ವಿಜಯಪುರ | ಸಾವಿರಾರು ಬೆಂಬಲಿಗರೊಂದಿಗೆ ರಾಜು ಆಲಗೂರು ನಾಮಪತ್ರ ಸಲ್ಲಿಕೆ; ಬಿಸಿಲನ್ನೂ ಲೆಕ್ಕಿಸದೆ ಮೊಳಗಿದ ಕಾಂಗ್ರೆಸ್ ಜೈಕಾರ

Date:

Advertisements

ಮೋದಿಯವರ ಸುಳ್ಳುಗಳೆಲ್ಲ ಬಹಿರಂಗವಾಗಿವೆ. ಅಚ್ಛೇ ದಿನಗಳೆಂದಯ ಹೇಳಿ ಅಧಿಕಾರ ಹಿಡಿದವರು ಕೆಟ್ಟ ದಿನಗಳನ್ನು ಕೊಟ್ಟರು. ನೋಟ್ ಬಂದ್, ಬೆಲೆ ಏರಿಕೆ, ಜಿಎಸ್‌ಟಿಯಿಂದ ದೇಶವನ್ನು ಇಕ್ಕಟ್ಟಿಗೆ ಸಿಲುಕಿಸಿದರು. ಕಾಂಗ್ರೆಸ್ ದೇಶವನ್ನು ಕಟ್ಟಿದ ಪಕ್ಷ. ಸ್ವಾತಂತ್ರ್ಯ ಬಂದ ನಂತರ ಸೂಜಿಯೂ ತಯಾರಾಗದ ಸ್ಥಿತಿಯಲ್ಲಿದ್ದ ಭಾರತವನ್ನು ಉಜ್ವಲಗೊಳಿಸಿದ್ದು ಕಾಂಗ್ರೆಸ್‌ ಎಂದು ಬೃಹತ್ ಕೈಗಾರಿಕೆ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ್ ಹೇಳಿದರು.

ವಿಜಯಪುರ ಲೋಕಸಭೆ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಪ್ರೊ. ರಾಜು ಆಲಗೂರು ಅವರು ಸೋಮವಾರ ತಮ್ಮ ಅಪಾರ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಿದ ವೇಳೆ ಮಾತನಾಡಿದರು.

“ನೀರಾವರಿ ಯೋಜನೆಗಳು, ಗ್ಯಾರಂಟಿ ಫಲಪ್ರದವಾದ ವಿಷಯಗಳನ್ನು ಗಮನಿಸಿ ಮತದಾರರು ಈ ಬಾರಿ ಆಲಗೂರರನ್ನು ಆರಿಸಿ ಕಳಿಸಬೇಕು” ಎಂದು ಕರೆ ನೀಡಿದರು.

Advertisements

ಸಚಿವ ಶಿವಾನಂದ ಪಾಟೀಲ್‌ ಮಾತನಾಡಿ, “ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ರೈತರಿಗೆ ಯೋಗ್ಯ ಬೆಲೆ, ಹೆಣ್ಣುಮಕ್ಕಳಿಗೆ ವರ್ಷಕ್ಕೆ ಲಕ್ಷ ರೂ. ನೀಡುವ ಗ್ಯಾರಂಟಿ ಘೋಷಿಸಿದೆ. ರಾಜ್ಯದಲ್ಲಿ ಸಿದ್ದರಾಮಯ್ಯರ ಸರ್ಕಾರ ನೀಡಿದ್ದ ಭರವಸೆಗಳನ್ನೆಲ್ಲ ಈಡೇರಿಸಿದೆ. ವಿಜಯಪುರ ಮತ್ತು ಬಾಗಲಕೋಟೆಯಲ್ಲಿ ಬದಲಾವಣೆ ಗಾಳಿ ಬೀಸಿದೆ. ಇವೆರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.‌

ತೆರೆದ ವಾಹನ ಏರಿದ ನಾಯಕರುಗಳು, ಭಾಷಣ ಮಾಡುತ್ತಲೇ ಸಾಗಿದ್ದು ವಿಶೇಷವಾಗಿತ್ತು. ಬಿಸಿಲು ಅಧಿಕವಾಗಿದ್ದರೂ ಕೂಡ ಲೆಕ್ಕಿಸದೆ ಸಾವಿರಾರು ಸಂಖ್ಯೆಯಲ್ಲಿದ್ದ ಜನರು, ಮಹಿಳೆಯರು ದಾರಿಯುದ್ದಕ್ಕೂ ಉತ್ಸಾಹದಿಂದ ಇದ್ದರು. ‘ಈ ಸಲ ಬದಲಿಸಬೇಕು ಬಿಜಾಪುರ’ ಎಂದು ಘೋಷಣೆ ಕೂಗುತ್ತಿದ್ದರು.

ಈ ಸುದ್ದಿ ಓದಿದ್ದೀರಾ? ಗದಗ | ಮಠ ತ್ಯಜಿಸಿ ರಾಜಕೀಯಕ್ಕೆ ಇಳಿಯಲಿ; ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಸೂಳಿಬಾವಿ ಕಿಡಿ

ಶಾಸಕರುಗಳಾದ ಯಶವಂತರಾಯಗೌಡ ಪಾಟೀಲ್, ಅಪ್ಪಾಜಿ ನಾಡಗೌಡ, ಅಶೋಕ ಮನಗೂಳಿ, ವಿಠ್ಠಲ ಕಟಕದೊಂಡ, ಪ್ರಕಾಶ ರಾಠೋಡ ಮಾತನಾಡಿದರು.‌ ಜಿಲ್ಲೆಯ ಇಬ್ಬರು ಸಚಿವರು ಹಾಗೂ ಕಾಂಗ್ರೆಸ್‌ನ ಎಲ್ಲ ಶಾಸಕರು, ನೂರಾರು ಮುಖಂಡರು, ಸಾವಿರಾರು ಕಾರ್ಯಕರ್ತರು ಇದ್ದರು.

ಮನಸೆಳೆದ ಲಂಬಾಣಿ ನೃತ್ಯ

ಹಲಗೆಯ ಸಪ್ಪಳಕ್ಕೆ ಲಂಬಾಣಿ ಮಹಿಳೆಯರು ಆಕರ್ಷಕ ಹೆಜ್ಜೆ ಹಾಕಿದರು. ನಾನಾ ವಾದ್ಯಗಳು ಸಾಥ್ ನೀಡಿದವು. ದಾರಿ ಮಧ್ಯೆ ಜನರಿಗೆ ನೀರಿನ ವ್ಯವಸ್ಥೆ ಮಾಡಲಾಗಿತ್ತು. ಅವರವರ ಪಾಡಿಗೆ ಕಲ್ಲಂಗಡಿ ಹಣ್ಣು, ಕಬ್ಬಿನ ಹಾಲು ಕುಡಿಯುತ್ತ ಹೆಜ್ಜೆ ಹಾಕುತ್ತಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X