ವಿಜಯಪುರ | ರೈತರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮನವಿ

Date:

ರೈತರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ವಿಜಯಪುರದಲ್ಲಿ ಮಂಗಳವಾರ (ಜ.30) ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರಿಗೆ ಮನವಿ ಸಲ್ಲಿಸಿತು.

- Advertisement -

ರಾಜ್ಯದಲ್ಲಿ ಭೀಕರ ಬರಗಾಲ ಆವರಿಸಿ ಐದು ತಿಂಗಳು ಕಳೆದರೂ ಇನ್ನುವರೆಗೂ ಯಾವ ರೈತರಿಗೂ ಪರಿಹಾರ ಬಂದಿಲ್ಲ. ಫಸಲ್ ಭೀಮಾ ಯೋಜನೆಯಲ್ಲಿ ಭಾರಿ ಪ್ರಮಾಣದ ಅನ್ಯಾಯವಾಗುತ್ತಿದೆ, ಅದೇರೀತಿ ರೈತ ಸಂಪರ್ಕ ಕೇಂದ್ರಗಳಲ್ಲಿ ಹಲವಾರು ಸಮಸ್ಯೆಗಳಿವೆ. ಅಧಿಕಾರಿಗಳು ಸರಿಯಾಗಿ ಸ್ಪಂದಿಸುವುದಿಲ್ಲ, ಸ್ಪಿಂಕಲರ್ ಪೈಪಗಳ ಸಮಸ್ಯೆ ದೊಡ್ಡದಾಗಿದೆ. ಕಳೆದ 2-3 ವರ್ಷಗಳ ಹಿಂದೆ ಡಿ.ಡಿ ತುಂಬಿದ ಹಣವನ್ನು ಮರಳಿ ಹಾಕಲಾಗಿದೆ, ಈಗ ಮತ್ತೆ ಡಿ.ಡಿ ತುಂಬುವಂತೆ ಹೇಳುತ್ತಿದ್ದಾರೆ, ಅದು ನಿಮ್ಮ ಸರದಿ ಬಂದಾಗ ಕೊಡುತ್ತೇವೆ ಎನ್ನುತ್ತಿದ್ದಾರೆ ಎಂದು ಮನವಿಯಲ್ಲಿ ರೈತ ಸಂಘ ಉಲ್ಲೇಖಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ವೇಳೆ ರಾಜ್ಯ ಪ್ರಧಾನ ಕಾರ್ಯದಶಿಗಳಾದ ರಾಹುಲ ಕುಬಕಡ್ಡಿ, ಹಾಗೂ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಮಾತನಾಡಿ, ರೈತರಿಗೆ ಅನುಕೂಲವಾಗುವ ರೀತಿಯಲ್ಲಿ ಯೋಜನೆಗಳ ಬಗ್ಗೆ ಸರಿಯಾದ ಮಾಹಿತಿ ನೀಡಿ, ಜೊತೆಗೆ ವಿಮೆಯಲ್ಲಿ ದೊಡ್ಡಪ್ರಮಾಣದ ಅವ್ಯವಹಾರ ನಡೆಯುತ್ತಿದೆ. ನಷ್ಟ ಅನುಭವಿಸಿರುವ ರೈತರಿಗೆ ಪರಿಹಾರ ಸಿಗುವ ಲಕ್ಷಣಗಳು ಕಾಣುತ್ತಿಲ್ಲ. ಈ ಬಗ್ಗೆ ಸರಿಯಾದ ಮಾರ್ಗಸೂಚಿ ಇಲ್ಲ. ಅದುಕೂಡಾ ಗೊಂದಲವಿದೆ ಎಂದರು.

ಇಲಾಖೆಯಲ್ಲಿ ವಿಜಿಲೇನ್ಸ್ ತಂಡವನ್ನು ಇನ್ನು ಹೆಚ್ಚಿಸಿ ಜಿಲ್ಲೆಯಲ್ಲಿ ಅಕ್ರಮವಾಗಿ ನಕಲಿ ಬೀಜ ಗೊಬ್ಬರ, ಕೀಟನಾಶಕ ಮಾರಾಟವಾಗುವುದು ತಡೆಯುವಂತೆ ಇದರಿಂದ ರೈತರಿಗೆ ನಷ್ಟವಾಗುತ್ತಿದೆ ಎಂದರು.

ಮನವಿ ಸ್ವೀಕರಿಸಿ ಮಾತನಾಡಿದ ಜಂಟಿ ಕೃಷಿ ನಿರ್ದೇಶಕರಾದ ರಾಜಶೇಖರ ವಿಲಿಯಮ್ಸ್, ಬೆಳೆವಿಮೆಗೆ ಸರ್ಕಾರದ ಮಾರ್ಗಸೂಚಿಯಿದೆ. ಇಲ್ಲಿ ಕೇವಲ ಕೃಷಿ ಇಲಾಖೆ ಮಾತ್ರವಲ್ಲದೇ ಇನ್ನು 4-5 ಇಲಾಖೆಯ ಅಧಿಕಾರಿಗಳ ತಂಡ ಸರ್ವೇ ಮಾಡಿ ವರದಿ ಸಲ್ಲಿಸಲಾಗುತ್ತದೆ, ಇನ್ನು ಜಿಲ್ಲೆಗೆ ಸುಮಾರು 600ಕೋಟಿಗಳ ಬೇಡಿಕೆಯನ್ನು ಸಲ್ಲಿಸಲಾಗಿದೆ, ಅದ್ದರಿಂದ ಈ ವರ್ಷ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಸ್ಪಿಂಕಲರ್ ಪೈಪ್ ಸೇರಿದಂತೆ ಎಲ್ಲಾ ವಸ್ತುಗಳ ಸರಿಯಾದ ಸಮಯಕ್ಕೆ ಹಾಗೂ ನೈಜ ರೈತರಿಗೆ ಸಿಗುವಂತಹ ವ್ಯವಸ್ಥೆ ಕಲ್ಪಿಸಲಾಗುವುದು, ನಾವೂ ಯಾವಾಗಲೂ ರೈತರ ಏಳ್ಗೆಗಾಗಿ ಇರುವವರು ಎಂದರು.

ಈ ಸಂದರ್ಭದಲ್ಲಿ ಮಹಿಳಾ ಅಧ್ಯಕ್ಷರಾದ ರೇಖಾ ಪಾಟೀಲ, ಈರಪ್ಪ ಕುಳೆಕುಮಟಗಿ, ಸಾತಲಿಂಗಯ್ಯ ಸಾಲಿಮಠ, ಮಹಾದೇವ ಬನಸೋಡೆ, ಶ್ರೀಶೈಲ ವಾಲಿಕಾರ, ಸೇರಿದಂತೆ ಮುಖಂಡಾರಾದ ಶಿವಾನಂದಯ್ಯ ಹಿರೇಮಠ, ಸುಭಾಸ ಸಜ್ಜನ, ನಜೀರ ನಂದರಗಿ, ಶಾನೂರ ನಂದರಗಿ, ಖಾದರಸಾಬ ವಾಲಿಕಾರ,  ರಾಮನಗೌಡ ಪಾಟೀಲ, ಮಹಾದೇವ ತೇಲಿ, ಅರುಣಗೌಡ ತೇರದಾಳ, ಸಂಗಪ್ಪ ಟಕ್ಕೆ, ಸಂಪತ್ತ ಜಮಾದಾರ, ಸಂಗಮೇಶ ಹುಣಸಗಿ, ಹಣಮಂತ ಬ್ಯಾಡಗಿ, ಎಚ್.ಎನ್.ಪಾಟೀಲ, ಮಹಾದೇವ ಕದಂ, ಸೇರಿದಂತೆ ಅನೇಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...