ವಿಜಯಪುರ | ಬೆಟ್ಟಿಂಗ್‌ ಆ್ಯಪ್‌ಗಳನ್ನು ನಿಷೇಧಿಸುವಂತೆ ಜಿಲ್ಲಾಧಿಕಾರಿಗೆ ಮನವಿ

Date:

ಆನ್‌ಲೈನ್ ಬೆಟ್ಟಿಂಗ್ ಆ್ಯಪ್ ಗೀಳಿಗೆ ಇಂದಿನಯುವಕರು ಜೀವನವನ್ನೇ ಹಾಳು ಮಾಡಿಕೊಳ್ಳುತ್ತಿದ್ದು, ಸರ್ಕಾರ ಬೆಟ್ಟಿಂಗ್ ಆ್ಯಪ್‌ಗಳನ್ನು ನಿಷೇಧ ಮಾಡಬೇಕು ಎಂದು ಬಲಿಷ್ಠ ಭಾರತ ನಿರ್ಮಾಣ ಸೇನೆ ಹಾಗೂ ಕರುನಾಡ ಕ್ರಾಂತಿ ಸೇನೆ ಪದಾಧಿಕಾರಿಗಳು ವಿಜಯಪುರ ಹೆಚ್ಚುವರಿ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರಿಗೆ ಮನವಿ ಸಲ್ಲಿಸಿದರು.

- Advertisement -

ಸೇನೆ ಅಧ್ಯಕ್ಷ ಪುನೀತ್ ಸಜ್ಜನ ಮಾತನಾಡಿ, “ಆನ್‌ಲೈನ್ ಜೂಜು, ಇಸ್ಪೀಟ್, ಲೂಡೊ, ಕ್ರಿಕೆಟ್, ಫುಟ್ಬಾಲ್ ಸೇರಿದಂತೆ ಅನೇಕ ಅಪ್ಲಿಕೇಷನ್‌ಗಳು ಹಣದ ವಂಚನೆ ಮಾಡುತ್ತಿವೆ. ಯುವಕರನ್ನು ಈ ಗೀಳಿಗೆ ಹಣ ಹಾಕುವಂತೆ ಪ್ರೇರೇಪಿಸಿ ನಂತರ ಅವರನ್ನು ಸಾಲಗಾರರನ್ನಾಗಿ ಮಾಡಿ ಪ್ರಾಣ ಬಿಡುವಂತೆ ಮಾಡುತ್ತಿವೆ. ಸರ್ಕಾರ ಆರ್ಥಿಕ ಅಪರಾಧಗಳನ್ನು ನಿಯಂತ್ರಿಸಲು ಆನ್‌ಲೈನ್ ಬೆಟ್ಟಿಂಗ್ ಹಾಗೂ ಬೆಟ್ಟಿಂಗ್‌ ಆ್ಯಪ್‌ಗಳನ್ನು ನಿಷೇಧ ಮಾಡಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಕ್ರಿಕೆಟ್ ಬೆಟ್ಟಿಂಗ್, ಇಸ್ಪೀಟ್ ಆಟಗಳನ್ನು ಆಡಿಸುವಂತಹ ಆ್ಯಪ್‌ಗಳು ವಿಪರೀತ ಪ್ರಮಾಣದಲ್ಲಿ ಹುಟ್ಟಿಕೊಂಡಿವೆ. ವಯಸ್ಸಿನ ಮಿತಿ ಇಲ್ಲದೆ ಎಲ್ಲಾ ವರ್ಗದ ಜನರು ಇವುಗಳ ಆಮಿಷಕ್ಕೆ ಒಳಗಾಗಿ, ಸಾಕಷ್ಟು ಹಣವನ್ನು ಕಳೆದುಕೊಂಡಿದ್ದಾರೆ. ಕೂಡಲೇ ಸರ್ಕಾರ ಅಂತಹ ಆ್ಯಪ್‌ಗಳ ವಿರುದ್ಧ ಆರ್ಥಿಕ ಅಪರಾಧ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ಅವುಗಳನ್ನು ನಿಷೇಧಗೊಳಿಸಬೇಕು” ಎಂದು ಮನವಿ ಮಾಡಿದರು.

ಇದನ್ನೂ ಓದಿ: ವಿಜಯಪುರ | ರಂಜಾನ್‌, ಹೋಳಿ ವೇಳೆ ಕಾನೂನು ಸುವ್ಯವಸ್ಥೆ ಕಾಪಾಡಿ: ಪೊಲೀಸ್ ಸಿಪಿಐ ಮಹಮ್ಮದ್‌

ಕರುನಾಡ ಕ್ರಾಂತಿ ಸೇನೆಯ ಸಂಭಾಜಿ ಪಾಟೀಲ, ರವಿ ಗಾಯಕವಾಡಿ, ತೀರ್ಥಪ್ಪ ಪೂಜಾರಿ, ರವಿ ಗಾಯಕವಾಡ, ಭೀಮಾರೆಡ್ಡಿ ಬ್ಯಾಕೋಡ, ಉತ್ಕರ್ಷ ಪಾಟೀಲ, ದೀಪಕ ಸೂರ್ಯವಂಶಿ, ಪ್ರಶಾಂತ ಪಾಟೀಲ, ಮುತ್ತಣ್ಣ ಭೋವಿ, ಮಹೇಶ ಯಲ್ಲಕ್ಷ, ರಾಜು ರೂಗಿ, ಮುತ್ತು ಬಿರಾದಾರ. ರುದ್ರಗೌಡ ಪಾಟೀಲ, ಈರಣ್ಣ ಪಾಟೀಲ ಮತ್ತಿತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...