ವಿಜಯಪುರ | ಸಿದ್ದೇಶ್ವರ ಸಹಕಾರಿ ಬ್ಯಾಂಕ್‌ ಚುನಾವಣೆ; ಅ.12ರಂದು ಮತದಾನ

Date:

Advertisements

ವಿಜಯಪುರ ಜಿಲ್ಲೆಯ ಪ್ರತಿಷ್ಠಿತ ಸಿದ್ದೇಶ್ವರ ಸಹಕಾರಿ ಬ್ಯಾಂಕ್ ಆಡಳಿತ ಮಂಡಳಿ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಇದೇ ಅಕ್ಟೋಬರ್‌ 12ರಂದು ವಿವಿಧ ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಕೆಗೆ ಅಕ್ಟೋಬರ್‌ 4ರಂದು ಕೊನೆಯದಿನವಾಗಿದೆ.

ಶತಮಾನ ಕಂಡ ಬ್ಯಾಂಕಿನ ನಿರ್ದೇಶಕರಾಗುವ ಮೂಲಕ ಸಕ್ರಿಯ ರಾಜಕಾರಣಕ್ಕೆ ಎಂಟ್ರಿ ಕೊಡಲು ಇರುವ ಮುಖಂಡರಿಗೆ ಈ ಚುನಾವಣೆ ವೇದಿಕೆಯಾಗಿದೆ. ಎರಡನೇ ಹಂತದ ರಾಜಕೀಯ ನಾಯಕರಿಗೆ ರಾಜಕಾರಣದಲ್ಲಿ ಉನ್ನತ ಮಟ್ಟದ ಸ್ಥಾನ ಗಿಟ್ಟಿಸಿಕೊಳ್ಳಲು ಚುನಾವಣೆಯು ಪ್ರತಿಷ್ಠೆಯ ಕಣವಾಗಿದೆ. ಅನೇಕ ಗಣ್ಯರು, ಉದ್ಯಮಿಗಳು, ರಾಜಕಾರಣಿಗಳು ಬ್ಯಾಂಕಿನ ಆಡಳಿತ ಚುಕ್ಕಾಣಿ ಹಿಡಿಯಲು ಚುನಾವಣೆಯಲ್ಲಿ ಪೈಪೋಟಿಗಿಳಿಯುತ್ತಾರೆ.

ಸಾಕಷ್ಟು ಮಂದಿ ಸಿದ್ದೇಶ್ವರ ಬ್ಯಾಂಕಿನ ನಿರ್ದೇಶಕ, ಅಧ್ಯಕ್ಷ ಉಪಾಧ್ಯಕ್ಷರಾಗುವ ಮೂಲಕ ರಾಜ್ಯ ಹಾಗೂ ಜಿಲ್ಲೆಯ ಪ್ರಮುಖ ರಾಜಕಾರಣಿಗಳಾಗಿ ಹೊರಹೊಮ್ಮಿದ್ದಾರೆ. ಬ್ಯಾಂಕಿನ ಆಡಳಿತ ಮಂಡಳಿ ಚುನಾವಣೆಯಿಂದ ರಾಜಕೀಯ ನಂಟು ಬೆಳೆಯುತ್ತದೆ. ಜಿಲ್ಲಾ ಹಾಗೂ ರಾಜ್ಯಮಟ್ಟದಲ್ಲಿ ಮಿಂಚುತ್ತಿರುವ ರಾಜಕೀಯ ನಾಯಕರು ತಮ್ಮ ಬೆಂಬಲಿಗರನ್ನು ಸಿದ್ದೇಶ್ವರ ಬ್ಯಾಂಕ್ ನಿರ್ದೇಶಕರನ್ನಾಗಿಸಿ ತಮ್ಮ ಪ್ರಭಾವ ಹೆಚ್ಚಿಸಿಕೊಳ್ಳುತ್ತಾರೆ.

ಸಾಮಾನ್ಯ 13, ಮಹಿಳೆ 2, ಹಿಂದುಳಿದ ಅ ವರ್ಗ 1, ಹಿಂದುಳಿದ ಬ ವರ್ಗ 1, ಪರಿಶಿಷ್ಟ ಜಾತಿ 1, ಪರಿಶಿಷ್ಟ ಪಂಗಡ 1 ಸ್ಥಾನ ಸೇರಿ 19 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಅರ್ಹ ಸದಸ್ಯರಿಗೆ ಮತದಾನದ ಹಕ್ಕಿರುತ್ತದೆ. ಹಾಲಿ ನಿರ್ದೇಶಕರು ತಮ್ಮದೇ ಬಣ ಕಟ್ಟಿಕೊಂಡು ಮತ್ತೆ ಬ್ಯಾಂಕಿನ ಅಧಿಕಾರ ಹಿಡಿಯಲು ತಂತ್ರಗಾರಿಕೆ ರೊಪಿಸಿ, ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ರಾಜಕೀಯ ನಾಯಕರ ಬೆಂಬಲ ಗಿಟ್ಟಿಸಲು ಮುಂದಾಗಿದ್ದಾರೆ. ಈ ಬಣಕ್ಕೆ ಟಕ್ಕರ್ ಕೊಡಲು ಅನೇಕ ಹೊಸಬರು ಕೊಡ ಮುಂದಾಗಿದ್ದಾರೆ.

ಇದನ್ನೂ ಓದಿ: ವಿಜಯಪುರ | ಅಕ್ಕಮಹಾದೇವಿ ವಿವಿಯ ಪತ್ರಿಕೋದ್ಯಮ ವಿಭಾಗಕ್ಕೆ ರಾಷ್ಟ್ರೀಯ ಪ್ರಶಸ್ತಿ

ಶ್ರಿ ಸಿದ್ದೇಶ್ವರ ಸಹಕಾರಿ ಬ್ಯಾಂಕ್ 2023-24 ನೇ ಸಾಲಿನಲ್ಲಿ 542.55 ಕೋಟಿ ಠೇವಣಿ, 642.79 ಕೋಟಿ ದುಡಿಯಿವ ಬಂಡವಾಳ ಹೊಂದಿದೆ. 52.67ಕೋಟಿ ರೊ ಆದಾಯ ಗಳಿಸಿದೆ. ವಿವಿಧ ಶಾಖೆ, ಎಟಿಎಂ ಸೌಲಭ್ಯ ಹೊಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರೋಡಾ ಕಡಲತೀರದಲ್ಲಿ ಭೀಕರ ದುರಂತ; ಏಳು ಮಂದಿ ನೀರುಪಾಲು, ಓರ್ವನ ಸ್ಥಿತಿ ಗಂಭೀರ

ಪಕ್ಕದ ಮಹಾರಾಷ್ಟ್ರದ ಸಿಂಧದುರ್ಗ ಜಿಲ್ಲೆಯ ಶಿರೋಡಾ ಸಮುದ್ರ ತೀರದಲ್ಲಿ ಭೀಕರ ದುರಂತ...

ಯಾದಗಿರಿ: ಲಂಚಕ್ಕೆ ಬೇಡಿಕೆ; ಲೋಕಾ ಬಲೆಗೆ ಬಿದ್ದ ಬಿಲ್‌ ಕಲೆಕ್ಟರ್

ನಗರಸಭೆಯಲ್ಲಿ ಬಾಕಿ ಉಳಿದ ಇ-ಖಾತಾ ದಾಖಲೆ ನೀಡಲು ಲಂಚ ಬೇಡಿಕೆ ಇಟ್ಟಿದ್ದ...

ಕಲಬುರಗಿ | ಕಾರಾಗೃಹದಲ್ಲಿ ಕೈದಿಗಳ ಗಲಾಟೆ; ಒಬ್ಬನಿಗೆ ಗಂಭೀರ ಗಾಯ

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ಮಧ್ಯೆ ಗಲಾಟೆ ನಡೆದು, ಒಬ್ಬ ಕೈದಿ...

ಬೀದರ್‌ | ಸಾಲಬಾಧೆ : ಮನೆಯಲ್ಲಿ ನೇಣಿಗೆ ಶರಣಾದ ರೈತ

ಸಾಲಬಾಧೆ ತಾಳಲಾರದೆ ರೈತರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಟಗುಪ್ಪಾ...

Download Eedina App Android / iOS

X