರಫೀಕ್ ಟಪಾಲ್ ಅವರ ಹೆಸರು ಮುನ್ನೆಲೆಗೆ ಬಂದಿದೆ. ಅವರಿಗೆ ಸಮುದಾಯದ ಹಲವು ಮುಖಂಡರ ಬೆಂಬಲವಿದೆ ಎನ್ನಲಾಗುತ್ತಿದ್ದು, ಈ ಬಾರಿ ಪಕ್ಷದ ಸಾಮಾಜಿಕ ಸಮೀಕರಣ ಹೇಗೆ ರೂಪುಗೊಳ್ಳಲಿದೆ ಎಂಬುದು ಕುತೂಹಲ ಮೂಡಿಸಿದೆ.

ಇನ್ನೊಂದೆಡೆ ಹಾಲಿ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಅವರನ್ನೇ ಮುಂದುವರಿಸಬೇಕು ಎಂಬ ಅಭಿಪ್ರಾಯವೂ ಪಕ್ಷದ ಒಂದು ವಲಯದಲ್ಲಿದೆ. ತಮ್ಮ ಎರಡು ವರ್ಷಗಳ ಅವಧಿಯನ್ನು ಇನ್ನೂ ಮೂರು ವರ್ಷ ವಿಸ್ತರಿಸುವಂತೆ ಅಥವಾ ವಿಧಾನ ಪರಿಷತ್‌ಗೆ ನಾಮನಿರ್ದೇಶನ ಮಾಡುವಂತೆ ಅವರು ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.
ಹೀಗಾಗಿ ಹೊಸ ಮುಖಕ್ಕೆ ಅವಕಾಶ ನೀಡಬೇಕೆಂಬ ಒತ್ತಾಯ, ಹಾಲಿ ಅಧ್ಯಕ್ಷರ ಮುಂದುವರಿಕೆ ಹಾಗೂ ಅಲ್ಪಸಂಖ್ಯಾತ ಸಮುದಾಯಕ್ಕೆ ಸ್ಥಾನ ನೀಡಬೇಕೆಂಬ ಬೇಡಿಕೆ—ಈ ಮೂರು ಆಯಾಮಗಳು ಜಿಲ್ಲಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ಮತ್ತಷ್ಟು ಕುತೂಹಲಕರವಾಗಿಸಿವೆ.

ಹೊಸ ಅಧ್ಯಕ್ಷರಿಗೆ ಸವಾಲುಗಳ ಸರಮಾಲೆ

ಯಾರು ಜಿಲ್ಲಾಧ್ಯಕ್ಷರಾದರೂ ವಿಜಯಪುರ ಕಾಂಗ್ರೆಸ್‌ನೊಳಗಿನ ವಿವಿಧ ಬಣಗಳ ನಡುವೆ ಸಮನ್ವಯ ಸಾಧಿಸುವುದು ಮೊದಲ ಸವಾಲಾಗಲಿದೆ. ನಾಯಕರ ನಡುವಿನ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಸಂಘಟನೆಯನ್ನು ಒಗ್ಗೂಡಿಸುವ ಜತೆಗೆ, ಬೂತ್ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸುವುದು ಹಾಗೂ ಕಾರ್ಯಕರ್ತರನ್ನು ಸಕ್ರಿಯಗೊಳಿಸುವ ಜವಾಬ್ದಾರಿಯೂ ನೂತನ ಅಧ್ಯಕ್ಷರ ಮೇಲಿದೆ.

ಬಿಜೆಪಿ–ಜೆಡಿಎಸ್ ರಾಜಕೀಯ ಚಟುವಟಿಕೆಗಳಿಗೆ ತಕ್ಕ ಪ್ರತಿತಂತ್ರ ರೂಪಿಸುವುದು, ಮುಂಬರುವ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಸಂಘಟನೆಯನ್ನು ಸಜ್ಜುಗೊಳಿಸುವುದು ಕೂಡ ಜಿಲ್ಲಾಧ್ಯಕ್ಷರ ಮುಂದಿರುವ ಪ್ರಮುಖ ಸವಾಲುಗಳಾಗಿವೆ.

ಸಚಿನ್ ಯಾದವ್ ನೇತೃತ್ವದ ವೀಕ್ಷಕರ ತಂಡದ ವರದಿ ಇದೀಗ ಎಐಸಿಸಿ ಹಾಗೂ ಕೆಪಿಸಿಸಿಯ ಅಂತಿಮ ನಿರ್ಧಾರಕ್ಕೆ ಪ್ರಮುಖ ಆಧಾರವಾಗಲಿದೆ. ಹೀಗಾಗಿ ಹಲವು ಆಕಾಂಕ್ಷಿಗಳ ಪೈಕಿ ಯಾರಿಗೆ ಕಾಂಗ್ರೆಸ್ ಹೈಕಮಾಂಡ್ ಜಿಲ್ಲಾಧ್ಯಕ್ಷ ಪಟ್ಟ ಕಟ್ಟಲಿದೆ ಎಂಬುದು ಸದ್ಯ ವಿಜಯಪುರ ರಾಜಕೀಯ ವಲಯದ ಪ್ರಮುಖ ಚರ್ಚೆಯಾಗಿದೆ.

WhatsApp Image 2025 02 05 at 18.09.20 1
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಬೀದರ್‌ | ಪಿಸ್ತೂಲ್‌ ಮಾರಾಟ ಜಾಲ ಪತ್ತೆ ಹಚ್ಚಿದ ಪೊಲೀಸರು: ಮುಖ್ಯ ಆರೋಪಿ ಸೇರಿ ನಾಲ್ವರ ಬಂಧನ

ಅಕ್ರಮವಾಗಿ ಪಿಸ್ತೂಲ್‌ ಹಾಗೂ ಜೀವಂತ ಗುಂಡುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ದಂಧೆಕೋರರನ್ನು...