ವಿಜಯಪುರ | ಎಸ್‌ಐಆರ್: ಬಿಎಲ್‌ಒಗಳ ಮನೆ-ಮನೆ ಭೇಟಿ; ಸಹಕಾರಕ್ಕೆ ಜಿಲ್ಲಾಧಿಕಾರಿ ಕರೆ

Date:

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)-2026ರ ಅಂಗವಾಗಿ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒಗಳು) ಮನೆ-ಮನೆಗೆ ತೆರಳಿ ಗಣತಿ ನಮೂನೆಗಳನ್ನು ವಿತರಿಸುವ ಕಾರ್ಯದಲ್ಲಿ ನಿರತರಾಗಿದ್ದು, ಸಾರ್ವಜನಿಕರು ಹಾಗೂ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಅವರಿಗೆ ಅಗತ್ಯ ಸಹಕಾರ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ಹೇಳಿದರು.

- Advertisement -

ವಿಜಯಪುರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಎಸ್‌ಐಆರ್-2026 ಕುರಿತು ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯಯಲ್ಲಿ ಮಾತನಾಡಿ, “ಮುಖ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಬಿಎಲ್‌ಗಳು ಮನೆ-ಮನೆಗೆ ತೆರಳಿ ಗಣತಿ ನಮೂನೆಗಳನ್ನು ವಿತರಿಸುವ ಕಾರ್ಯ ಕೈಗೊಂಡಿದ್ದಾರೆ. ಈ ಕಾರ್ಯವನ್ನು ಯಶಸ್ವಿಗೊಳಿಸಲು ಸಾರ್ವಜನಿಕರು ಸಹಕರಿಸಬೇಕಿದ್ದು, ಯಾವುದೇ ರೀತಿಯ ಗೊಂದಲಗಳಿಗೆ ಅವಕಾಶ ನೀಡಬಾರದು” ಎಂದು ಹೇಳಿದರು.

“ಮತದಾರರ ಪಟ್ಟಿಯಲ್ಲಿರುವವರು ಮೃತಪಟ್ಟಿದ್ದರೆ, ಸ್ಥಳಾಂತರಗೊಂಡಿದ್ದರೆ ಅಥವಾ ಬೇರೆ ಕಾರಣಗಳಿಂದ ಮತದಾರರ ಪಟ್ಟಿಯಲ್ಲಿ ತಿದ್ದುಪಡಿ ಅಗತ್ಯವಿದ್ದರೆ, ಸಂಬಂಧಿಸಿದ ಬಿಎಲ್‌ಒಗಳಿಗೆ ಮಾಹಿತಿ ನೀಡಬೇಕು. ಮೃತಪಟ್ಟಿರುವ ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲು ಮರಣ ಪ್ರಮಾಣಪತ್ರ ಅಥವಾ ಅದು ಲಭ್ಯವಿಲ್ಲದಿದ್ದಲ್ಲಿ ಕುಟುಂಬದ ಸದಸ್ಯರ ಲಿಖಿತ ಮಾಹಿತಿಯನ್ನು ಸಲ್ಲಿಸಬೇಕು” ಎಂದು ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಡಿಗಾಸು ಬರ ಪರಿಹಾರ! ಹಿಂಗಾರು ಬಿತ್ತನೆಗೆ ಸಾಲದ ಮೊರೆ...

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟ ಅನುಭವಿಸಿರುವ ಬೆಳಗಾವಿಯ ರೈತರು ಇದೀಗ ಹಿಂಗಾರು ಬಿತ್ತನೆಯ ಸಿದ್ಧತೆಯಲ್ಲಿದ್ದಾರೆ. ಆದರೆ ಕೈಯಲ್ಲಿ ಹಣವಿಲ್ಲದ ಕಾರಣ ಬಿತ್ತನೆಗೆ ಅಗತ್ಯವಾದ ಬೀಜ, ಗೊಬ್ಬರ, ಔಷಧಿ ಸೇರಿದಂತೆ ಕೃಷಿ ಪರಿಕರಗಳನ್ನು...

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಗಣತಿ ನಮೂನೆಗಳಲ್ಲಿ ಮಾಹಿತಿ ಆಪೂರ್ಣವಾಗಿದ್ದರೆ ಅಥವಾ ತಪ್ಪು ಮಾಹಿತಿ ದಾಖಲಾಗಿದ್ದರೆ, ಮುಂದಿನ ಹಂತದಲ್ಲಿ ಸಂಬಂಧಿತ ಮತಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಗಳು (ಎಆರ್‌ಒಗಳು) ಪರಿಶೀಲಿಸಿ ಅಗತ್ಯ ತಿದ್ದುಪಡಿಗಳನ್ನು ಕೈಗೊಳ್ಳಲಿದ್ದಾರೆ ಎಂದು ಹೇಳಿದರು.

“ಗ್ರಾಮೀಣ ಪ್ರದೇಶಗಳಿಗೆ ಹೋಲಿಸಿದರೆ ನಗರ ಪ್ರದೇಶಗಳಲ್ಲಿ ಸ್ಥಳಾಂತರಗೊಂಡಿರುವ ಮತದಾರರ ಸಂಖ್ಯೆ ಹೆಚ್ಚಿರುವುದರಿಂದ ಗೊಂದಲಗಳು ಉಂಟಾಗುವ ಸಾಧ್ಯತೆ ಇದೆ. ಆದ್ದರಿಂದ ಬಿಎಲ್‌ಒಗಳ ಕಾರ್ಯಕ್ಕೆ ಸಾರ್ವಜನಿಕರು ಸಂಪೂರ್ಣ ಸಹಕಾರ ನೀಡಬೇಕು ಎಂದು ಅವರು ತಿಳಿಸಿದರು. ಗಣತಿ ನಮೂನೆಗಳನ್ನು ಕನ್ನಡ ಅಥವಾ ಆಂಗ್ಲ ಭಾಷೆಯಲ್ಲಿ ಭರ್ತಿ ಮಾಡಲು ಅವಕಾಶವಿದ್ದು, ಭಾಷೆಗೆ ಸಂಬಂಧಿಸಿದ ಯಾವುದೇ ಸಮಸ್ಯೆ ಇಲ್ಲ” ಎಂದು ಅವರು ಸ್ಪಷ್ಟಪಡಿಸಿದರು.

“ಒಂದಕ್ಕಿಂತ ಹೆಚ್ಚು ಹೆಸರು ಮತದಾರರ ಪಟ್ಟಿಯಲ್ಲಿ ಕಂಡುಬಂದರೆ. ಸಂಬಂಧಿಸಿದ ಮತದಾರರಿಗೆ ಮಾಹಿತಿ ನೀಡಿ ಒಂದು ಕಡೆ ಮಾತ್ರ ಹೆಸರು ಉಳಿಸಿ, ಉಳಿದ ಪಟ್ಟಿಗಳಿಂದ ಹೆಸರು ತೆಗೆದುಹಾಕಲು ಬಿಎಲ್‌ಒಗಳಿಗೆ ಸೂಚನೆ ನೀಡಲಾಗಿದೆ” ಎಂದು ಹೇಳಿದರು.

ಸಭೆಯಲ್ಲಿ ಪ್ರೊಬೇಷನರಿ ಐಎಎಸ್ ಅಧಿಕಾರಿ ಅಭಿಷೇಕ್ ಸೆಹರಾ ವಿಜಯಪುರ ಪ್ರಶಾಂತ ಚನ್ನಗೊಂಡ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು. ತಹಶೀಲ್ದಾರ್ ಹಾಗೂ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ಅಂಗನವಾಡಿ ನೌಕರರ ಬೇಡಿಕೆಗಳನ್ನು ಈಡೇರಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಫಲ : ಸುನಂದ ಆರೋಪ

ಅಂಗನವಾಡಿ ನೌಕರರ ಬೇಡಿಕೆಗಳನ್ನು ಈಡೇರಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಫಲವಾಗಿದ್ದು,...

​ಚಿಂತಾಮಣಿ | ಅನಾಥನೆಂದು ಹೇಳಿ ಟಿಕೆಟ್ ಪಡೆದು ಗೆದ್ದರು, ಅಭಿವೃದ್ಧಿಗೆ ಕೊಡುಗೆಯೇ ಇಲ್ಲ:ಪ್ರದೀಪ್ ಈಶ್ವರ್ ವಿರುದ್ಧ ಹರಿದಾಯ್ದ ಜಿ.ಎಲ್. ಶಂಕರ್

ಚಿಂತಾಮಣಿ ನಗರದ ಕಾರ್ಯನಿರತ ಪತ್ರಕರ್ತರ ಸಂಘದ ಭವನದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್...

ಕೋಲಾರ | ಅರಣ್ಯ ಇಲಾಖೆ ವಿರುದ್ಧ ರೈತರ ಆಕ್ರೋಶರೈತರ ಹಕ್ಕುಗಳ ಅರಿವಿನಿಂದ ಅರಣ್ಯ ಅಧಿಕಾರಿಗಳಿಗೆ ನಡುಕ: ಆರ್. ಶ್ರೀನಿವಾಸನ್

ರೈತರು ನಿದ್ದೆ ಮಾಡುವ ಸಂದರ್ಭವನ್ನು ಬಳಸಿಕೊಂಡು ಬೆಳಗಿನ ಜಾವ ಪೊಲೀಸ್ ಬೆಂಗಾವಲಿನಲ್ಲಿ...

ಅನರ್ಹತೆ ನೋಟಿಸ್: ಲೋಕಸಭಾ ಸ್ಪೀಕರ್ ಬಳಿ ಮತ್ತೆ 15 ದಿನ ಕಾಲಾವಕಾಶ ಕೋರಿದ ಟಿಎಂಸಿ ಬಂಡಾಯ ಸಂಸದರು

ಪಕ್ಷಾಂತರ ನಿರೋಧಕ ಕಾಯ್ದೆಯಡಿ ಎದುರಿಸುತ್ತಿರುವ ಅನರ್ಹತೆ ಅರ್ಜಿಗೆ ಸಂಬಂಧಿಸಿದಂತೆ ಲೋಕಸಭೆ ಸಚಿವಾಲಯ...