ವಿಜಯಪುರ | ಫಲವತ್ತಾದ ಕೃಷಿಭೂಮಿ ಕೈಗಾರಿಕಾ ಉದ್ದೇಶಕ್ಕೆ ಬಳಸಿದರೆ ಹೋರಾಟಕ್ಕೆ ಸಿದ್ಧ: ರೈತ ಸಂಘ

Date:

Advertisements

ವಿಜಯಪುರ ಜಿಲ್ಲೆಯ ತಿಡಗುಂದಿ ಸಮೀಪ 1,203 ಎಕರೆ ರೈತರ ಫಲವತ್ತಾದ ಕೃಷಿಭೂಮಿಯನ್ನು ಕೈಗಾರಿಕಾ ಉದ್ದೇಶಕ್ಕಾಗಿ ಬಳಸುವ ಯೋಜನೆಯನ್ನು ಇಲ್ಲಿಗೆ ಬೀಡಬೇಕು. ಇಲ್ಲವಾದಲ್ಲಿ 350 ಸದಸ್ಯರೊಡನೆ ತೀವ್ರ ಹೋರಾಟಮಾಡಬೇಕಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಎಚ್ಚರಿಕೆ ನೀಡಿತು.

ಜಿಲ್ಲಾಧಿಕಾರಿ ಮೂಲಕ ರಾಜ್ಯದ ಕೈಗಾರಿಕಾ ಸಚಿವ ಎಂ ಬಿ ಪಾಟೀಲರು, ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಪಾಲರು ಹಾಗೂ ಕೈಗಾರಿಕಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಿದರು.

ವಿಜಯಪುರ ನಗರದ ಡಾ. ಬಿ ಆ‌ರ್ ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ ಹಸಿರು ಸೇನೆಯ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಮಾತನಾಡಿ, “ಜಿಲ್ಲೆಯ ನಾಗಠಾಣ ಹೋಬಳಿಯ ತಿಡಗುಂದಿ ವ್ಯಾಪ್ತಿಯ ಒಟ್ಟು 1,203 ಎಕರೆ ರೈತರ ಫಲವತ್ತಾದ ಕಪ್ಪು ಮಣ್ಣಿನ ಎರೆ ಜಮೀನುಗಳನ್ನು ಕೈಗಾರಿಕಾ ಪ್ರದೇಶಕ್ಕೆ ಬಳಸಿಕೊಳ್ಳಲು ತಯಾರಿ ನಡೆದಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಈ ಭಾಗದ ಯಾವ ರೈತರು ಕೂಡಾ ಈ ಬೆಲೆಬಾಳುವ ಫಲವತ್ತಾದ ಭೂಮಿಯನ್ನು ಕಳೆದುಕೊಳ್ಳಲು ತಯಾರಿಲ್ಲ. ಕೂಡಲೇ ಈ ಯೋಜನೆಯನ್ನು ಇಲ್ಲಿಗೆ ಕೈಬೀಡಬೇಕು” ಎಂದು ಒತ್ತಾಯಿಸಿದರು.

Advertisements

ಮುಖಂಡ ಗಿರೀಶ ತಾಳಿಕೋಟಿ ಮಾತನಾಡಿ, “ಸಚಿವ ಎಂ ಬಿ ಪಾಟೀಲರೇ ನಮ್ಮ ಭಾಗಕ್ಕೆ ನೀರಿನ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ. ಪದವಿಧರರಾದ ನಾವೂಗಳು ಬೇರೆಕಡೆ ಕೆಲಸ ಮಾಡುವುದು ಬೇಡ. ನಮ್ಮ ಜಮೀನಿನಲ್ಲಿಯೇ ದುಡಿದು ಮಾಲೀಕರಾಗಿ ಇರೋಣ ಎನ್ನುವ ಆಸೆಯಿಂದ ನಮ್ಮ ಸ್ವಗ್ರಾಮಕ್ಕೆ ಬಂದು ವ್ಯವಸಾಯ ಮಾಡಿಕೊಂಡು ಸಂತೋಷದಿಂದ ಇದ್ದೇವೆ. ಆದರೆ ಈಗ ಏಕಾ-ಕೈಗಾರಿಕೆಗಾಗಿ ಒಳ್ಳೆಯ ಜಮೀನನ್ನು ಬಳಸಿಕೊಳ್ಳುವುದು ಯಾವ ನ್ಯಾಯ, ನಾವ್ಯಾರೂ ನಮ್ಮ ಭೂಮಿಯನ್ನು ಮಾರಿಕೊಳ್ಳಲ್ಲು ತಯಾರಿಲ್ಲ” ಎಂದರು.

ಹಿರಿಯರಾದ ಅಶೋಕ ಪಾಟೀಲ ಹಾಗೂ ಸಿದ್ದರಾಮ ತಿಲ್ಯಾಳ ಮಾತನಾಡಿ, “ಜಿಲ್ಲೆಯಲ್ಲಿ ಈ ಮುಂಚೆ ಬೇರೆ ಬೇರೆ ಉದ್ದೇಶಕ್ಕಾಗಿ ನಿಗದಿ ಮಾಡಿರುವ ಭೂಮಿಯನ್ನು ಸಂಪೂರ್ಣವಾಗಿ ಬಳಸಿಕೊಂಡು ನಂತರದಲ್ಲಿ ಹೊಸ ಹೊಸ ಯೋಜನೆಗಳಿಗೆ ಕೈಹಾಕಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಉಡುಪಿ | ಅನ್ಯಾಯಕ್ಕೆ ಒಳಗಾಗಿರುವವರಿಗೆ ನ್ಯಾಯ ಕೊಡಿಸುವುದು ನಮ್ಮ ಕರ್ತವ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

ವೇಳೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮನಗೌಡ ಪಾಟೀಲ, ತಾಲೂಕು ಅಧ್ಯಕ್ಷ ಮಹಾದೇವಪ್ಪ ತೇಲಿ, ಸಂಗಪ್ಪಟಕ್ಕೆ, ಜಕರಾಯ ಪೂಜಾರಿ, ಮುಖಂಡ ಭೀರಪ್ಪ ಬಿಜ್ಜರಗಿ, ಅಶೋಕಗೌಡ ಬಿರಾದಾರ, ಮಡಿವಾಳ ತಿಲ್ಯಾಳ, ಗೋಪಾಲ ಭೋಸಲೆ, ಗೌಸಪಾಕ್ ವಾಲಿಕಾರ, ಅಶೋಕ ಪಾಟೀಲ, ಚನ್ನಪ್ಪಗೋಟೆ, ಗೌಡಪ್ಪ ಬಿರಾದಾರ, ಶ್ರೀಶೈಲ ನಾವಿ, ಮಹೇಶ ನಾಟಿಕಾರ, ಚಿದಾನಂದಕಟ್ಟಿಮನಿ, ಅಂಜನಾ ತಿಲ್ಯಾಳ, ನೀಲವ್ವ ಬಿಜ್ಜರಗಿ, ಪ್ರದೀಪ ಚಲವಾದಿ, ಪರಶುರಾಮ ಹತ್ತಿ, ಮಲ್ಲಿಕಾರ್ಜುನಕಟ್ಟಿಮನಿ, ಶ್ರೀಶೈಲ ನಾವಿ, ಶಿವಪ್ಪ ಪೂಜಾರಿ, ನೀಲಮ್ಮಜಂಬಗಿ, ಶ್ರೀದೇವಿ ಹೂಗಾರ, ಶಾಂತಾದರ್ಗಾ, ನೀಲವ್ವ ಬಿಜಾಪುರ ಸೇರಿದಂತೆ ಸುಮಾರು 350 ಕುಟುಂಬ ಸದಸ್ಯರು ಹಾಗೂ ರೈತ ಸಂಘದ ಪದಾಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X