ವಿಜಯಪುರ | ₹3516 ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಚಾಲನೆ: ರಮೇಶ ಜಿಗಜಿಣಗಿ

Date:

ಕೇಂದ್ರ ರಸ್ತೆ ಯೋಜನೆಯಡಿ 2025-26 ಸಾಲಿನಲ್ಲಿ ಸುಮಾರು 9 ಕಾಮಗಾರಿಗಳು ಪ್ರಸ್ತಾವನೆಯನ್ನು ಸಲ್ಲಿಸಲಾಗಿದ್ದು ಈಗಾಗಲೇ ಮಂಜೂರಾತಿ ಸಿಕ್ಕಿದೆ. ಒಟ್ಟು 80.76 ಕಿಮೀ ಉದ್ದದ 54 ಕೋಟಿ ಮೊತ್ತದ ಕಾಮಗಾರಿ ಇದಾಗಿದೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.

- Advertisement -

ವಿಜಯಪುರ ನಗರದ ಪತ್ರಕರ್ತರೊಂದಿಗೆ ಮಾತನಾಡಿದ ಸಂಸದರು, “ವಿಜಯಪುರದ ರಾಷ್ಟ್ರೀಯ ಹೆದ್ದಾರಿ ವಿಭಾಗದ ವ್ಯಾಪ್ತಿಯಡಿ ನಾಲ್ಕು ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲಾಗಿದೆ. ಅಂದಾಜು ₹ 1668.88 ಕೋಟಿ ಅನುದಾನದಲ್ಲಿ ಒಟ್ಟು 208.04 ಕಿಮೀ ಉದ್ದದಷ್ಟು ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಇದು ಎರಡು ರೈಲ್ವೆ ಸೇತುವೆಗಳನ್ನು ಸಹ ಒಳಗೊಂಡಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

“ಕೇಂದ್ರ ರಸ್ತೆ ನಿಧಿ ಯೋಜನೆಯಡಿ 2016-17 ಸಾಲಿನಲ್ಲಿ ಸುಮಾರು 14 ಕಾಮಗಾರಿಗಳು ಮಂಜೂರಾಗಿದ್ದು ಹಾಗೂ ಅದರ ಮೊತ್ತ 72 ಕೋಟಿ ಗಳಷ್ಟಿದೆ. ಇದು ಎರಡು ಸೇತುವೆಗಳನ್ನು ಒಳಗೊಂಡಿದ್ದು, ಎಲ್ಲಾ ಕಾಮಗಾರಿಗಳು ಭೌತಿಕವಾಗಿ ಪೂರ್ಣಗೊಂಡಿರುತ್ತವೆ. ಕೇಂದ್ರ ರಸ್ತೆ ಯೋಜನೆಯಡಿ 2023- 24ನೇ ಸಾಲಿನಲ್ಲಿ ಸುಮಾರು 10 ಕಾಮಗಾರಿಗಳು ಮಂಜೂರಾಗಿದ್ದು, ಒಟ್ಟು ಉದ್ದ 81 ಕಿಮೀ ಉದ್ದ ಹಾಗೂ ಅದರ ಮೊತ್ತ 48 ಕೋಟಿ ಇರುತ್ತದೆ. ಕಾಮಗಾರಿಗಳು ಬಹುತೇಕವಾಗಿ ಮುಕ್ತಾಯಗೊಂಡಿವೆ” ಎಂದು ತಿಳಿಸಿದರು.

“ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಒಟ್ಟು ಎರಡು ಕಾಮಗಾರಿಗಳು ಕೈಗೊಂಡಿದ್ದು, ವಿಜಯಪುರದಿಂದ ಸೋಲಾಪುರದವರೆಗೆ ಹಾಗೂ ಮೊರಟಗಿಯಿಂದ ಆಲಮಟ್ಟಿಯವರೆಗೆ ಒಟ್ಟು ಉದ್ದ 200 ಕಿಮೀ ಹಾಗೂ ಅದರ ಮೊತ್ತ 1700 ಕೋಟಿಗಳಿದ್ದು, ಕಾಮಗಾರಿಗಳು ಮುಕ್ತಾಯಗೊಂಡಿವೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿದಿಕಾರದಿಂದ ಒಟ್ಟು ಎರಡು ಕಾಮಗಾರಿಗಳು ವಿಜಯಪುರದಿಂದ ಹುಬ್ಬಳ್ಳಿವರೆಗೆ ಮತ್ತು ವಿಜಯಪುರದಿಂದ ಕಲಬುರಗಿವರೆಗೆ ಅಂದಾಜು 348 ಕಿ.ಮಿ ಕಾಮಗಾರಿಯ ವಿಸ್ತೃತ ಯೋಜನಾ ವರದಿ ತಯಾರಿಸಲು ಸಂಯೋಜಕರನ್ನು ನೇಮಿಸಲಾಗಿದೆ” ಎಂದು ತಿಳಿಸಿದರು.

“ವಿಜಯಪುರ ಜಿಲ್ಲೆಯಲ್ಲಿ ಒಟ್ಟಾರೆ 1000.69 ಕಿಮೀ ರಸ್ತೆ ಹಾಗೂ ಎರಡು ರೈಲ್ವೆ ಮೇಲು ಸೇತುವೆಗಳನ್ನು ₹3516.67 ಕೋಟಿ ಅನುದಾನದಡಿ ಕಾಮಗಾರಿ ಕೈಗೊಳ್ಳಲಾಗಿದೆ. ಇದಷ್ಟೇ ಅಲ್ಲದೆ ಇಂತಹ ಅನೇಕ ಕಾಮಗಾರಿಗಳು ಹಾಗೂ ಮಹತ್ತರ ಯೋಜನೆಗಳನ್ನು ಜಾರಿಗೊಳಿಸಲಾಗಿದೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿಯ ಮೂವರು ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಗರಿ

ರಾಜ್ಯ ಸರ್ಕಾರ 2026ನೇ ಸಾಲಿನ ಪ್ರತಿಷ್ಠಿತ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗಳನ್ನು ಪ್ರಕಟಿಸಿದ್ದು,...

ಯಾದಗಿರಿ | ಮಕ್ಕಳ ಸುರಕ್ಷತೆ ಸಮಾಜದ ಹೊಣೆ: ಪೋಕ್ಸೋ, ಬಾಲ್ಯವಿವಾಹ ತಡೆಗೆ ಕಾನೂನು ಅರಿವು ಅಭಿಯಾನ

ಮಕ್ಕಳ ಹಕ್ಕುಗಳ ರಕ್ಷಣೆ, ಮಕ್ಕಳ ಮೇಲಿನ ದೌರ್ಜನ್ಯ ತಡೆ ಹಾಗೂ ಸುರಕ್ಷಿತ...

ಕಲಬುರಗಿ | ರಸ್ತೆ ಸಂಪೂರ್ಣ ಹದಗೆಟ್ಟು ಸಂಚಾರ ದುಸ್ತರ: ದುರಸ್ತಿಗೆ ದಲಿತ ಸೇನೆ ಆಗ್ರಹ

ಮಳಖೇಡದಿಂದ ಚಿತ್ತಾಪುರಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಸಂಪೂರ್ಣ ಹದಗೆಟ್ಟು ಸಂಚಾರಕ್ಕೆ...

ಕಲಬುರಗಿ ಜಿಲ್ಲೆಯ 4.77 ಲಕ್ಷ ಮತದಾರರು ಎಲ್ಲಿ ಹೋದರು? ಎಸ್‌ಐಆರ್ ವಿರುದ್ಧ ಸಿಪಿಐ ತೀವ್ರ ಆಕ್ರೋಶ

ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಬಳಿಕ ಲಕ್ಷಾಂತರ ಮತದಾರರ ಹೆಸರುಗಳು...