ವಿಜಯಪುರ | ಅಕ್ರಮ ಚಟುವಟಿಕೆಯ ತಾಣವಾಗಿ ಮಾರ್ಪಟ್ಟ ಮಳಿಗೆಗಳು

Date:

ಸ್ವಸಹಾಯ ಸಂಘಗಳ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸುವ ಉದ್ದೇಶಕ್ಕೆ ಮುದ್ದೇಬಿಹಾಳ ತಾಲೂಕು ಪಂಚಾಯ್ತಿಯಿಂದ ಪಟ್ಟಣದಲ್ಲಿ ನಿರ್ಮಿಸಿರುವ ಮಳಿಗೆಗಳು ಅಕ್ರಮ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿವೆ.

ಪಟ್ಟಣದ ಲಕ್ಷ್ಮೀ ಚಿತ್ರಮಂದಿರದ ಎದುರಿಗೆ ಮುದ್ದೇಬಿಹಾಳದಿಂದ ತಂಗಡಗಿಗೆ ಹೋಗುವ ರಸ್ತೆಯಲ್ಲಿ ಕಳೆದ ಹದಿಮೂರು ವರ್ಷಗಳಿಂದ ಮಳಿಗೆಗಳನ್ನು ನಿರ್ಮಿಸಲಾಗಿದೆ. ಆದರೆ, ಈವರೆಗೆ ಹರಾಜು ಆಗದೇ ಪಾಳುಬಿದ್ದಿದ್ದು, ಕುಡುಕರು, ಪುಂಡಪೋಕರಿಗಳಿಗೆ ಅಕ್ರಮ ಚಟುವಟಿಕೆಯ ತಾಣವಾಗಿ ಬದಲಾಗಿದೆ.

ಸ್ವರ್ಣ ಜಯಂತಿ ಗ್ರಾಮ ಸ್ವರಾಜ್ ಯೋಜನೆಯಡಿ 2010-11ನೇ ಸಾಲಿನಲ್ಲಿ ಒಂದು ಸಂಘಕ್ಕೆ ಅಥವಾ ಒಕ್ಕೂಟಕ್ಕೆ ಒಂದು ಮಳಿಗೆಯನ್ನು ಹಂಚಿಕೆ ಮಾಡಲು ಪಟ್ಟಣದ ವ್ಯಾಪ್ತಿಯಲ್ಲಿ 16 ಮಳಿಗೆಗಳನ್ನು ನಿರ್ಮಿಸಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ

ಸಾಮಾಜಿಕ ಹೋರಾಟಗಾರ ಟಿ.ಎಂ. ಕರಜಗಿ ಎಂಬುವವರು ಹಾಕಿದ್ದ ಮಾಹಿತಿ ಹಕ್ಕು ಅರ್ಜಿಗೆ ಪ್ರತಿಕ್ರಿಯಿಸಿದ್ದ ತಾಲೂಕು ಪಂಚಾಯ್ತಿ ಅಧಿಕಾರಿಗಳು, ಮಳಿಗೆಗಳ ಕುರಿತು ಮಾಹಿತಿ ಇಲ್ಲ ಎಂದು ತಿಳಿಸಿದ್ದರು. ಪ್ರತಿ ಮಳಿಗೆಗೆ ಕೇವಲ ₹1,413 ಬಾಡಿಗೆ ನಿಗದಿಪಡಿಸಲಾಗಿತ್ತು. 2018ರಲ್ಲಿ ಮಳಿಗೆಗಳ ಕುರಿತು ಕಚೇರಿಯಲ್ಲಿ ಮಾಹಿತಿಯೇ ಇಲ್ಲವೇ? ಮಳಿಗೆ ಹರಾಜು ಮಾಡದೇ ಅಧಿಕಾರಿಗಳು ಪಂಚಾಯತ್ ರಾಜ್ ಕಾಯಿದೆ ಉಲ್ಲಂಘನೆ ಮಾಡಿದ್ದಾರೆ. ಇಲಾಖೆ ತನಿಖೆ ನಡೆಸಿ ತಪ್ಪು ಮಾಡಿದ ಅಧಿಕಾರಿಗಳಿಂದ ಹಣ ವಸೂಲಿ ಮಾಡಿ ಮಳಿಗೆಗಳ ಹರಾಜಿಗೆ ಕ್ರಮ ಜರುಗಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಜಾತಿಗಣತಿ ವರದಿ ಅನುಷ್ಠಾನಗೊಳಿಸಲು ಆಗ್ರಹಿಸಿ ದಸಂಸ ಧರಣಿ

ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿಯನ್ನು ಅಂಗೀಕರಿಸಿ, ದಲಿತ ಹಿಂದುಳಿದ...

ತುಮಕೂರು | ಎಕ್ಸ್ ಪ್ರೆಸ್ ಕೆನಾಲ್ ಕಾಮಗಾರಿ ಪುನರಾರಂಭ ವಿರೋಧಿಸಿ ಪ್ರತಿಭಟನೆ

ಹೇಮಾವತಿ ಎಕ್ಸ್  ಪ್ರೆಸ್ ಕೆನಾಲ್ ಕಾಮಗಾರಿ ಪುನರಾರಂಭವನ್ನು ವಿರೋಧಿಸಿ ಇಂದು ಮಾಜಿ...

ಯಾದಗಿರಿ | ಜಾತಿಗಣತಿ ವರದಿ ಅಂಗೀಕರಿಸಿ ಅನುಷ್ಠಾನಗೊಳಿಸಲು ಆಗ್ರಹಿಸಿ ದಸಂಸ ಪ್ರತಿಭಟನೆ

ಅಕ್ಟೋಬರ್ 25ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿಯನ್ನು ಅಂಗೀಕರಿಸಿ...

ಕಲಬುರಗಿ | ಮಹಾನ್ ಕ್ರಾಂತಿಕಾರಿ ಅಶ್ಫಾಕುಲ್ಲಾ ಖಾನ್‌ರವರ 125ನೇ ಜನ್ಮದಿನಾಚರಣೆ

ಕಲಬುರಗಿ ಜಿಲ್ಲೆಯ ಶಾಹಬಾದ್ ತಾಲೂಕಿನ ಎಐಡಿವೈಒ ಸ್ಥಳೀಯ ಸಮಿತಿಯು ನಗರದ ಬಸವೇಶ್ವರ...