ಬೆಂಬಲ ಬೆಲೆಯಡಿ ತೊಗರಿ ಖರೀದಿಯಲ್ಲಿ ವಿಜಯಪುರ ಪ್ರಥಮ ಸ್ಥಾನ: ಡಿಸಿ ಭೂಬಾಲನ್

Date:

ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿಸುವಲ್ಲಿ ವಿಜಯಪುರ ಜಿಲ್ಲೆ ಮೊದಲ ಸ್ಥಾನದಲ್ಲಿದ್ದರೆ ಕಲಬುರಗಿ ದ್ವಿತೀಯ ಸ್ಥಾನದಲ್ಲಿದೆ ಎಂದು ಜಿಲ್ಲಾಧಿಕಾರಿ ಟಿ ಭೂಬಾಲನ್‌ ತಿಳಿಸಿದ್ದಾರೆ.

- Advertisement -

“ವಿಜಯಪುರ ಜಿಲ್ಲೆಯಾದ್ಯಂತ ನೊಂದಾಯಿಸಿಕೊಂಡಿದ್ದ 45,843 ರೈತರ ಪೈಕಿ 39,537 ರೈತರಿಂದ ಈವರೆಗೆ ಸುಮಾರು 6.56 ಲಕ್ಷ ಕ್ವಿಂಟಲ್ ತೊಗರಿಯನ್ನು ಖರೀದಿಸಲಾಗಿದೆ. ಜಿಲ್ಲೆಯಲ್ಲಿ 10 ತೊಗರಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು, 9.2 ಲಕ್ಷ ಕ್ವಿಂಟಾಲ್ ಪ್ರಮಾಣಕ್ಕೆ 45,843 ರೈತರು ನೊಂದಣಿ ಮಾಡಿಕೊಂಡಿದ್ದಾರೆ. ಪ್ರತಿ ಕ್ವಿಂಟಲ್ ತೊಗರಿಗೆ ರೂ.7,550 ರಂತೆ ನಾಫೆಡ್ ಸಂಸ್ಥೆಯಿಂದ 22,030 ರೈತರಿಗೆ 270 ಕೋಟಿ ರೂ.ಗಳನ್ನು ಹಾಗೂ 450 ರೂ.ರಂತೆ ರಾಜ್ಯ ಪ್ರೊತ್ಸಾಹ ಧನವನ್ನು ರೂ.10.44 ಕೋಟಿಗಳನ್ನು 14,613 ರೈತರಿಗೆ ಡಿಬಿಟಿ ಮೂಲಕ ಜಮೆ ಮಾಡಲಾಗಿದೆ. ಬಾಕಿ ಉಳಿದ ರೈತರಿಗೆ ಹಂತ ಹಂತವಾಗಿ ಜಮೆ ಮಾಡಲಾಗುತ್ತಿದೆ”

ತೊಗರಿ ಖರೀದಿ ಪ್ರಕ್ರಿಯೆಯು ಮೇ.31ರವರೆಗೆ ಚಾಲ್ತಿಯಲ್ಲಿರುವುದರಿಂದ ಜಿಲ್ಲೆಯಲ್ಲಿ ತೊಗರಿ ಬೆಳೆದಿರುವ ರೈತರು ತಮ್ಮ ಸಮೀಪದ ಪಿಎಸಿಎಸ್, ಟಿಎಪಿಸಿಎಂಎಸ್, ಎಫ್‍ಪಿಓ ಸಂಘಗಳಲ್ಲಿ ತೊಗರಿ ಮಾರಾಟ ಮಾಡಿ ಬೆಂಬಲ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಅವರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನೂ ಓದಿ: ವಿಜಯಪುರ | ನಿವೃತ್ತ ಅಂಗನವಾಡಿ ಕಾರ್ಯಕರ್ತೆಯರಿಗೆ ಉಪಧನ ನೀಡುವಂತೆ ಸರ್ಕಾರಕ್ಕೆ ಮನವಿ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...