ಸಚಿವರು ತಪ್ಪದೇ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರೊಂದಿಗೆ ಸಮಾಲೋಚನೆ ಮಾಡುವುದು ಅತಿ ಅವಶ್ಯಕವಾಗಿದ್ದು, ಇದರಿಂದ ಕಾರ್ಯಕರ್ತರಿಗೆ ಹುಮ್ಮಸ್ಸು ಬರುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನೆಗಾಗಿ ವಿಜಯಪುರಕ್ಕೆ ಆಗಮಿಸಿದ ವೇಳೆ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯಕ್ಕೆ ಭೇಟಿ ನೀಡಿ ಮಾತನಾಡಿದರು.
“ಕಾರ್ಯಕರ್ತರ ಕೆಲಸ ಕಾರ್ಯಗಳ ಬಗ್ಗೆ ಸ್ಪಂದಿಸುವುದು ಸಚಿವರಾಗಿರುವ ನಮ್ಮ ಕರ್ತವ್ಯ. ಸದಾ ತಮ್ಮೊಂದಿಗೆ ನಾವಿರುತ್ತೇವೆ” ಎಂದ ಅವರು ಸ್ವಾಗತಿಸಿ ಸನ್ಮಾನಿಸಿದ್ದಕ್ಕೆ ಧನ್ಯವಾದ ಅರ್ಪಿಸಿದರು.
ಇದಕ್ಕೂ ಮುನ್ನ ವಿಜಯಪುರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಹಾಗೂ ಪಕ್ಷದ ಮುಖಂಡರು ಸಚಿವರ ದಿನೇಶ್ ಗುಂಡೂರಾವ್ ಅವರನ್ನು ಸ್ವಾಗತಿಸಿ ಸನ್ಮಾನಿಸಿದರು.
ಈ ಸುದ್ದಿ ಓದಿದ್ದೀರಾ? ವಿಜಯಪುರ | ಬಸ್ ವ್ಯವಸ್ಥೆ ಕಲ್ಪಿಸುವಂತೆ ಡಿವಿಪಿ ಆಗ್ರಹ
ಪಕ್ಷದ ಜಿಲ್ಲಾ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಅಂಗ ಘಟಕಗಳ ಅಧ್ಯಕ್ಷರು ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ನಾಗಠಾಣ ಶಾಸಕ ವಿಠ್ಠಲ ಕಟಕಧೋಂಡ, ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ನಾಯಕ, ಕೆಪಿಸಿಸಿ ಸದಸ್ಯ ಅಬ್ದುಲ್‌ಹಮೀದ ಮುಶ್ರೀಫ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಹ್ಮದ್ ರಫೀಕ ಟಪಾಲ, ಡಾ.ಪ್ರಭುಗೌಡ ಪಾಟೀಲ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಚಾಂದಸಾಬ ಗಡಗಲಾವ ಸೇರಿದಂತೆ ಬಹುತೇಕರು ಇದ್ದರು.
