ವಿಜಯಪುರ | ಖಾಸಗಿ ಸಹಭಾಗಿತ್ವವಲ್ಲದ ವೈದ್ಯಕೀಯ ಕಾಲೇಜು ಸ್ಥಾಪಿಸುವಂತೆ ಸಿಎಂಗೆ ಮನವಿ

Date:

ವಿಜಯಪುರದಲ್ಲಿ ಖಾಸಗಿ ಸಹಭಾಗಿತ್ವವಿಲ್ಲದೆ ಸರ್ಕಾರಿ ಸ್ವಾಮ್ಯದ ವೈದ್ಯಕೀಯ ಕಾಲೇಜು ಸ್ಥಾಪಿಸುವಂತೆ ಆಗ್ರಹಿಸಿ ಹೋರಾಟ ಸಮಿತಿಯ ನಿಯೋಗವು ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ಮನವಿ ಸಲ್ಲಿಸಿತು.

- Advertisement -

ಕೃಷ್ಣಾ ನದಿಯ ಆಲಮಟ್ಟಿ ಆಣೆಕಟ್ಟೆಗೆ ಬಾಗಿನ ಅರ್ಪಿಸಲು ಆಗಮಿಸಿದ್ದ ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ ನಿಯೋಗವು, “ಯಾವುದೇ ಕಾರಣಕ್ಕೂ ಖಾಸಗಿ ಸಹಭಾಗಿತ್ವದ ಮೆಡಿಕಲ್ ಕಾಲೇಜನ್ನು ಜಿಲ್ಲೆಯ ಜನತೆ ಒಪ್ಪುವುದಿಲ್ಲ. ಈಗಾಗಲೇ ವಿಜಯಪುರದಲ್ಲಿ ಎರಡು ಖಾಸಗಿ ಮೆಡಿಕಲ್ ಕಾಲೇಜುಗಳು ಇದ್ದು, ಅವುಗಳೂ ಕೂಡ ಪ್ರಾರಂಭದಲ್ಲಿ ಜಿಲ್ಲಾ ಆಸ್ಪತ್ರೆಯನ್ನು ಬಳಸಿಕೊಂಡಿವೆ. ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಅಗತ್ಯವಿರುವ ಎಲ್ಲ ಸೌಲಭ್ಯಗಳೂ ಜಿಲ್ಲಾ ಆಸ್ಪತ್ರೆಯಲ್ಲಿವೆ. ಸರ್ಕಾರ ಕೂಡಲೇ ಸಂಪೂರ್ಣ ಸರ್ಕಾರಿ ಸ್ವಾಮ್ಯದ ವೈದ್ಯಕೀಯ ಕಾಲೇಜು ಪ್ರಾರಂಭಿಸಬೇಕು. ಇಲ್ಲವಾದರೆ ‌ತೀವ್ರ ಹೋರಾಟ ನಡೆಸಲಾಗುವುದು” ಎಂದು ಎಚ್ಚರಿಕೆ ನೀಡಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಈ ಸುದ್ದಿ ಓದಿದ್ದೀರಾ? ರಾಜ್ಯ ಸರ್ಕಾರದ ಮಹತ್ವದ ಆದೇಶ: ಅಪಘಾತ ಸಂತ್ರಸ್ತರಿಗೆ ಉಚಿತ ಚಿಕಿತ್ಸೆ ನೀಡದ ಆಸ್ಪತ್ರೆಗಳಿಗೆ 1 ಲಕ್ಷ ದಂಡ

ಬಿ. ಭಗವಾನ ರೆಡ್ಡಿ, ಅಣ್ಣಾರಾಯ ಈಳಗೇರ, ಸಂಗಮೇಶ ಸಗರ, ಲಲಿತಾ ರೆಡ್ಡಿ, ಅಕ್ರಮ್ ಮಾಶ್ಯಾಳಕರ, ಅರವಿಂದ ಕುಲಕರ್ಣಿ ನಿಯೋಗದಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಅಹಿಂಸೆ-ಸತ್ಯಾಗ್ರಹದ ಸಂದೇಶದೊಂದಿಗೆ ಸಾಮರಸ್ಯ ನಡಿಗೆ

ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ...