ಪತ್ರಿಕೋದ್ಯಮ ಕ್ಷೇತ್ರದಲ್ಲಿ ವಿಫುಲ ಅವಕಾಶಗಳಿದ್ದು, ಅವುಗಳನ್ನು ಪಡೆದುಕೊಳ್ಳಬೇಕಾದರೆ ಹೆಚ್ಚೆಚ್ಚು ಕೌಶಲ್ಯಗಳನ್ನು ಕರಗತ ಮಾಡಿಕೊಳ್ಳಬೇಕು ಎಂದು ಪತ್ರಕರ್ತ ಪರಶುರಾಮ ಬಾಸಗಿ ಹೇಳಿದರು.
ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿನಿಯರಿಗಾಗಿ ಶುಕ್ರವಾರ ಹಮ್ಮಿಕೊಂಡಿದ್ದ ಓರಿಯೆಂಟೇಶನ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
“ಉತ್ತಮ ಬರವಣಿಗೆಯ ಕೌಶಲ್ಯ, ವಿಮರ್ಶಾತ್ಮಕ ಚಿಂತನೆ, ತಂತ್ರಜ್ಞಾನ ಜ್ಞಾನ ಮತ್ತು ಸ್ಪಷ್ಟ ಸಂವಹನವು ಮಾಧ್ಯಮ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಲು ಸಾಧ್ಯವಾಗುತ್ತದೆ” ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರೊ ಓಂಕಾರ ಕಾಕಡೆ ಮಾತನಾಡಿ, “ಪತ್ರಿಕೋದ್ಯಮದ ಪಾತ್ರವು ಅತ್ಯಂತ ಮಹತ್ವದ್ದಾಗಿದೆ. ಆದು ಸಮಾಜದ ಕಣ್ಣಾಗಿರುವಂತೆ ಕಾರ್ಯನಿರ್ವಹಿಸುತ್ತದೆ. ಕೇವಲ ಪಠ್ಯಾಧಾರಿತ ಅಧ್ಯಯನ ಮಾತ್ರ ಸಾಕಾಗದೆ ವೃತ್ತಿಪರ ಕೌಶಲ್ಯಗಳನ್ನು ಕಲಿತು ಅನುಭವದಿಂದ ನಿಮ್ಮ ಕಾರ್ಯತತ್ವವನ್ನು ಸುಧಾರಿಸುವುದು ಮುಖ್ಯ ಕೌಶಲ್ಯಗಳನ್ನು ಅರಿತು ಸರಿಯಾದ ರೀತಿಯಲ್ಲಿ ಅಭ್ಯಾಸ ಮಾಡಿದರೆ, ಉದ್ಯೋಗ ಅವಕಾಶಗಳು ಸ್ವತಃ ನಿಮ್ಮತ್ತ ಚಲಿಸುತ್ತವೆ. ಪಠ್ಯವನ್ನು ಓದುವುದರ ಜತೆಗೆ ವಿಮರ್ಶಾತ್ಮಕ ಚಿಂತನೆ ಹಾಗೂ ಸದೃಢ ಕೌಶಲ್ಯಗಳಿಂದ ನಿಮ್ಮ ವೃತ್ತಿ ಜೀವನದಲ್ಲಿ ಯಶಸ್ಸು ಸಾಧಿಸಬಹುದು” ಎಂದರು.
ಈ ಸುದ್ದಿ ಓದಿದ್ದೀರಾ? ಬಾಣಂತಿಯರ ಸರಣಿ ಸಾವು | ಬಳ್ಳಾರಿ ಬಿಮ್ಸ್ ಆಸ್ಪತ್ರೆಗೆ ಲೋಕಾಯುಕ್ತ ದಾಳಿ
ಕಾರ್ಯಕ್ರಮದಲ್ಲಿ ಬೋಧಕ-ಬೋಧಕೇತರ ಸಿಬ್ಬಂದಿ ವರ್ಗದವರು, ಸಂಶೋಧನಾ ವಿದ್ಯಾರ್ಥಿನಿಯರು, ಸ್ನಾತಕ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿನಿಯರು ಇದ್ದರು.
ಕಾರ್ಯಕ್ರಮದಲ್ಲಿ ಸಂಶೋಧನಾ ವಿದ್ಯಾರ್ಥಿನಿ ಸುಷ್ಮಾ ಪವಾರ್ ಸ್ವಾಗತಿಸಿದರು. ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ತಹಮೀನ ಕೋಲಾರ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸಂಶೋಧನಾ ವಿದ್ಯಾರ್ಥಿನಿ ಫಿಲೋಮಿನಾ ನಿರೂಪಿಸಿದರು, ಪವಿತ್ರಾ ಕಂಬಾರ ವಂದಿಸಿದರು.