ವಿಜಯಪುರ | ಕಾಂಗ್ರೆಸ್ ಸೋಲಿನ ಪರಾಮರ್ಶೆ; ಚಿಂತನ ಮಂಥನ ಸಭೆ

Date:

Advertisements

ಈ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಸೋತಿರಬಹುದು. ಆದರೆ ನೈತಿಕವಾಗಿ ನಾವು ಗೆದ್ದಿದ್ದೇವೆ. ಇಡೀ ಜಿಲ್ಲೆಯ ಶಾಸಕರುಗಳು, ವಿಧಾನ ಪರಿಷತ್ ಸದಸ್ಯರುಗಳು, ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಒಮ್ಮತದಿಂದ ಕೆಲಸ ಮಾಡಿದ್ದು, ನಮಗೆಲ್ಲರಿಗೆ ತೃಪ್ತಿ ತಂದಿದೆ ಎಂದು ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಈ ಸಭೆಯ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ವಿಜಯಪುರ ಲೋಕಸಭಾ ಮತಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ಪರಾಮರ್ಶೆ ಕುರಿತು ಇಂದು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಚಿಂತನ ಮಂಥನ ಸಭೆ ಮಾತನಾಡಿದರು.

“ಕಾಂಗ್ರೆಸ್ ಪಕ್ಷ ನುಡಿದಂತೆ ನಡೆದು 5 ಗ್ಯಾರಂಟಿ ಯೋಜನೆಗಳನ್ನು ಕೊಟ್ಟಾಗಲೂ ಜನತೆ ನಮಗೆ ಬೆಂಬಲಿಸದಿರುವುದು ಬೇಸರವಾಗಿರಬಹುದು. ಆದರೂ ಕಾಂಗ್ರೆಸ್ ಪಕ್ಷಕ್ಕೆ ಎಲ್ಲ ಸಮಾಜಗಳು ಬೆಂಬಲಿಸಿ ಬಿಜೆಪಿಯವರ ಓಟಕ್ಕೆ ಬ್ರೆಕ್ ಹಾಕಿದ್ದು, ಮುಂದಿನ ದಿನಗಳಲ್ಲಿ ಈ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಒಳ್ಳೆಯ ಭವಿಷ್ಯವಿದೆ. ಯಾರೂ ದೃತಿಗೆಡುವ ಅವಶ್ಯಕತೆ ಇಲ್ಲ. ಇದಕ್ಕಾಗಿ ವಿಜಯಪುರ ಜಿಲ್ಲೆಯ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿದಂತಹ ಎಲ್ಲ ಮತದಾರ ಪ್ರಭುಗಳಿಗೆ ಪಕ್ಷದಿಂದ ಧನ್ಯವಾದಗಳನ್ನು ಅರ್ಪಿಸುತ್ತೇವೆ” ಎಂದರು.

Advertisements

“ಪಕ್ಷವು ಇಂದು ಸೋಲಲು ಅನೇಕ ಕಾರಣಗಳಿರಬಹುದು. ಮುಂದಿನ ದಿನಗಳಲ್ಲಿ ಸರಿ ಮಾಡಲಾಗುವುದು. ಇಂದು ದೇಶದಲ್ಲಿ ಇಂಡಿಯಾ ಮೈತ್ರಿಕೂಟವನ್ನು ಬೆಂಬಲಿಸಿ ಜನ ಬಿಜೆಪಿಯ ವಿರುದ್ಧ ಇರುವುದು ಸಾಬೀತಾಗಿದೆ. ರಾಹುಲ್‌ ಗಾಂಧಿಯವರು ದಲಿತರ, ಹಿಂದುಳಿದ ವರ್ಗಗಳ, ಅಲ್ಪಸಂಖ್ಯಾತರ, ರೈತರ, ಯುವಕರ ಹಿತ ಕಾಪಾಡುವ ನಿಟ್ಟಿನಲ್ಲಿ ಹೋರಾಟ ಮಾಡಿರುವುದೇ ಇಂದು ಜನ ನಮ್ಮ ಕೈ ಹಿಡಿದಿರುತ್ತಾರೆ. ನಾವೆಲ್ಲರೂ ಹೀಗೆಯೇ ಒಟ್ಟಾಗಿ ಪಕ್ಷದ ಸಂಘಟನೆ ಬಲಪಡಿಸುವುದರ ಜತೆಗೆ ಗಟ್ಟಿಯಾಗಿ ನಿಂತು ಹೋರಾಟ ಮಾಡೋಣ” ಎಂದು ಕರೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಆಕ್ರಮ ಖಾತೆ ಇ-ಸ್ವತ್ತು ರದ್ದು ಭರವಸೆ ನೀಡಿ, ಅಧಿಕಾರಿಗಳ ನಿರ್ಲಕ್ಷ್ಯ: ಸಂತ್ರಸ್ತೆ ಮಹಿಳೆ ಆರೋಪ

ಈ ಸಂದರ್ಭದಲ್ಲಿ ಅನೇಕ ಜನ ಮುಖಂಡರು ಸಲಹೆ ಸೂಚನೆಗಳನ್ನು ನೀಡಿ ಚರ್ಚಿಸುತ್ತಾ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಹ್ಮದ್‌ ರಫೀಕ್ ಟಪಾಲ, ಪ್ರಭುಗೌಡ ಪಾಟೀಲ, ಬಿ.ಎಸ್. ಪಾಟೀಲ ಯಾಳಗಿ, ವೈಜನಾಥ ಕರ್ಪೂರಮಠ, ಸುಭಾಸ ಛಾಯಾಗೋಳ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಆರತಿ ಶಹಾಪೂರ, ಬಸೀರ ಶೇಠ, ಆರ್.ಡಿ. ಹಕ್ಕೆ, ಗುರು ತಾರನಾಳ, ರಫೀಕ ಪಕಾಲೆ, ಜಾವಿದ ಮೋಮಿನ್, ಪಕ್ಷದ ಮುಖಂಡರಾದ ಎಂ.ಎಸ್. ನಾಯಕ, ಡಿ.ಎಚ್. ಕಲಾಲ, ಇಲಿಯಾಸಅಹ್ಮದ ಸಿದ್ದಿಕಿ, ಇಲಿಯಾಸ ಬೋರಾಮಣಿ, ಅಮಿತ ಚವ್ಹಾಣ, ಶಬ್ಬೀರ ಜಾಗೀರದಾರ, ವಿಜಯಕುಮಾರ ಘಾಟಗೆ, ಬಿ.ಎಸ್. ಗಸ್ತಿ, ದಸ್ತಗೀರ ಸಾಲೋಟಗಿ, ಲಕ್ಷ್ಮಿ ಶಿವಣಗಿ ಸೇರಿದಂತೆ ಬಹುತೇಕರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

Download Eedina App Android / iOS

X