ವಿಜಯಪುರ | ಉಳ್ಳವರ ಸೇವೆ ಮಾಡುತ್ತಿರುವ ಬಂಡವಾಳಶಾಹಿ ಪಕ್ಷಗಳನ್ನು ತಿರಸ್ಕರಿಸಿ: ಸುನೀತ್‌ಕುಮಾರ

Date:

ಕೇವಲ ಉಳ್ಳವರ ಸೇವೆ ಮಾಡುತ್ತಿರುವ ಬಂಡವಾಳಶಾಹಿ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿಗಳನ್ನು ತಿರಸ್ಕರಿಸಿ, ದುಡಿಯುವಜನರ ಪರವಾದ ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷವನ್ನು ಬೆಂಬಲಿಸಿ, ಪಕ್ಷದ ಅಭ್ಯರ್ಥಿ ನಾಗಜ್ಯೋತಿ ಬಿ. ಎನ್. ಅವರನ್ನು ಗೆಲ್ಲಿಸಬೇಕು ಎಂದು ಎಸ್‌ಯುಸಿಐ ಪಕ್ಷದ ರಾಜ್ಯ ಸೆಕ್ರೆಟರಿಯಟ್ ಸದಸ್ಯ ಕಾ. ಟಿ. ಎಸ್. ಸುನೀತ್‌ಕುಮಾರ ಹೇಳಿದರು.

- Advertisement -

ವಿಜಯಪುರ ಲೋಕಸಭಾ ಕ್ಷೇತ್ರದ ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷದ ಅಭ್ಯರ್ಥಿ ನಾಗಜ್ಯೋತಿ ಬಿ.ಎನ್. ಅವರ ಚುನಾವಣಾ ಪ್ರಚಾರಕ್ಕಾಗಿ ಇಡೀ ಜಿಲ್ಲೆಯಾದ್ಯಂತ ಹಮ್ಮಿಕೊಂಡಿರುವ ‘ಜೀಪ್ ಜಾಥಾʼಗೆ ಚಾಲನೆ ನೀಡಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸಾಕ್ಷ್ಯ ಚಿತ್ರಗಳಿರದ ದೇಶವು ಚರಿತ್ರೆ ಇರದ ರಾಷ್ಟ್ರದಂತೆ ಎಂದಿದ್ದ...

ಚಿಲಿ ದೇಶದ ಜನರ ಸಾಮಾಜಿಕ ಬದುಕು ಹಾಗೂ ರಾಜಕೀಯ ಬೆಳವಣಿಗೆಗಳು ಹೆಣೆದುಕೊಂಡ ಘನವಾದ ಚರಿತ್ರೆಯ ಸಂಪುಟವಾಗಿ ಕಟ್ಟಿದ ಧೀಮಂತ ಸಿನೆಮಾ ಕಲಾವಿದ ಪ್ಯಾಟ್ರಿಷಿಯೊ ಗುಜ್ಮಾನ್, ಇತ್ತೀಚಿಗೆ ಇಲ್ಲವಾದರು. ಅವರ ಸೃಜನಶೀಲತೆ, ತುಡಿತ ಮತ್ತು...

ಸೂಕ್ತ ಸಮಯಕ್ಕಾಗಿ ಕಾಯುತ್ತಲೇ ಇರುವ ಕುಮಾರಸ್ವಾಮಿ!

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ ರಾಜಿಯಿಲ್ಲ. ರಾಜ್ಯದಲ್ಲಿನ ಘಟನೆ ಬಗ್ಗೆ ಬಾಯಿ ಮುಚ್ಚಿಕೊಂಡಿರಲು ಆಗಲ್ಲ" ಎಂದಿದ್ದಾರೆ ಕುಮಾರಸ್ವಾಮಿ. ಈ ಬಾರಿಯಾದರೂ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಾರೆಯೇ? ‘ಸ್ಪೋಟಕ ಹೇಳಿಕೆ’,...

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಸ್ವಾತಂತ್ರ್ಯಾನಂತರ ಆಳ್ವಿಕೆ ನಡೆಸಿದ ಎಲ್ಲಾ ಪಕ್ಷಗಳು ಕೇವಲ ಬಂಡವಾಳಿಗರ ಸೇವೆ ಮಾಡಿವೆ ಹಾಗೂ ಜನತೆಯನ್ನು ಜಾತಿ-ಧರ್ಮದ ಆಧಾರದ ಮೇಲೆ ಒಡೆದು ಆಳ್ವಿಕೆ ನಡೆಸಿವೆ. ಉದಾರೀಕರಣ, ಖಾಸಗೀಕರಣ ಹಾಗೂ ಜಾಗತೀಕರಣ ನೀತಿಗಳನ್ನು ಜಾರಿಗೊಳಿಸಿದ ಕಾಂಗ್ರೆಸ್ ಸರ್ಕಾರ ಜನತೆಗೆ ಬೇಕಾದ ಎಲ್ಲ ಮೂಲಭೂತ ಸೌಲಭ್ಯಗಳನ್ನು ಕಡಿತಗೊಳಿಸಿತು. ನಂತರ ಅಧಿಕಾರಕ್ಕೆ ಬಂದ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಅದೇ ಯೋಜನೆಗಳನ್ನು ವೇಗವಾಗಿ ಇನ್ನಷ್ಟು ಕಠಿಣವಾಗಿ ಜಾರಿಗೊಳಿಸುತ್ತಾ ಜನರನ್ನು ಬೀದಿಪಾಲಾಗಿಸಿದೆ. ಆದ್ದರಿಂದ ದುಡಿಯುವ ಜನರ, ರೈತ-ಕಾರ್ಮಿಕರ ಹಿತವನ್ನು ಕಾಪಾಡಲು ಅವರ ಧ್ವನಿಯನ್ನು ಸಂಸತ್ತಿನಲ್ಲಿ ಮೊಳಗಿಸಲು ನಮ್ಮ ಅಭ್ಯರ್ಥಿ ನಾಗಜ್ಯೋತಿ ಬಿ.ಎನ್. ರವರನ್ನು ಗೆಲ್ಲಿಸಿ ಎಂದು ಹೇಳಿದರು.

ಪಕ್ಷದ ಜಿಲ್ಲಾ ಕಾರ್ಯದರ್ಶಿ ಕಾ.ಬಿ. ಭಗವಾನ್ ರೆಡ್ಡಿ ಮಾತನಾಡಿ, ಅದಾನಿ ಅಂಬಾನಿಗಳ ಹಿತಕ್ಕಾಗಿ ರೈತರ ಹಿತವನ್ನು ಬಲಿ ಕೊಡುತ್ತಿರುವ ಮೋದಿ ಸರ್ಕಾರ ಎಲ್ಲ ಪ್ರಜಾತಾಂತ್ರಿಕ ಹಕ್ಕುಗಳನ್ನು ಗಾಳಿಗೆ ತೂರಿ ಫ್ಯಾಸಿವಾದಿ ಧೋರಣೆಯನ್ನು ಅನುಸರಿಸುತ್ತಿದೆ. ಚುನಾವಣಾ ಬಾಂಡ್‌ಗಳ ಹೆಸರಲ್ಲಿ ಭ್ರಷ್ಟಾಚಾರವನ್ನು ಅಧಿಕೃತಗೊಳಿಸಿರುವ ಮೋದಿ ಸರ್ಕಾರ ಧರ್ಮದ ಹೆಸರಲ್ಲಿ ಜನರನ್ನು ಹಾದಿ ತಪ್ಪಿಸುತ್ತಿದೆ. ಈಗಾಗಲೇ ಜನರಿಂದ ತಿರಸ್ಕರಿಸಿಕೊಂಡಿರುವ ಕಾಂಗ್ರೆಸ್ ಸರ್ಕಾರ ಸಹ ಹಿಂದೆ ಅದೇ ನೀತಿಗಳನ್ನು ಅನುಸರಿಸಿದೆ. ಆದ್ದರಿಂದ ಜನತೆ ತಮ್ಮ ನೈಜ ಜನಪ್ರತಿನಿಧಿಯನ್ನು ಕ್ರಾಂತಿಕಾರಿ ಕಮ್ಯುನಿಸ್ಟ್ ಪಕ್ಷವಾದ ಎಸ್‌ಯುಸಿಐ(ಸಿ) ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸುವ ಮೂಲಕ ಕಂಡುಕೊಳ್ಳಬೇಕು ಎಂದು ಹೇಳಿದರು.

ನಂತರ ಜಿಲ್ಲೆಯ ಪ್ರಮುಖ ಗ್ರಾಮಗಳಾದ ಸಾರವಾಡ, ಬಬಲೇಶ್ವರ, ಕೋಟ್ಯಾಳ, ತಿಕೋಟಾ, ಹೊನವಾಡ, ಬಿಜ್ಜರಗಿ, ಬಾಬಾನಗರ, ಕನಮಡಿ, ಸೋಮದೇವರ ಹಟ್ಟಿಗಳಲ್ಲಿ ಪಕ್ಷದ ಅಭ್ಯರ್ಥಿ ನಾಗಜ್ಯೋತಿ ಬಿ.ಎನ್ ಅವರನ್ನು ಗೆಲ್ಲಿಸಲು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಜಾಥಾದಲ್ಲಿ ಜಿಲ್ಲಾ ಸಮಿತಿ ಸದಸ್ಯರಾದ ಮಲ್ಲಿಕಾರ್ಜುನ ಎಚ್.ಟಿ, ಸಿದ್ಧಲಿಂಗ ಬಾಗೇವಾಡಿ, ಎಚ್.ಟಿ. ಭರತಕುಮಾರ್, ಕಾರ್ಯಕರ್ತರಾದ ಲಲಿತಾ ಬಿಜ್ಜರಗಿ, ಶಿವಭಾಳಮ್ಮ ಕೊಂಡಗೂಳಿ, ಸುರೇಖಾ ಕಡಪಟ್ಟಿ, ಕಾವೇರಿ ರಜಪೂತ ಸೇರಿದಂತೆ ಪಕ್ಷದ  ಸದಸ್ಯರು, ಕಾರ್ಯಕರ್ತರು, ಬೆಂಬಲಿಗರು ಭಾಗವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹ: ರಾಷ್ಟ್ರಮಟ್ಟದ ಸಾಧನೆಗೆ ಸಚಿವ ಕಾಶಪ್ಪನವರ ಕರೆ

ಶಿಕ್ಷಣದ ಜತೆಗೆ ಕ್ರೀಡೆಗೂ ಸಮಾನ ಮಹತ್ವ ನೀಡುವ ಮೂಲಕ ಮಕ್ಕಳ ಸರ್ವಾಂಗೀಣ...

ಭಟ್ಕಳದಲ್ಲಿ ಗಣಪತಿ ವಿಸರ್ಜನೆ ವೇಳೆ ಮಸೀದಿ, ಮದರಸಾಕ್ಕೆ ಕಲ್ಲು ತೂರಾಟ ಆರೋಪ; ಪ್ರಕರಣ ದಾಖಲು

ಗಣಪತಿ ವಿಸರ್ಜನಾ ಮೆರವಣಿಗೆ ಸಂದರ್ಭದಲ್ಲಿ ಮಸೀದಿ ಹಾಗೂ ಮದರಸಾಕ್ಕೆ ಕಲ್ಲು ತೂರಾಟ...

ರಾಯಚೂರು | ಮಳೆಗಾಲ ಮುಗಿಯುವ ಮುನ್ನವೇ ಬಿಸಿಲಿನ ತಾಪ; ರಾಯಚೂರಿನಲ್ಲಿ 37.6 ಡಿಗ್ರಿ ಉಷ್ಣಾಂಶ

ಸೆಪ್ಟೆಂಬರ್‌ ಮಳೆಗಾಲ ಮುಕ್ತಾಯವಾಗಿ, ಅಕ್ಟೋಬರ್‌ನಲ್ಲಿ ಚಳಿಗಾಲ ಆರಂಭವಾಗಬಹುದು ಎಂಬ ನಿರೀಕ್ಷೆಯಲ್ಲಿದ್ದ ಜನರಿಗೆ...

ಕಲಬುರಗಿ | ಔಷಧೀಯ ಸಸ್ಯಗಳ ಪರಿಚಯದೊಂದಿಗೆ ಪರಿಸರ ಸಂರಕ್ಷಣೆಗೆ ಕರೆ

ಔಷಧೀಯ ಹಾಗೂ ಆಯುರ್ವೇದಿಕ ಗಿಡಮೂಲಿಕೆಗಳ ಮಹತ್ವ, ಸಾಂಪ್ರದಾಯಿಕ ಬಳಕೆ ಮತ್ತು ಆರೋಗ್ಯದ...