ವಿಜಯಪುರ | ಎಸ್‌ಐಆರ್ ಡಿಜಿಟಲೀಕರಣಕ್ಕೆ ಚುರುಕು; 19,82,114 ಮತದಾರರು ದಾಖಲು

Date:

ಜಿಲ್ಲೆಯಲ್ಲಿ ನಡೆಯುತ್ತಿರುವ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ- 2026 (ಎಸ್‌ಐಆರ್) ಕಾರ್ಯವನ್ನು ನಿಗದಿತ ವೇಳಾಪಟ್ಟಿಯೊಳಗೆ ಪೂರ್ಣಗೊಳಿಸಲು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಡಾ. ಆನಂದ್ ಕೆ ಜಿಲ್ಲೆಯ ಎಲ್ಲಾ ತಾಲೂಕುಗಳ ತಹಶೀಲ್ದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿಯಿಂದ ಜಿಲ್ಲೆಯ ಎಲ್ಲಾ ತಾಲೂಕು ತಹಶೀಲ್ದಾರರೊಂದಿಗೆ ನಡೆಸಿದ ವಿಡಿಯೋ ಸಂವಾದ ಸಭೆಯಲ್ಲಿ ಪ್ರಮುಖ ಸೂಚನೆಗಳನ್ನು ಸೂಚನೆ ನೀಡಲಾಯಿತು.

ತಹಶೀಲ್ದಾರರು ತಮ್ಮ ಲಾಗಿನ್‌ಗಳಲ್ಲಿ ಬೂತ್ ಮಟ್ಟದ ಅಧಿಕಾರಿಗಳು (BLO) ASDD (Absent, Shifted, Duplicate, Death) ಮಾಡಿ ಸಲ್ಲಿಸಿರುವ ವಿವರಗಳನ್ನು ಕೂಲಂಕಷವಾಗಿ ಪರಿಶೀಲಿಸಬೇಕು ಹಾಗೂ ಅದಕ್ಕೆ ತಕ್ಕಂತೆ ಪೂರಕ ದಾಖಲೆಗಳನ್ನು ಖಾತ್ರಿಪಡಿಸಿಕೊಳ್ಳಬೇಕು. ASDD ಮತದಾರರ ವಿವರಗಳನ್ನು ಸಂಬಂಧಿತ ಬೂತ್ ಮಟ್ಟದ ಏಜೆಂಟರಿಗೆ (BLA) ಹಾಗೂ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ನಿಯಮಾನುಸಾರ ಒದಗಿಸಿರುವ ಕುರಿತು ಮಾಹಿತಿ ಪಡೆಯಬೇಕು. ಈ ಇಡೀ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.

- Advertisement -

ಡಿಜಿಟಲೀಕರಣಕ್ಕೆ ಚುರುಕು: ಗಣತಿ ನಮೂನೆಗಳ ವಿತರಣೆಯ ಪ್ರಗತಿ ಹಾಗೂ ಡಿಜಿಟಲೀಕರಣದ (Digitization) ಕಾರ್ಯವನ್ನು ತ್ವರಿತಗೊಳಿಸಿ. ಯಾವುದೇ ಬಾಕಿ ಉಳಿಯದಂತೆ ಕ್ರಮ ಕೈಗೊಳ್ಳಬೇಕು. ಮನೆಮನೆಗೆ ಭೇಟಿ ನೀಡಿ ನಮೂನೆಗಳನ್ನು ವಿತರಿಸುವ ಹಾಗೂ ಸ್ವೀಕರಿಸಿದ ನಮೂನೆಗಳನ್ನು ತಕ್ಷಣವೇ ಡಿಜಿಟಲೀಕರಣಗೊಳಿಸುವ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಜುಲೈ 11, 12 ರಂದು ವಿಶೇಷ ಅಭಿಯಾನ: ಜುಲೈ 11 ಮತ್ತು 12ರಂದು ನಡೆಯಲಿರುವ ವಿಶೇಷ ಅಭಿಯಾನ ಯಶಸ್ವಿಯಾಗಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು. ಈ ಅವಧಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರನ್ನು ಸಂಪರ್ಕಿಸಿ, ಗಣತಿ ನಮೂನೆಗಳ ವಿತರಣೆ. ಸ್ವೀಕಾರ ಹಾಗೂ ಅಗತ್ಯ ತಿದ್ದುಪಡಿ. ಕಾರ್ಯಗಳನ್ನು ಚುರುಕುಗೊಳಿಸಬೇಕು.

ದೂರು ಮತ್ತು ಆಕ್ಷೇಪಣೆಗಳ ವಿಲೇವಾರಿ: ಮತದಾರರಿಂದ ಸಲ್ಲಿಕೆಯಾಗುವ ಹಕ್ಕು ಮಂಡನೆಗಳು ಮತ್ತು ಆಕ್ಷೇಪಣೆಗಳು ನಿಗದಿತವಾಗಿ ನಿಯಮಾನುಸಾರ ತ್ವರಿತವಾಗಿ ವಿಲೇವಾರಿ ಆಗುವಂತೆ ಕ್ರಮ ಕೈಗೊಳ್ಳಬೇಕು. ಮತದಾರರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಸಲಹೆ ಹಾಗೂ ಸಹಕಾರ ನೀಡಬೇಕು.

ಗೌರವಧನ ವಿತರಣೆ: ಬೂತ್ ಮಟ್ಟದ ಅಧಿಕಾರಿಗಳ ಬಿಎಲ್ ಒ ಅವರಿಗೆ ನೀಡಲಾಗುವ ಗೌರವಧನವನ್ನು ಯಾವುದೇ ವಿಳಂಬವಿಲ್ಲದೆ, ಸಮಯಕ್ಕೆ ಸರಿಯಾಗಿ ವಿತರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಜಿಲ್ಲೆಯಲ್ಲಿ 18,31,696 ಗಣತಿ ನಮೂನೆ ವಿತರಣೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ

ಜಿಲ್ಲೆಯಾದ್ಯಂತ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭಗೊಂಡಿದ್ದು, ಮತಗಟ್ಟೆ ಮಟ್ಟದ ಅಧಿಕಾರಿಗಳು ಜೂ.29 ರಿಂದ ಮನೆ ಮನೆಗೆ ಭೇಟಿ ನೀಡಿ ಮತದಾರರಿಗೆ ಗಣತಿ ನಮೂನೆಗಳನ್ನು ವಿತರಿಸುವ ಕಾರ್ಯ ಭರದಿಂದ ನಡೆದಿದ್ದು, ಇಲ್ಲಿಯವರೆಗೆ ಜಿಲ್ಲೆಯ ಪ್ರಗತಿ ವರದಿಯ ಪ್ರಕಾರ ಇಲ್ಲಿಯವರೆಗೆ 18,31,696 ಗಣತಿ ನಮೂನೆ ಮತದಾರರಿಗೆ ವಿತರಿಸಲಾಗಿದೆ. ಅವುಗಳಲ್ಲಿ 4,50,158 ಗಣಕೀಕರಣಗೊಂಡ ಗಣತಿ ನಮೂನೆಗಳಿವೆ. ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ ತಿಳಿಸಿದ್ದಾರೆ.

16 ಜೂನ್ 2025ರ ಮತದಾರರ ಪಟ್ಟಿಯಂತೆ ಜಿಲ್ಲೆಯಲ್ಲಿ ಒಟ್ಟು 19,82,114 ಮತದಾರರು ದಾಖಲಾಗಿದ್ದಾರೆ. ಇವರಿಗೆ ಮನೆ ಮನೆಗೆ ತೆರಳಿ ಗಣತಿ ನಮೂನೆಗಳನ್ನು ವಿತರಿಸಿ. ಅಗತ್ಯ ಮಾಹಿತಿಯನ್ನು ಸಂಗ್ರಹಿಸುವ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ಜಂತರ್‌ ಮಂತರ್‌ನಲ್ಲಿ ವರದಿಗಾರರಿಗೂ ಪೊಲೀಸರ ನಿರ್ಬಂಧ

ದೆಹಲಿಯಲ್ಲಿ ಸಿಜೆಪಿ ಪ್ರತಿಭಟನೆಯನ್ನು ಹತ್ತಿಕ್ಕಲು ದೆಹಲಿ ಪೊಲೀಸರು ಮೊಳೆಗಳು, ಬ್ಯಾರಿಕೇಡ್‌ಗಳು ಹಾಗೂ...

ಸಿಜೆಪಿ ಪ್ರತಿಭಟನೆ| ದೆಹಲಿಯಲ್ಲಿ ವಿಮಾನದೊಳಗೇ ದೀಪ್ಕೆ, ದಾಸ್, ರಾಂಕಾ ಬಂಧನ

ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಸಿಜೆಪಿ ಪ್ರತಿಭಟನೆಗೆ ಎಡಪಕ್ಷಗಳು, ಎಎಪಿ ಬೆಂಬಲ; ದೂರ ಉಳಿದ ಕಾಂಗ್ರೆಸ್

ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ, ಎಸ್‌ಐಆರ್‌...