ವಿಜಯಪುರ | ಸಿಎಸ್ಆರ್ ಅನುದಾನದಡಿ ಸ್ಮಾರ್ಟ್ ಕ್ಲಾಸ್ ಸೌಲಭ್ಯ: ಸಚಿವ ಎಂ ಬಿ ಪಾಟೀಲ

Date:

ವಿದ್ಯಾರ್ಥಿಗಳನ್ನು ಬೌದ್ಧಿಕ ಮತ್ತು ದೈಹಿಕವಾಗಿ ಸದೃಢರನ್ನಾಗಿಸಲು ಸಿಎಸ್ಆರ್ ಅನುದಾನಡಿ ಸ್ಮಾರ್ಟ್ ಕ್ಲಾಸ್ ಮತ್ತು ಕ್ರೀಡಾ ಸೌಲಭ್ಯಗಳನ್ನು ಒದಗಿಸಲಾಗುತ್ತದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ತಿಳಿಸಿದರು.

- Advertisement -

ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಹೊನವಾಡ ಗ್ರಾಮದಲ್ಲಿ ಉನ್ನತೀಕರಿಸಿದ ಸರಕಾರಿ ಪ್ರೌಢಶಾಲೆ ಪ್ರಾರಂಭೋತ್ಸವದ ಅಂಗವಾಗಿ 9ನೇ ತರಗತಿ ಉದ್ಘಾಟನೆ, ಸರಸ್ವತಿ ಪೂಜೆ ಹಾಗೂ ಸಿಎಸ್ಆರ್ ಅನುದಾನದಲ್ಲಿ ಶಾಲಾ ಮಕ್ಕಳಿಗಾಗಿ ಅಳವಡಿಸಿರುವ ಕ್ರೀಡಾ ಸಲಕರಣೆಗಳನ್ನು ವಿದ್ಯಾರ್ಥಿಗಳಿಂದ ಉದ್ಘಾಟಿಸಿದ ಬಳಿಕ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಇಲ್ಲಿನ ವಿದ್ಯಾರ್ಥಿಗಳು ಹೈಸ್ಕೂಲು‌ ಶಿಕ್ಷಣಕ್ಕಾಗಿ ಅಲೆದಾಡುವುದನ್ನು ತಪ್ಪಿಸಲು ಮತ್ತು ಪೋಷಕರ ಕಾಳಜಿಗೆ ಸ್ಪಂದಿಸಲು‌ ಸರಕಾರಿ ಹೈಸ್ಕೂಲು ಪ್ರಾರಂಭಿಸಬೇಕು ಎಂಬ ಬಹುದಿನಗಳ ಬೇಡಿಕೆಯನ್ನು ಈಗ ಈಡೇರಿಸಿದ್ದೇವೆ. ವಿಶೇಷವಾಗಿ ವಿದ್ಯಾರ್ಥಿನಿಯರು ತಮ್ಮೂರಿನಲ್ಲಿಯೇ ಹೈಸ್ಕೂಲಿನಲ್ಲಿ ವಿದ್ಯಾಭ್ಯಾಸ ಮಾಡಲು ಇದರಿಂದ ಅನುಕೂಲವಾಗಲಿದೆ. ಹೈಸ್ಕೂಲು ಪ್ರಾರಂಭಿಸಲು ಸಾಕಷ್ಟು ಶ್ರಮ ವಹಿಸಿದ್ದೇವೆ. ಮಕ್ಕಳಿಂದಲೇ ಈಗ ಉದ್ಘಾಟನೆ ಮಾಡಿಸಿದ್ದೇವೆ. ಕೆಂಪೇಗೌಡ ಅಂತಾರಾಷ್ಡ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಸಿಎಸ್ಆರ್ ಅನುದಾನ ಬಳಸಿ ಇಲ್ಲಿ ಶಾಲೆ ಉನ್ನತೀಕರಿಸಲಾಗಿದೆ. ಈ ಶಾಲೆಗೆ ಅಲ್ಲಿನ ಅಧಿಕಾರಿಗಳು ಇಂದು ಭೇಟಿ ನೀಡಿದ್ದು, ಈ ಶಾಲೆಯನ್ನು ಸಮಗ್ರವಾಗಿ ಅಭಿವೃದ್ಧಿ ಮಾಡಲಿದ್ದಾರೆ. ಬಬಲೇಶ್ವರ ಮತಕ್ಷೇತ್ರದಲ್ಲಿ ಸಿಎಸ್ಆರ್ ಅನುದಾನದಡಿ ರೂ. 200 ಕೋಟಿ ವೆಚ್ಚದಲ್ಲಿ ಸರಕಾರಿ ಶಾಲೆಗಳ ಅಭಿವೃದ್ಧಿಗೆ ಯೋಜನೆ ರೂಪಿಸಲಾಗಿದೆ. ಒಟ್ಟು 211 ಕೊಠಡಿಗಳನ್ನು ನಿರ್ಮಿಸಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದ್ದು, ಈವರೆಗೆ ರೂ. 53 ಕೋಟಿ ವೆಚ್ಚ ಮಾಡಲಾಗಿದೆ. ಹೊಂಡಾ ಕಂಪನಿಯವರು ಇಲ್ಲಿ ರೂ. 2.50 ಕೋಟಿ ವೆಚ್ಚದಲ್ಲಿ ಶಾಲಾ ಕಟ್ಟಡ ನಿರ್ಮಿಸಲಿದ್ದಾರೆ” ಎಂದು ಅವರು ತಿಳಿಸಿದರು‌.

ನಿವೃತ್ತ ಶಿಕ್ಷಕ ಅರವಿಂದ ಮಸಳಿ ಮಾತನಾಡಿ, “ಗ್ರಾಮದ ವಿದ್ಯಾರ್ಥಿಗಳು ಹೈಸ್ಕೂಲು ಶಿಕ್ಷಣ ಪಡೆಯಲು ಪಕ್ಕದ ಊರಿಗೆ ತೆರಳಲು ಪರದಾಡುತ್ತಿದ್ದರು. ಸಚಿವರು ಈ ಶಾಲೆ ಉನ್ನತೀಕರಿಸಿ ವಿದ್ಯಾರ್ಥಿಗಳು ಮತ್ತು ಪೋಷಕರ ಸಮಸ್ಯೆ ಬಗೆಹರಿಸಿದ್ದಾರೆ. ಅಷ್ಟೇ ಅಲ್ಲ, ಜಿಲ್ಲೆಯ.ಬಡಮಕ್ಕಳಿಗೆ ಶಿಕ್ಷಣಕ್ಕಾಗಿ ನೆರವಾಗುವ ಕೊಡುಗೈ ದಾನಿ ಎನಿಸಿಕೊಂಡಿದ್ದಾರೆ. ನೀರಾವರಿ ಮೂಲಕ ರೈತರ ಬಾಳು ಹಸನು ಮಾಡಿದ್ದಾರೆ” ಎಂದರು.

ವಿಜಯಪುರ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ ತಳವಾರ ಮಾತನಾಡಿ, “ಸಚಿವರು ಗ್ರಾಮಸ್ಥರ ಬಹುದಿನಗಳ ಬೇಡಿಕೆಯನ್ನು ಈ ಶಾಲೆ ಉನ್ನತೀಕರಣ ಮಾಡುವ ಮೂಲಕ ಈಡೇರಿಸಿದ್ದಾರೆ. ರಾಜ್ಯದಲ್ಲಿಯೇ ಬಬಲೇಶ್ವರ‌ ಮತಕ್ಷೇತ್ರದಲ್ಲಿ ಅತೀ ಹೆಚ್ಚು ಅಂದರೆ ಆರು ಪ್ರೌಢ ಶಾಲೆಗಳನ್ನು ಮಂಜೂರು ಮಾಡಲು ಕ್ರಮ ಕೈಗೊಂಡಿದ್ದಾರೆ. ರೂ. 100 ಕೋಟಿ ಸಿಎಸ್ಆರ್ ಅನುದಾನದಲ್ಲಿ ಮತಕ್ಷೇತ್ರದ 100 ಶಾಲೆಗಳಲ್ಲಿ ತಲಾ ರೂ. 1 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯ ಕೈಗೊಂಡಿದ್ದಾರೆ. 80 ಶಾಲೆಗಳಲ್ಲಿ ಹೆಚ್ಚುವರಿ‌ ಕೋಣೆಗಳ ನಿರ್ಮಾಣಕ್ಕೆ ಕ್ರಮ ವಹಿಸಲಾಗಿದೆ. ಮತಕ್ಷೇತ್ರದ ಎಲ್ಲ 40 ಪ್ರೌಢ ಶಾಲೆಯಲ್ಲಿ 10ನೇ ತರಗತಿಗಳಿಗೆ ಸ್ಮಾರ್ಟ್ ಕ್ಲಾಸ್ ಸೌಲಭ್ಯ ಒದಗಿಸಿದ್ದಾರೆ. ಮಮದಾಪುರಕ್ಕೆ ಭೇಟಿ‌ ನೀಡಿದ ಶಿಕ್ಷಣ ಇಲಾಖೆಯ ರಾಜ್ಯ ಮಟ್ಟದ ಅಧಿಕಾರಿಯೊಬ್ಬರು ಅಲ್ಲಿನ ಸುಸಜ್ಜಿತ ಸರಕಾರಿ‌ ಶಾಲೆಯನ್ನು ವೀಕ್ಷಿಸಿ ಸಂತಸಪಟ್ಟು ಅದರ ಬ್ಲ್ಯೂಪ್ರಿಂಟ್ ತೆಗೆದುಕೊಂಡು ಹೋಗಿದ್ದಾರೆ. ಮಕ್ಕಳಿಗೆ ಶಿಕ್ಷಣದ ಜೊತೆ ಸ್ವಾಸ್ತ್ಯ ಒದಗಿಸಲು ಕ್ರೀಡಾ ಸಲಕರಣೆ ಸೌಲಭ್ಯ ಒದಗಿಸಿದ್ದಾರೆ. ಮೂಲಭೂತ ಸೌಲಭ್ಯ ಒದಗಿಸಿರುವ ಪರಿಣಾಮ ಹೆಚ್ಚಿನ‌ ಸಂಖ್ಯೆಯಲ್ಲಿ ಮಕ್ಕಳು ಸರಕಾರಿ ಶಾಲೆಗಳಲ್ಲಿ ‌ಪ್ರವೇಶ ಪಡೆಯುತ್ತಿದ್ದಾರೆ. ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ವಿದ್ಯಾರ್ಥಿಗಳ ಕನಸು ನನಸು ಮಾಡಲು ಶಿಕ್ಷಕರು ಮತ್ತು ಸಿಬ್ಬಂದಿ ಶ್ರಮಿಸಲಿದ್ದೇವೆ” ಎಂದು ಹೇಳಿದರು.

ಇದನ್ನೂ ಓದಿ: ವಿಜಯಪುರ | ಪಿಪಿಪಿ ಮಾದರಿಯ ವೈದ್ಯಕೀಯ ಕಾಲೇಜು ವಿರೋಧಿಸಿ ರಂಗೋಲಿ ಚಳವಳಿ

ಈ ಸಂದರ್ಭದಲ್ಲಿ ಮುಖಂಡರಾದ ವಿಜಯಕುಮಾರ ಗುರಸಿದ್ದಯ್ಯ ಹಿರೇಮಠ, ತುಕಾರಾಮ ದಡಕೆ, ರಾಮನಗೌಡ ಸಿದ್ಧನಗೌಡ ಚಾವರ, ನಬಿರಸೂಲ ತೆಲಸಂಗ, ಸಿದ್ದು ಗೌಡನವರ, ಸಿದ್ದು ಬೆಳಗಾವಿ, ಯಾಕೂಬ ಜತ್ತಿ, ಶೈಲೇಂದ್ರ ಬಾವಿಮನಿ, ಸಾಬು‌ ಖಂಡೇಕರ, ಮುರಿಗೆಪ್ಪ ಕೋಟಿ, ಶೋಭಾ ಶೀಳಿನ, ಸುರೇಶಗೌಡ ಪಾಟೀಲ, ಬಸವರಾಜ ನರಳೆ, ಸೀತಾರಾಮ ನರಳೆ, ದುಂಡಪ್ಪ ವಾಲಿಕಾರ, ಅಕ್ಬರ ತಿಕೋಟಿ, ತಹಸೀಲ್ದಾರ ಸುರೇಶ ಚವಲರ, ತಾಪಂ ಇಒ ಬಸವಂತರಾಯ ಬಿರಾದಾರ, ಸಿಪಿಐ ರಮೇಶ ಅವಜಿ, ಶೋಭಾ, ಮುಂತಾದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...