ವಿಜಯಪುರ | ವಕ್ಫ್‌ ನೋಟಿಸ್‌ಗೆ ಖಂಡನೆ: ರೈತರಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ

Date:

ವಕ್ಫ್‌ ಹೆಸರಿನಲ್ಲಿ ರೈತರಿಗೆ ನೋಟಿಸ್ ನೀಡಿದ್ದನ್ನು ಹಾಗೂ ಸರ್ಕಾರದ ನಡೆಯನ್ನು ಖಂಡಿಸಿ ರಾಜ್ಯ ರೈತ ಸಂಘ- ಹಸಿರು ಸೇನೆ ಹಾಗೂ ಅಖಂಡ ಕರ್ನಾಟಕ ರೈತ ಸಂಘದ ವತಿಯಿಂದ ಆಹೋರಾತ್ರಿ ಧರಣಿಯನ್ನು ವಿಜಯಪುರ ನಗರದ ಜಿಲ್ಲಾಧಿಕಾರಿ ಕಚೇರಿ ಹಮ್ಮಿಕೊಳ್ಳಲಾಯಿತು.

- Advertisement -

ಸರ್ಕಾರದ ಹುನ್ನಾರದಿಂದ ರೈತರಿಗೆ ದೀಪಾವಳಿ ಹಬ್ಬ ಕರಾಳವಾಗಿದೆ ಎಂದು ಆರೋಪಿಸಿದ ರೈತರು, ನೋಟಿಸ್‌ನಿಂದ ರೈತ ಕುಟುಂಬಗಳು ಆತಂಕಕ್ಕೀಡಾಗಿದ್ದಾರೆ. ವಕ್ಫ್‌ ಬೋರ್ಡ್ ಎಂದು ದಾಖಲಾಗಿರುವುದನ್ನು ಕೂಡಲೇ ತೆಗೆಯಬೇಕು. ರಾಜ್ಯ ಸರ್ಕಾರ ರೈತರ ವಿಷಯದಲ್ಲಿ ಗಂಭೀರವಾಗಿ ನಿರ್ಣಯ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ರೈತ ವಲಯಕ್ಕೆ ಆತಂಕಕ್ಕೀಡಾಗಿರುವ ವಿಷಯವನ್ನು ಸರ್ಕಾರ ಕೂಡಲೇ ಪರಿಹರಿಸಿ ಸಮಸ್ಯೆಯನ್ನು ಇತ್ಯರ್ಥಗೊಳಿಸುವವರೆಗೂ ಹೋರಾಟ ನಿಲ್ಲುವುದಿಲ್ಲ ಎಂದು ರೈತ ಮುಖಂಡರಾದ ಅರವಿಂದ ಕುಲಕರ್ಣಿ ತಿಳಿಸಿದರು.

ಆಹೋರಾತ್ರಿ ಧರಣಿಗೂ ಮುನ್ನ ವಿಜಯಪುರ ನಗರದ ಸಿದ್ದೇಶ್ವರ ದೇವಸ್ಥಾನದಿಂದ ಪ್ರತಿಭಟನಾ ಮೆರವಣಿ ಆರಂಭಿಸಿ, ಗಾಂಧಿಚೌಕ್ ಸೇರಿದಂತೆ ವಿವಿಧ ಪ್ರಮುಖ ಮಾರ್ಗಗಳಲ್ಲಿ ರೈತರು ಪ್ರತಿಭಟನಾ ರ್‍ಯಾಲಿ ನಡೆಸಿದರು.

ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಭಾವಚಿತ್ರ ಪ್ರದರ್ಶಿಸಿ ಆಕ್ರೋಶ ಹೊರ ಹಾಕಿದ್ದಾರೆ. ಅಥಣಿ ರಸ್ತೆಯಲ್ಲಿ ಧರಣಿಗೆ ಆಣಿಯಾದ ರೈತರು ರಸ್ತೆ ತಡೆ ನಡೆಸಿದರು. ಬಸವೇಶ್ವರ ಸರ್ಕಲ್. ಡಾ.ಅಂಬೇಡ್ಕರ್ ಸರ್ಕಲ್ ಮೂಲಕ ಡಿಸಿ ಕಚೇರಿವರೆಗೂ ಮೆರವಣಿಗೆ ಮಾಡಿದರು. ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ರೈತರ ಮನವೊಲಿಸಲು ಪ್ರಯತ್ನಿಸಿದರು.

ಇದನ್ನೂ ಓದಿದ್ದೀರಾ;ಹಾಸನ | ವಿಪಕ್ಷದವರು ಏನೇ ಮಾಡಿದರು ಮುಖ್ಯಮಂತ್ರಿಯನ್ನು ಕುಂದಿಸಲು ಸಾಧ್ಯವಿಲ್ಲ: ಕಾಂಗ್ರೆಸ್ ಮುಖಂಡರು

ಹೋರಾಟವನ್ನು ರೈತರು ಮುಂದುವರಿಸಿದ್ದ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಭಾವಚಿತ್ರದ ಮುಂದೆ ದೀಪ, ಹಣತೆ ಇಟ್ಟು ರೈತರು ಕರಾಳ ದೀಪಾವಳಿ ಆಚರಣೆ ಮಾಡಿದ್ದಾರೆ. ಧರಣಿಯಲ್ಲಿ ರೈತ ಸಂಘಟನೆಯ ಮುಖಂಡರಾದ ಅರವಿಂದ ಕುಲಕರ್ಣಿ, ಸಂಗಮೇಶ ಇನ್ನಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...