ವಿಜಯಪುರ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿಗಳಿಗೆ ಅಭಿವೃದ್ಧಿ ಅಧಿಕಾರಿಗಳನ್ನು ನೇಮಿಸುವ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರ ಮಹಾ ಒಕ್ಕೂಟ ವಿಜಯಪುರ ಜಿಲ್ಲಾ ಪದಾಧಿಕಾರಿಗಳ ಜತೆಗೆ ಜಿಲ್ಲೆಯ ಹಲವು ಸಮಸ್ಯೆಗಳ ಕುರಿತು ಚರ್ಚಿಸಲು ಸಮಯ ನಿಗಧಿಪಡಿಸುವಂತೆ ಕರ್ನಾಟಕ ರಾಜ್ಯ ಚುನಾಯಿತ ಗ್ರಾಮ ಪಂಚಾಯಿತಿ ಸದಸ್ಯರ ಮಹಾ ಒಕ್ಕೂಟದಿಂದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ಮನವಿ ಸಲ್ಲಿಸಿದರು.
“ವಿಜಯಪುರ ಜಿಲ್ಲೆಯ ಕೆಲವೊಂದು ಗ್ರಾಮ ಪಂಚಾಯಿತಿಗಳಲ್ಲಿ ಅಭಿವೃದ್ಧಿ ಅಧಿಕಾರಿಗಳು ಒಬ್ಬರೇ ಎರಡು ಕಡೆ ಕಾರ್ಯನಿರ್ವಹಿಸುತ್ತಿದ್ದು, ಗ್ರಾಮ ಪಂಚಾಯಿತಿಗಳಲ್ಲಿ ಅಭಿವೃದ್ಧಿ ಕುಂಠಿತಗೊಂಡಿದೆ. ಒಂದು ಪಂಚಾಯಿತಿಗೆ ಒಬ್ಬರಂತೆ ಅಭಿವೃದ್ಧಿ ಅಧಿಕಾರಿಗಳನ್ನು ನೇಮಿಸಬೇಕು. ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್‌ಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಭಿವೃದ್ಧಿ ಅಧಿಕಾರಿಗಳನ್ನು ಗ್ರಾಮ ಪಂಚಾಯಿತಿಗಳಿಗೆ ನಿಯೋಜಿಸಬೇಕು” ಎಂದು ಒತ್ತಾಯಿಸಿದರು.
“ವಿಜಯಪುರ ಜಿಲ್ಲೆಯಲ್ಲಿ 211 ಗ್ರಾಮ ಪಂಚಾಯಿತಿಗಳಿದ್ದು, ಅದಕ್ಕಿಂತ ಹೆಚ್ಚಿನ ಸಂಖ್ಯೆಯ ಅಭಿವೃದ್ಧಿ ಅಧಿಕಾರಿಗಳು ಇದ್ದರೂ ಕೆಲವೊಂದು ಪಂಚಾಯಿತಿಗಳಿಗೆ ಒಬ್ಬರೇ ಎರಡು ಕಡೆ ಕಾರ್ಯನಿರ್ವಹಿಸುತ್ತಿರುವುದರಿಂದ ಗ್ರಾಮ ಸ್ವರಾಜ್ಯದ ಕನಸನ್ನು ನನಸು ಮಾಡಲು ಬಹಳ ಕಷ್ಟಸಾಧ್ಯ. ಆದಕಾರಣ ಎಲ್ಲ 211 ಪಂಚಾಯತಗಳಿಗೆ ಒಬ್ಬರಂತೆ ಅಭಿವೃದ್ಧಿ ಅಧಿಕಾರಿಗಳನ್ನು ನೇಮಿಸಬೇಕು. ಜತೆಗೆ ಜಿಲ್ಲಾ ಒಕ್ಕೂಟದ ಪದಾಧಿಕಾರಿಗಳ ಜೊತೆ ಜಿಲ್ಲೆಯ ವಿವಿಧ ಸಮಸ್ಯೆಗಳ ಕುರಿತು ಚರ್ಚಿಸಲು ಸಮಯ ನಿಗಧಿಪಡಿಸಬೇಕು” ಎಂದು ಒತ್ತಾಯಿಸಿದರು.
ಈ ಸುದ್ದಿ ಓದಿದ್ದೀರಾ? ವಿಜಯಪುರ | ವಸತಿ ನಿಲಯಗಳ ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲ; ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ
ನಿಯೋಗದಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಪ್ರದೀಪ ಪಾಟೀಲ, ಎಂ ಎಚ್ ಪಾಠಣ, ತಿಕೋಟಾ ತಾಲೂಕು ಅಧ್ಯಕ್ಷ ಸಿದ್ದಗೊಂಡ ರುದ್ರಗೌಡರ, ಇಂಡಿ ತಾಲೂಕ ರಮೇಶ ಮಂಗಳೂರು ಇದ್ದರು.