ವಿಜಯಪುರ | ಸೂಕ್ತ ಪರಿಹಾರ ನೀಡುವುದಾಗಿ ಅಧಿಕಾರಿಗಳ ಭರವಸೆ: ಧರಣಿ ಹಿಂಪಡೆದ ನಿರಾಶ್ರಿತರು

Date:

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದ ಮಿನಿ ವಿಧಾನಸೌಧದ ಮುಂಭಾಗ ಕಳೆದ 31 ದಿನಗಳಿಂದ ವಿವಿಧ ಬೇಡಿಕೆ ಮುಂದಿಟ್ಟುಕೊಂಡು ಮುಖಂಡ ಅಶೋಕ ಗೌಡ ಪಾಟೀಲ್ ನೇತೃತ್ವದಲ್ಲಿ ನಿರಾಶ್ರಿತರು ನಡೆಸುತ್ತಿದ್ದ ಧರಣಿಯನ್ನು ಅಧಿಕಾರಿಗಳ ಭರವಸೆ ಮೇರೆಗೆ ಹಿಂಪಡೆಯಲಾಗಿದೆ.

- Advertisement -

ತಾಲೂಕಿನ ಕುದುರೆ ಸಾಲವಾಡಗಿ ಗ್ರಾಮದಲ್ಲಿ ಎಳವಾರ ಗ್ರಾಮಕ್ಕೆ ಹೋಗುವ ಮುಖ್ಯ ರಸ್ತೆಯ ಅಭಿವೃದ್ಧಿ ಅಗಲೀಕರಣ ನೆಪದಲ್ಲಿ ತೆರವುಗೊಳಿಸಿದ 143ಕ್ಕೂ ಅಧಿಕ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿ ನಿರಾಶ್ರಿತರು ಕಳೆದ 9 ದಿನಗಳಿಂದ ಧರಣಿ ಆರಂಭಿಸಿದ್ದರು. ಸ್ಥಳಕ್ಕೆ ಲೋಕೋಪಯೋಗಿ ಇಲಾಖೆ ಇಇ ಸಿ ಎಸ್ ಪೊಲೀಸ್ ಪಾಟೀಲ, ತಾಪಂ ಇಒ ಪ್ರಕಾಶ ದೇಸಾಯಿ ಭೇಟಿ ನೀಡಿ ಧರಣಿ ನಿರತರನ್ನು ಮನವೊಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ನಿರಾಶ್ರಿತರನ್ನು ಉದ್ದೇಶಿಸಿ ಸಿ ಎಸ್ ಪೊಲೀಸ್ ಪಾಟೀಲ ಮಾತನಾಡಿ, “ತಾಲೂಕಿನ ಕುದುರೆ ಸಾಲವಾಡಗಿ ಗ್ರಾಮದಲ್ಲಿ ಜಿಲ್ಲಾ ಮುಖ್ಯರಸ್ತೆ ನಿರ್ಮಾಣ ಕಾಮಗಾರಿ ಆರಂಭ ಮಾಡುವ ಸಂದರ್ಭದಲ್ಲಿ ಕೆಲವು ಮನೆಗಳನ್ನು ತೆರವುಗೊಳಿಸಲು ಕುರಿತು ಆಯಾ ಮನೆಗಳಿಗೆ ತಿಳಿಸಲಾಗಿತ್ತು. ಆಗ ಅವರು ಸುಮ್ಮನೆ ಇದ್ದ ಪರಿಣಾಮ ಕಾಮಗಾರಿ ಆರಂಭಿಸಿ ಮನೆಗಳನ್ನು ತೆರವುಗೊಳಿಸಲಾಗಿದೆ. ಯಾರಿಗೂ ಅನ್ಯಾಯವಾಗದಂತೆ ಜಿಲ್ಲಾ ಮುಖ್ಯ ರಸ್ತೆ ಅಭಿವೃದ್ಧಿ ಮಾಡಲು ಮುಂದಾಗುತ್ತಿದ್ದೇವೆ. ನಿಮ್ಮೆಲ್ಲರ ಸಹಕಾರ ಅಗತ್ಯವಿದೆ. ತೆರವುಗೊಳಿಸಿದ ಮನೆಯವರಿಗೆ ಪಂಚಾಯಿತಿಯಿಂದ ಸೂಕ್ತ ಜಾಗ ಕಲ್ಪಿಸಲಾಗುವುದು. ಸಂಪೂರ್ಣ ಮನೆ ತೆರವುಗೊಂಡವರಿಗೆ ಗುತ್ತಿಗೆದಾರರ ಅಗತ್ಯ ಮನೆ ಸಾಮಗ್ರಿ ನೀಡಲಿದ್ದು, ಪಂಚಾಯಿತಿಯವರು ನೀಡುವ ಜಾಗದಲ್ಲಿ ಮನೆ ನಿರ್ಮಾಣ ಮಾಡಿಕೊಳ್ಳಬಹುದು. ಉಳಿದವರಿಗೂ ಅನುಕೂಲ ಮಾಡಿಕೊಡಲಾಗುವುದು” ಎಂದು ಭರವಸೆ ನೀಡಿದ ಅವರು, ನಾಳೆಯಿಂದಲೇ ಮುಖ್ಯರಸ್ತೆ ಕಾಮಗಾರಿ ಆರಂಭಿಸಲಾಗುತ್ತಿದೆ. ತಾವು ಸಹಕಾರ ನೀಡಬೇಕೆಂದು ಕೋರಿದರು.

ತಾಪಂ ಇಒ ಪ್ರಕಾಶ್ ಮಾತನಾಡಿ, “ಕುದುರೆ ಸಾಲವಾಡಗಿಯ ಸರ್ಕಾರಿ ಜಾಗದಲ್ಲಿ ನಿರಾಶ್ರಿತರಿಗೆ ಅಗತ್ಯವಿರುವ ಜಾಗ ಕೊಡಲಾಗುವುದು. ಕಾನೂನು ರೀತಿಯಲ್ಲಿ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಹೇಳಿದರು.

ಧರಣಿ ನೇತೃತ್ವ ವಹಿಸಿದ್ದ ಮುಖಂಡ ಅಶೋಕ ಗೌಡ ಪಾಟೀಲ ಮಾತನಾಡಿ, “ಅಧಿಕಾರಿಗಳು ಬಡಜನರಿಗೆ ನ್ಯಾಯ ಒದಗಿಸಿಕೊಡುವ ಭರವಸೆ ನೀಡರುವುದು ಸ್ವಾಗತಾರ್ಹ. ಯಾವುದೇ ಕಾರಣಕ್ಕೂ ಬಡವರಿಗೆ ಮೋಸವಾಗಬಾರದು” ಎಂದರು.‌

ಈ ಸುದ್ದಿ ಓದಿದ್ದೀರಾ? ಹಾಸನ | ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ಕ್ರಮ, ನೀತಿಗಳ ವಿರುದ್ಧ ಹೋರಾಟ ತೀವ್ರಗೊಳ್ಳಬೇಕು: ಸಿಐಟಿಯು ಕೆ ಹೇಮಲತಾ

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಾ. ಪ್ರಭುಗೌಡ ಲಿಂಗದಹಳ್ಳಿ, ರೈತ ಮುಖಂಡ ಅರವಿಂದ ಕುಲಕರ್ಣಿ, ಲೋಕೋಪಯೋಗಿ ಇಲಾಖೆ ಎಇಇ ಎಸ್‌ಜಿ ದೊಡ್ಡಮನಿ, ತಹಶೀಲ್ದಾರ್ ವೈ ಎಸ್ ಸೋಮನಕಟ್ಟಿ, ಡಾ. ಹಸನ್ ಢವಳಗಿ, ಬಾಬು ನದಾಫ್, ಕಾಮೇಶ್ ಭಜಂತ್ರಿ, ಗುರುರಾಜ ಗುಡಿಮನಿ, ಯಮನೂರಿ ಚಲವಾದಿ, ನಜೀರ ಪಾಟೀಲ ಗುಡ್ನಾಳ, ಅರವಿಂದ ಸಜ್ಜನ, ಶಾಂತಗೌಡ ಪಾಟೀಲ, ರಮಜಾನ ಮಜಾವರ, ಬಾಳ ಸಾಹೇಬಗೌಡ ಪಾಟೀಲ, ಬಸವರಾಜ ದೇಸಾಯಿ, ಶ್ರೀಕಾಂತ ರೆಡ್ಡಿ, ದಾವಲಸಾಬ ಅತ್ತರ, ಶರಣಪ್ಪ ನಾಯ್ಕೋಡಿ, ಹನುಮಂತ ಲಗಳಿ, ಅಲ್ತಾಫ್ ಅತ್ತರ, ಶ್ರೀಕಾಂತ ಅಡಚದ, ಪರಸಪ್ಪ ಕಳ್ಳಿಮನಿ, ಮುತ್ತುರಾಜ ಹಾಲಿಹಾಳ, ಶೇಕಿನ ಎಲಿಗಾರ, ಪಾವಡಪ್ಪ ಇಂಗಳಗಿ, ಕಮಲವ್ವ ಕಳ್ಳಿಮನಿ, ಬಸ್ಸಮ್ಮ ತಮದಡ್ಡಿ ದಾವಲಬಿ ಎಲೆಗಾರ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...