ವಿಜಯಪುರ | ಎಸ್‌ಸಿ/ಎಸ್‌ಟಿ ಅನುದಾನ ಸಮುದಾಯಗಳ ಅಭಿವೃದ್ಧಿಗೆ ಬಳಕೆಯಾಗಬೇಕು; ಡಿವಿಪಿ ಆಗ್ರಹ

Date:

Advertisements

ಎಸ್‌ಸಿ/ಎಸ್‌ಟಿ ಸಮುದಾಯಗಳಿಗೆ ಮೀಸಲಿರುವ 11 ಸಾವಿರ ಕೋಟಿ ರೂಪಾಯಿ ಅನುದಾನವನ್ನು ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆೆ ಬಳಕೆ ಮಾಡದೆ ಸಮುದಾಯದ ಅಭಿವೃದ್ಧಿಗೇ ಬಳಸಬೇಕು ಎಂದು ದಲಿತ ವಿದ್ಯಾರ್ಥಿ ಪರಿಷತ್‌ ಕಾರ್ಕರ್ತರು ವಿಜಯಪುರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಡಿವಿಪಿ ಮುಖಂಡ ಅಕ್ಷಯಕುಮಾರ ಮಾತನಾಡಿ, “ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಸಮುದಾಯಗಳ ಅಭಿವೃದ್ಧಿಗೆ ಬಳಕೆ ಆಗಬೇಕಿದ್ದ ಪಸ್ತುತ ಸಾಲಿನ ಅನುದಾನದಲ್ಲಿನ 11 ಸಾವಿರ ಕೋಟಿ ರೂ. ಹಣವನ್ನು ಸರ್ಕಾರ ಗ್ಯಾರಂಟಿ ಯೊಜನೆಗಳಿಗೆ ಬಳಸುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ. ಸಮಾಜ ಕಲ್ಯಾಣ ಇಲಾಖೆ ಸಚಿವರೇ ಇಂತಹ ನಿರ್ಧಾರ ತೆಗೆದುಕೊಂಡಿರುವುದು ಖಂಡನೀಯ. ಕೂಡಲೇ ಈ ನಿರ್ಧಾರದಿಂದ ಸರ್ಕಾರ ಹಿಂದೆ ಸರಿಯಬೇಕು. ಇಲ್ಲದಿದ್ದರೆ ನಿಮ್ಮ ವಿರುದ್ಧವೇ ಬೀದಿಗಿಳಿದು ಪ್ರತಿಭಟನೆ ಮಾಡಲಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಗ್ಯಾರಂಟಿ ಯೋಜನೆಗಳಿಗೆ ಎಸ್‌ಸಿ/ಎಸ್‌ಟಿ ಅನುದಾನ ದುರ್ಬಳಕೆ ಆರೋಪ; ಡಿವಿಪಿ ಖಂಡನೆ

Advertisements

ಶತಶತಮಾನಗಳಿಂದ ಶೋಷಣೆಗೆ ಒಳಗಾದ ಎಸ್‌ಸಿ/ಎಸ್‌ಟಿ ಸಮುದಾಯಗಳ ಸಮಗ್ರ ಅಭಿವೃದ್ಧಿಗಾಗಿ ಮೀಸಲಿರಬೇಕಾಗಿದ್ದ ಹಣವನ್ನು ಸರ್ಕಾರದ ಗ್ಯಾರಂಟಿ ಯೊಜನೆಗಳಿಗಾಗಿ ಬಳಸುತ್ತಿರುವುದು ಖಂಡನೀಯ. ಶೋಷಿತ ಸಮುದಾಯಗಳ ಹಕ್ಕು ಕಿತ್ತುಕೊಂಡು, ತಮ್ಮ ಘೋಷಣೆ ಯೋಜನೆಗಳಿಗಾಗಿ ನಮ್ಮ ಹಣಬಳಸದೆ ಈ ಸಮುದಾಯಗಳ ವಿದ್ಯಾರ್ಥಿ ಯುವಜನರ ಹಾಗೂ ನಿರುದ್ಯೋಗ ಯುವಕರ, ಮಹಿಳೆಯರ ಮಕ್ಕಳ, ರೈತ ಕೂಲಿ ಕಾರ್ಮಿಕರು, ಒಟ್ಟಾರೆ ಈ ಎಸ್‌ಸಿ/ಎಸ್‌ಟಿ ಸಮುದಾಯಗಳ ಸಮಗ್ರ ಅಭಿವೃದ್ಧಿಗೆ ಬಳಸಬೇಕು” ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ದಲಿತ ವಿದ್ಯಾರ್ಥಿ ಪರಿಷತ್ ಪದಾಧಿಕಾರಿಗಳು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X