ವಿಜಯಪುರ | ಪ್ರವಾಹ ಸಂತ್ರಸ್ತರಿಗೆ ಶೀಘ್ರವೇ ಪರಿಹಾರ: ಸಚಿವ ಎಂ ಬಿ ಪಾಟೀಲ

Date:

ಯಾರೂ ಭಯಪಡವ ಅವಶ್ಯಕತೆ ಇಲ್ಲ. ಸರ್ಕಾರ ಹಾಗೂ ವಿಜಯಪುರ ಜಿಲ್ಲಾಡಳಿತ ಸಂತ್ರಸ್ತರೊಂದಿಗಿವೆ. ಪರಿಹಾರಕ್ಕೆ ತುತ್ತಾಗಿರುವ ಪ್ರತಿಯೊಬ್ಬರಿಗೂ ಪರಿಹಾರ ಕಲ್ಪಿಸಲಾಗುವುದು. ಪ್ರವಾಹದಿಂದ ಹಾನಿಗೊಳಗಾದ ಬೆಳೆನಾಶ, ಮನೆ ಹಾನಿಯ ಕುರಿತು ಸಮಗ್ರ ಸಮೀಕ್ಷೆ ನಡೆಸಿ ಪರಿಹಾರ ಒದಗಿಸಲು ಕ್ರಮ ವಹಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ ಬಿ ಪಾಟೀಲ ತಿಳಿಸಿದರು.

- Advertisement -

ಪ್ರವಾಹ ಪೀಡಿತ ವಿಜಯಪುರ ಜಿಲ್ಲೆಯ ಸಿಂದಗಿ ಹಾಗೂ ಇಂಡಿ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ದೇವರನಾವದಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕುಮಾರ್ಸಾಗಿ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ತೆರೆಯಲಾದ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ ಕಾಳಜಿ ಕೇಂದ್ರಗಳಲ್ಲಿ ಕಲ್ಪಿಸಿರುವ ಸೌಲಭ್ಯಗಳ ಕುರಿತು ಪರಿಶೀಲಿಸಿದರು. ಅಲ್ಲಿನ ಸಂತ್ರಸ್ತರೊಂದಿಗೆ ಮಾತನಾಡಿ, “ಕಾಳಜಿ ಕೇಂದ್ರಗಳಲ್ಲಿ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗಿದೆ. ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಜಿಲ್ಲಾಡಳಿತ ಸನ್ನದ್ಧವಾಗಿದ್ದು, ಯಾವುದೇ ಜನ ಜಾನುವಾರುಗಳ ಪ್ರಾಣ ಹಾನಿ ಆಗದಂತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

“ಉಜನಿ ಡ್ಯಾಮ್ ನಿಂದ ಸೀನಾ ನದಿಯ 3 ಲಕ್ಷ ಕ್ಯೂಸೆಕ್ ನೀರು ಹರಿಬಿಡುವುದರಿಂದ ಸ್ವಾಭಾವಿಕವಾಗಿ ಜಿಲ್ಲೆಯ ಇಂಡಿ ಹಾಗೂ ಸಿಂದಗಿ ತಾಲೂಕಿನ ವಿವಿಧ ಭಾಗದಲ್ಲಿ ತೀವ್ರವಾದ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಕುಮಸಿಗಿಯ ನೂರು ಮನೆಗಳು ಸಂಪೂರ್ಣವಾಗಿ ನೀರಿನಲ್ಲಿ ಮುಳುಗಿದ್ದು, ಈ ಕುಟುಂಬಗಳಿಗೆ ಕಾಳಜಿ ಕೇಂದ್ರಗಳಲ್ಲಿ ಆಶ್ರಯ ನೀಡಿ, ಊಟೋಪಚಾರ, ಔಷಧಿ ವ್ಯವಸ್ಥೆ ಸೇರಿದಂತೆ ಎಲ್ಲಾ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗಿದೆ. ಈ ಕುಟುಂಬಗಳಿಗೆ ಶಾಶ್ವತ ಪರಿಹಾರ ದೊರಕಿಸುವ ನಿಟ್ಟಿನಲ್ಲಿ ಸರ್ಕಾರದಿಂದ ಅನುಮತಿ ಪಡೆದು, ಬೇರೆ ಜಾಗವನ್ನು ನೇರವಾಗಿ ಖರೀದಿಸಿ ಈ ಕುಟುಂಬಗಳಿಗೆ ನೀಡಿ ಸ್ಥಳಾಂತರ ಮಾಡಲು ಕ್ರಮ ವಹಿಸಲಾಗುವುದು. ಜನರ ನೋವುಗಳಿಗೆ ಸ್ಪಂದಿಸಲಾಗುವುದು. ನಾನು ಕೂಡ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರನ್ನು ಈ ಕುರಿತು ಮನವಿ ಮಾಡಿಕೊಳ್ಳುತ್ತೇನೆ” ಎಂದು ಅವರು ಹೇಳಿದರು.

ಪ್ರವಾಹ ಪರಿಸ್ಥಿತಿಯಿಂದ ಈ ಭಾಗದ ಹತ್ತಿ ಈರುಳ್ಳಿ ತೊಗರಿ ಬೆಳೆ ಸಂಪೂರ್ಣವಾಗಿ ನಾಶವಾಗಿದೆ. ಈ ಭಾಗದಲ್ಲಿ ಕಬ್ಬು ಬೆಳೆಯ ಕೂಡ ಶೇ.50 ರಷ್ಟು ನಾಶವಾಗಿದ್ದು, ಕ್ಷೇತ್ರದ ಶಾಸಕರಾದಿಯಾಗಿ, ಜಿಲ್ಲಾಡಳಿತ ಜನರ ಕಷ್ಟ ನೋವುಗಳಿಗೆ ಸ್ಪಂದಿಸಿ, ಕಾಳಜಿಪುರಕವಾಗಿ ಕಾರ್ಯನಿರ್ವಹಿಸುತ್ತಿದೆ. ಜಿಲ್ಲೆಯ ಹಲಮೇಲ ತಾಲೂಕಿನ ದೇವರನಾವಧಿಗೆ ಗ್ರಾಮದ ರೈತ ಬಸಪ್ಪ ನಿಂಗಪ್ಪ ಪೂಜಾರಿ ಅವರ ಜಮೀನಿನಲ್ಲಿ ಈರುಳ್ಳಿ ಬೆಳೆ ಹಾನಿ ವೀಕ್ಷಣೆ, ಜಿಲ್ಲೆಯ ಆಲಮೇಲ ತಾಲೂಕಿನ ದೇವರನ ಅವರಿಗೆ ಶರಣಪ್ಪ ಎರಗಲಾ ಅವರ ಕಬ್ಬು ಹಾನಿ ಹಾಗೂ ದೇವನಗಾವ ಗ್ರಾಮದ ಬಳಿ ಹೊಲದಲ್ಲಿ ನಿಂತಿರುವ ನೀರನ್ನು ಸಚಿವರು ವೀಕ್ಷಣೆ ಮಾಡಿದರು.

ಇದನ್ನೂ ಓದಿ: ಮವಿಜಯಪುರ | ಅಕ್ಕಮಹಾದೇವಿ ವಿವಿಯ ಪತ್ರಿಕೋದ್ಯಮ ವಿಭಾಗಕ್ಕೆ ರಾಷ್ಟ್ರೀಯ ಪ್ರಶಸ್ತಿ

ದೇವಣಗಾವ ಗ್ರಾಮದ ಬಳಿ ಸೇತುವೆಗೆ ಭೇಟಿ ನೀಡಿ ವೆಚ್ಚಸಿದ ಸಚಿವರು, ದೇವಣಗಾಂವ ಸರ್ಕಾರಿ ಶಾಲೆಯಲ್ಲಿ ಸ್ಥಾಪಿಸಿದ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ ಸಂತ್ರಸ್ತರ ಅಹವಾಲು ಆಲಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಅಶೋಕ ಮನಗೂಳಿ ಜಿಲ್ಲಾಧಿಕಾರಿ ಆನಂದ ಕೆ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಣ ಅಧಿಕಾರಿ ರಿಷಿ ಆನಂದ ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿ ಲಕ್ಷ್ಮಣ ನಿಮ್ಮಬರಿಗೆ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ಹುದ್ದೆ ಪಡೆದ ಆರೋಪ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿಶೇಷ ನೇಮಕಾತಿಯಲ್ಲಿ ನಕಲಿ ಎಸ್‌ಎಸ್‌ಎಲ್‌ಸಿ...

ಯಾದಗಿರಿ | ವಂದೇ ಭಾರತ್ ಸ್ಲೀಪರ್ ರೈಲು ಯಾದಗಿರಿಯಲ್ಲಿ ನಿಲುಗಡೆಗೆ ಒತ್ತಾಯಿಸಿ ಮನವಿ

ಬೆಂಗಳೂರು-ಮುಂಬೈ ನಡುವೆ ಸಂಚರಿಸುವ ವಂದೇ ಭಾರತ್ ಸ್ಲೀಪರ್ ಎಕ್ಸ್‌ಪ್ರೆಸ್‌ಗೆ ಯಾದಗಿರಿ ರೈಲು...

ಹಾವೇರಿ | ಬರಪರಿಹಾರ ಹೆಚ್ಚಳ ಮಾಡುವಂತೆ ಆಗ್ರಹಿಸಿ ರೈತ ಸಂಘ ಸರ್ಕಾರಕ್ಕೆ ಹಕ್ಕೊತ್ತಾಯ

"ಸತತ ಬರಗಾಲ ಹಾಗೂ ಅನಾವೃಷ್ಟಿಯಿಂದ ಕಷ್ಟದಲ್ಲಿರುವ ರೈತರಿಗೆ ಸರ್ಕಾರ ನೀಡುತ್ತಿರುವ ಬಟವಾಡೆ...

ಹಾವೇರಿ | ಪ್ರಜಾಪ್ರಭುತ್ವ ಉಳಿಸಿ, ಮತ ಬಚಾವೋ, ದೇಶ ಬಚಾವೋ : ಕಾಂಗ್ರೇಸ್ ಪಕ್ಷದಿಂದ ಪ್ರತಿಭಟನಾ ಸಮಾವೇಶ

ಹಾವೇರಿ ಪಟ್ಟಣದಲ್ಲಿ ಕಾಂಗ್ರೆಸ್ ಮುಖಂಡರು ಡಾ. ಬಿ.ಆರ್ ಅಂಬೇಡ್ಕರ್ ವೃತ್ತದಿಂದ ಮೈಲಾರಪ್ಪ...