ವಿಜಯಪುರ | ಸೆ.5ರಂದು ಆರ್‌ಎಸ್‌ಎಸ್‌ ವಚನ ದರ್ಶನ ಪುಸ್ತಕ ಬಿಡುಗಡೆ; ಶರಣ ಸಂಸ್ಕೃತಿ ರಕ್ಷಣಾ ವೇದಿಕೆ ವಿರೋಧ

Date:

ವಿಜಯಪುರದಲ್ಲಿ ಸೆಪ್ಟೆಂಬರ್ 5ರಂದು ಬಿಡುಗಡೆಯಾಗುತ್ತಿರುವ ವಿವಾದಾಸ್ಪದ ಆರ್‌ಎಸ್‌ಎಸ್‌ ವಚನ ದರ್ಶನ ಪುಸ್ತಕವನ್ನು ಶರಣ ಸಂಸ್ಕೃತಿ ರಕ್ಷಣಾ ವೇದಿಕೆಯ ಸದಸ್ಯರು ವಿರೋಧಿಸಿದ್ದಾರೆ.

- Advertisement -

ವಿಜಯಪುರದಲ್ಲಿ ಭಾನುವಾರ ನಡೆದ ಪತ್ರಿಕಾಗೋಷ್ಠಿ ಉದ್ದೇಶಿಸಿ ಬಸವ ತತ್ವದ ಚಿಂತಕ ಜೆ ಎಸ್ ಪಾಟೀಲ ಅವರು ಮಾತನಾಡಿ, “ಶರಣ ಸಂಸ್ಕೃತಿಯನ್ನು ಮತ್ತು ಲಿಂಗಾಯತ ಧರ್ಮ ತತ್ವಗಳನ್ನು ನಾಶಪಡಿಸುವ ಉದ್ದೇಶದಿಂದ ಆರ್‌ಎಸ್‌ಎಸ್‌ ವಚನ ದರ್ಶನ ಪುಸ್ತಕ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿರುವುದು ಬಸವ ಭಕ್ತರು ಹಾಗೂ ಲಿಂಗಾಯತರಿಗೆ ನೋವು ತಂದಿದೆ. ಈ ಪುಸ್ತಕ ಬಿಡುಗಡೆಯ ಸಮಾರಂಭವನ್ನು ನಾವು ಸಾತ್ವಿಕವಾಗಿ ವಿರೋಧಿಸುತ್ತೇವೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

“ಪುಸ್ತಕವನ್ನು ಪ್ರತಿ ಜಿಲ್ಲೆಗಳಲ್ಲಿ 3 ರಿಂದ 5 ಲಕ್ಷ ರೂಪಾಯಿ ಖರ್ಚು ಮಾಡಿ ಬಿಡುಗಡೆ ಮಾಡುತ್ತಿರುವುದರ ಹಿಂದಿನ ಹುನ್ನಾರ ಬಯಲಾಗಬೇಕಿದೆ. ಈ ಪುಸ್ತಕ ಬಿಡುಗಡೆಯಾದರೆ ನಾಡಿನಾದ್ಯಂತ ಸಾಮಾಜಿಕ ಸ್ವಾಸ್ಥ್ಯವನ್ನು ಕದಡುತ್ತದೆ” ಎಂದು ಹೇಳಿದರು.

“ದಶಕಗಳಿಂದಲೂ ಎಂ ಆರ್ ಶ್ರೀನಿವಾಸಮೂರ್ತಿ, ಆರ್ ಆರ್ ದಿವಾಕರ, ಡಂಕಿನ್ ಝಳಕಿ, ರಾಜಾರಾಮ್ ಹೆಗಡೆ ಮುಂತಾದವರ ಮೂಲಕ ವಚನ ಚಳುವಳಿಯ ಆಶಯಗಳನ್ನು ಹಾಗೂ ಲಿಂಗಾಯತ ಸಂಸ್ಕೃತಿಯನ್ನು ನಾಶಗೊಳಿಸುವ ಪ್ರಯತ್ನ ನಡೆಯುತ್ತಿದೆ. ಶರಣರ ಆಶಯಗಳನ್ನು ಸರ್ವಾಂಗೀಣ ಕ್ರಾಂತಿಯ ಹಿನ್ನೆಲೆಯಲ್ಲಿ ನೋಡದೆ ಸನಾತನ ವೈದಿಕ ದರ್ಶನದ ಚೌಕಟ್ಟಿನಲ್ಲಿ ಸೇರಿಸಿ ಅದೊಂದು ಶುಷ್ಕ ಭಕ್ತಿ ಚಳವಳಿ ಎಂಬಂತೆ ಬಿಂಬಿಸುವ ಪ್ರಯತ್ನದ ವಿರುದ್ದ ಬಸವಾನುಯಾಯಿಗಳು ಸಾತ್ವಿಕ ಹಾಗು ತಾತ್ವಿಕ ಆಕ್ರೋಶವನ್ನು ದಾಖಲಿಸುತ್ತಿದ್ದೇವೆ” ಎಂದು ಶರಣ ಸಂಸ್ಕೃತಿ ರಕ್ಷಣಾ ವೇದಿಕೆಯ ಸದಸ್ಯರು ಹೇಳಿದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಕೋಲ್ಕತ್ತಾದ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಹತ್ಯೆ; ವಿವಿಧ ಸಂಘಟನೆಗಳ‌ ಪ್ರತಿಭಟನೆ

ಶರಣ ಸಂಸ್ಕೃತಿ ಹಾಗೂ ಲಿಂಗಾಯತ ಧರ್ಮ ರಕ್ಷಣಾ ವೇದಿಕೆಯ ಸಂಚಾಲಕ ಡಾ ಜೆ ಎಸ್ ಪಾಟೀಲ, ಜಿ ಬಿ ಸಾಲಕ್ಕಿ, ಮನಗೂಳಿ ವಿರಕ್ತಮಠದ ವಿರೇಶಾನಂದ ಸ್ವಾಮೀಜಿ, ಕಲಕೇರಿ ಶಿವಾಚಾರ್ಯ ಸ್ವಾಮೀಜಿ, ಜಂಬುನಾಥ ಕಂಚಾಣಿ, ಬಸವರಾಜ ಕೊಂಡಗುಳಿ, ಕಲ್ಲಪ್ಪ ಕಡೆಚೂರ, ಹನುಮಂತ ಚಿಂಚಲಿ, ಮಹಾದೇವಿ ಗೋಕಾಕ, ರಾಜೇಶ್ವರಿ ಅರನಾಳ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಲಾರಿ ಡಿಕ್ಕಿಗೆ ಬೈಕ್ ಸವಾರ ಗಂಭೀರ ಗಾಯ

ಲಾರಿ ಹಾಗೂ ಬೈಕ್‌ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್‌ ಸವಾರ...

ಶಿರಸಿ | ಆಗಸ್ಟ್ 23ನ್ನು ‘ಕರ್ನಾಟಕ ಕಾಫಿ ಡೇ’ ಎಂದು ಘೋಷಿಸಲು ಪವನ್ ನಾಯ್ಕ್ ಆಗ್ರಹ

ಶಿರಸಿ: ಕಾಫಿ ಡೇ ಸಂಸ್ಥಾಪಕ ದಿವಂಗತ ವಿ.ಜಿ. ಸಿದ್ಧಾರ್ಥ ಹೆಗ್ಡೆ ಅವರ...

ಭದ್ರಾವತಿಯ VISL ಎಜಿಎಂ ಗೋವಿಂದರಾಜು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, VISL ಸಂಸ್ಥೆಯಲ್ಲಿ ಎಜಿಎಂ...

ಗದಗ | ಕರ್ನಾಟಕ ಏಕೀಕರಣಕ್ಕಾಗಿ ನಾರಾಯಣರಾವ್ ಕೋಡುಗೆ ಅಪಾರ: ಹನುಮಂತಪ್ಪ ಅಬ್ಬಿಗೇರಿ

"ಕರ್ನಾಟಕ ಏಕೀಕರಣಕ್ಕಾಗಿ ಗದಗ ಜಿಲ್ಲೆಯ ಹುಯಿಲಗೋಳ ನಾರಾಯಣರಾವ್ ಅವರ ಕೊಡುಗೆ ಅಪಾರವಾಗಿದೆ....