ವಿಜಯಪುರ | ವೈದ್ಯೆಯ ಅತ್ಯಾಚಾರ, ಕೊಲೆ ಖಂಡಿಸಿ ಹಲವು ಸಂಘಟನೆಗಳ ಪ್ರತಿಭಟನೆ

Date:

Advertisements

ಕೋಲ್ಕತ್ತಾದ ಆರ್ ಜಿ ಕರ್ ವೈದ್ಯಕೀಯ ಕಾಲೇಜಿನ ಸ್ನಾತಕೋತ್ತರ ವೈದ್ಯೆಯ ಅತ್ಯಾಚಾರ, ಕೊಲೆ ಹಾಗೂ ಪ್ರತಿಭಟನಾಕಾರರ ಮೇಲಿನ ದಾಳಿಯನ್ನು ಖಂಡಿಸಿ ವಿವಿಧ ಸಂಘಟನೆಗಳು ಪ್ರತಿಭಟನಾ ಮೆರವಣಿಗೆ ನಡೆಸಿದರು.

ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್(ಎಐಡಿವೈಒ) ಹಾಗೂ ಆಲ್ ಇಂಡಿಯಾ ಮಹಿಳಾ ಸಂಸ್ಕೃತಿಕ ಸಂಘಟನೆ (ಎಐಎಸ್‌ಎಸ್) ವಿಜಯಪುರ ಜಿಲ್ಲಾ ಸಮಿತಿಗಳು ನಗರದ ಬಿ ಆರ್ ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗಳಿಗೆ ಮನವಿಪತ್ರ ಸಲ್ಲಿಸಿದರು.

“ಕೋಲ್ಕತ್ತಾದ ಆರ್ ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ತರಬೇತಿನಿರತ ಮಹಿಳಾ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಹತ್ಯೆಯ ಘಟನೆ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಈ ಪೈಶಾಚಿಕ ಅತ್ಯಾಚಾರ, ಕೊಲೆ ಹಾಗೂ ಪ್ರತಿಭಟನಾಕಾರರ ಮೇಲಿನ ದಾಳಿ ಖಂಡನೀಯವಾಗಿದೆ” ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

Advertisements

ಬಾಂಗಿ ಪ್ಯಾರಾ ಮೆಡಿಕಲ್ ಕಾಲೇಜಿನ ಪ್ರಾಚಾರ್ಯರಾದ ಎನ್ ಯು ಸಾರವಾಡ ಮಾತನಾಡಿ, “ಆಗಸ್ಟ್ 8ರಂದು ರಾತ್ರಿ ಪಾಳೆಯಲ್ಲಿ ಕೆಲಸದಲ್ಲಿದ್ದ 31 ವರ್ಷದ ಟ್ರೈನಿ ವೈದ್ಯೆಯ ಮೃತ ದೇಹವು ಶುಕ್ರವಾರ ಬೆಳಿಗ್ಗೆ ಕಾಲೇಜಿನ ಮೂರನೇ ಮಹಡಿಯ ಸೆಮಿನಾರ್ ಹಾಲ್‌ನಲ್ಲಿ ಅರೆಬೆತ್ತಲೆ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕುತ್ತಿಗೆ ಮೂಳೆ ಮುರಿದು, ಕಣ್ಣು, ಬಾಯಿ, ಖಾಸಗಿ ಅಂಗದಲ್ಲೂ ರಕ್ತಸ್ರಾವ ಆಗುವಷ್ಟು ಭೀಕರವಾದ ಲೈಂಗಿಕ ದೌರ್ಜನ್ಯ ನಡೆದಿರುವ ಕುರಿತು ವರದಿಯಾಗಿದೆ. ಇದು ದೇಶದ ನಾಗರಿಕರಲ್ಲಿ ತೀವ್ರವಾದ ಆತಂಕ, ಗಾಬರಿ ಮತ್ತು ಆಘಾತವನ್ನು ಉಂಟುಮಾಡಿದೆ. ಜನರ ಜೀವವನ್ನು ರಕ್ಷಿಸಬೇಕಾದ ವೈದ್ಯರಿಗೇ ರಕ್ಷಣೆ ಇಲ್ಲದಂತಾಗಿರುವುದು ಅತ್ಯಂತ ಹೇಯ ಕೃತ್ಯವಾಗಿದೆ. ಇಂತಹ ಘೋರವಾದ ಘಟನೆ ನಡೆಯುವ ಸಂದರ್ಭದಲ್ಲಿ ಅಲ್ಲಿರುವ ಸಿಬ್ಬಂದಿವರ್ಗ ಎಲ್ಲಿತ್ತು. ಆಡಳಿತ ವ್ಯವಸ್ಥೆಯು ಇಂದು ಸಂಪೂರ್ಣವಾಗಿ ಕಲುಷಿತವಾಗಿದೆ. ಅರೋಪಿಗಳನ್ನು ಕೂಡಲೇ ಬಂಧಿಸಿ ಶಿಕ್ಷೆಗೆ ಗುರಿಪಡಿಸಬೇಕು” ಎಂದು ಆಗ್ರಹಿಸಿದರು.

ಎಐಎಂಎಸ್‌ಎಸ್ ಜಿಲ್ಲಾ ಸಂಚಾಲಕಿ ಶಿವಬಾಳಮ್ಮ ಕೊಂಡಗೂಳಿ ಮಾತನಾಡಿ, “ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಹಾಗೂ ಅಮಾನುಷ ಕೊಲೆ ಪ್ರಕರಣವು ಅತ್ಯಂತ ಆಘಾತಕಾರಿಯಾಗಿದ್ದು, ಅಪರಾಧಿಗಳನ್ನು ಬಂಧಿಸಿ ನಿದರ್ಶನೀಯ ಶಿಕ್ಷೆ ನೀಡಬೇಕು. ಈ ಘಟನೆಯನ್ನು ದಿಕ್ಕುತಪ್ಪಿಸಲು ಅವಕಾಶಮಾಡಿಕೊಡದೆ ತೀವ್ರಗತಿಯಲ್ಲಿ ತನಿಖೆ ನಡೆಯಬೇಕು. ಮಹಿಳೆಯರಿಗೆ ಸರ್ಕಾರ ರಕ್ಷಣೆಯನ್ನು ಖಾತ್ರಿಪಡಿಸಬೇಕು. ವರ್ಮಾ ಅವರ ಸಿಫಾರಸುಗಳು ಜಾರಿಯಾಗಲಿ, ಅಶ್ಲೀಲತೆಯನ್ನು ಕೊನೆಗಾಣಿಸಿ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಸಂತ್ರಸ್ತೆ ಕುಟುಂಬಕ್ಕೆ ತ್ವರಿತ ನ್ಯಾಯಕ್ಕಾಗಿ ಒತ್ತಾಯಿಸಿ ಕಿರಿಯ ವೈದ್ಯರು ಕೆಲಸವನ್ನು ನಿಲ್ಲಿಸಿ, ಪ್ರತಿಭಟನೆ ಆಯೋಜಿಸುತ್ತಿರುವುದು ನಿರೀಕ್ಷಿತ ಮತ್ತು ನ್ಯಾಯಸಮ್ಮತವಾಗಿದೆ. ಅಲ್ಲದೆ ದೇಶಾದ್ಯಂತ ಜನರು ಈ ಘಟನೆಯನ್ನು ಖಂಡಿಸಿ ಹಾಗೂ ಮಹಿಳೆಯರ ಮೇಲೆ ಹೆಚ್ಚುತ್ತಿರುವ ಅಪರಾಧಗಳ ವಿರುದ್ಧ ಎಲ್ಲ ಜನತೆ ಬೀದಿಗಿಳಿದು ಪ್ರತಿಭಟಿಸಬೇಕು” ಎಂದು ಹೇಳಿದರು.

ಎಐಡಿವೈಒನ ರಾಜ್ಯ ಕಾರ್ಯದರ್ಶಿ ಸಿದ್ಧಲಿಂಗ ಬಾಗೇವಾಡಿ ಮಾತನಾಡಿ, “ವೈದ್ಯಕೀಯ ವಿದ್ಯಾರ್ಥಿನಿಯ ಮೇಲಾದ ಕೃತ್ಯದ ವಿರುದ್ಧ ನ್ಯಾಯಕ್ಕಾಗಿ ಪ್ರತಿಭಟಿಸುತ್ತಿದ್ದವರ ಮೇಲೆ ಏಕಾಏಕಿ ಸಮಾಜಘಾತುಕ ಶಕ್ತಿಗಳು ದಾಳಿ ಮಾಡಿದ್ದಾರೆ. ಸಾಕ್ಷ್ಯವನ್ನು ನಾಶಪಡಿಸುವ ಮತ್ತು ತನಿಖೆಗೆ ಅಡ್ಡಿಪಡಿಸುವ ಉದ್ದೇಶದಿಂದ ಪ್ರತಿಭಟನಾಕಾರರ ಮನಸ್ಸಿನಲ್ಲಿ ಭಯದ ಭಾವನೆ ಹುಟ್ಟಿಸಲು ಆಗಸ್ಟ್14ರಂದು ಮಧ್ಯರಾತ್ರಿ ಆರ್ ಜಿ ಕರ್ ವೈದ್ಯಕೀಯ ಕಾಲೇಜಿಗೆ ನುಗ್ಗಿ ಪ್ರತಿಭಟನೆ ಸ್ಥಳವನ್ನು ಧ್ವಂಸಗೊಳಿಸಿದ್ದಾರೆ. ಈ ಕೃತ್ಯ ಎಸಗಿರುವವರನ್ನು ರಕ್ಷಿಸಲು ಗೂಂಡಾಗಳು ನಡೆಸಿರುವ ಉದ್ದೇಶಪೂರ್ವಕ ಮತ್ತು ವ್ಯವಸ್ಥಿತ ದಾಳಿಯನ್ನು ನಾವು ಬಲವಾಗಿ ಖಂಡಿಸುತ್ತೇವೆ” ಎಂದರು.

“ಆಸ್ಪತ್ರೆಯ ಅಧಿಕಾರಿಗಳು ಸಹ ಈ ಘಟನೆಗೆ ತಕ್ಷಣ ಪ್ರತಿಕ್ರಿಯಿಸಿಲ್ಲ. ಬದಲಾಗಿ ಅಪರಾಧಿಗಳೊಂದಿಗೆ ಶಾಮೀಲಾಗಿದ್ದು, ಅವರನ್ನು ರಕ್ಷಿಸಲು ಪ್ರಯತ್ನಿಸುತ್ತಿರುವಂತೆ ಕಾಣುತ್ತಿದೆ. ಗೂಂಡಾಗಳ ಇಂತಹ ಕೃತ್ಯಗಳು ಅಪರಾಧ ಎಸಗಿದವರಿಗೆ ಮಾತ್ರ ಸಹಾಯ ಮಾಡುತ್ತವೆ ಮತ್ತು ನಿಜವಾದ ಪ್ರತಿಭಟನಾಕಾರರನ್ನು ಸಮಾಜ ವಿರೋಧಿಗಳೆಂದು ಬಿಂಬಿಸುವ ಮತ್ತು ಚಳವಳಿಯನ್ನು ಹತ್ತಿಕ್ಕುವ ಕೈಗಳನ್ನು ಬಲಪಡಿಸುತ್ತವೆ. ಆದ್ದರಿಂದ ವಿದ್ಯಾರ್ಥಿಗಳು, ಯುವಜನತೆ, ಮಹಿಳೆಯರು ಹಾಗೂ ಇಡೀ ನಾಗರಿಕ ಸಮಾಜ ಈ ಬರ್ಬರ ಘಟನೆಯ ವಿರುದ್ದ ಹೋರಾಡಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಕೋಲ್ಕತ್ತಾ ವೈದ್ಯಕೀಯ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ; ಸ್ವಾಭಿಮಾನಿ ಬಳಗ ಖಂಡನೆ

ವಿದ್ಯಾರ್ಥಿ ಶಾಶ್ವತ ತೇರದಾಳ ಮಾತನಾಡಿ, “ತಾಯಿಸಮಾನರಾದ ಮಹಿಳೆಯರಿಗೆ ನಮ್ಮ ಸಮಾಜದಲ್ಲಿ ರಕ್ಷಣೆಯಿಲ್ಲದಿರುವುದು ಬಹಳ ನೋವಿನ ವಿಷಯ. ಇಂತಹ ಘಟನೆಯ ವಿರುದ್ಧ ನಾವೆಲ್ಲ ಒಂದಾಗಿ ಹೋರಾಡಬೇಕು” ಎಂದರು.

ಈ ಪ್ರತಿಭಟನೆಯಲ್ಲಿ ಸಿದ್ರಾಮ ಹಿರೇಮಠ ಹಾಗೂ ಉಪನ್ಯಾಸಕಾರ ರಣಜಿತ್ ಜಾಧವ, ಸಲ್ಮಾನ ಬಗಲಿ, ವಿದ್ಯಾರ್ಥಿಗಳಾದ ಅಂಜಲಿ ಫರನಾಕರ, ಸ್ನೇಹಾ ಸಾಲಗಲ ನೇಹಾ ಪವಾರ, ಅಶ್ವಿನಿ ಚವ್ಹಾಣ, ಈರಮ್ಮ ಹಿರೇಕೊಪ್ಪ, ಅವಿತಾ, ಶ್ವೇತಾ ಕಾಶಿಬಾಯಿ, ರೂಪಾ, ರೇಣುಕಾ ಸೇರಿದಂತೆ ಬಹುತೇಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X