ಶಿಕ್ಷಣದಿಂದ ಮಾತ್ರ ಸಮಾಜದಲ್ಲಿ ಬದಲಾವಣೆ, ಸುಧಾರಣೆ ಸಾಧ್ಯ. ಅದರ ಗೌರವ ಶಿಕ್ಷಕರಿಗೆ ಸಲ್ಲುತ್ತದೆ ಎಂದು ವಿಜಯಪುರ ಶಾಸಕ ಯಶವಂತರಾಯಗೌಡ ಪಾಟೀಲ ಅಭಿಪ್ರಾಯಪಟ್ಟರು.
ಜಿಲ್ಲೆಯ ಇಂಡಿ ಪಟ್ಟಣದಲ್ಲಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಚಡಚಣ ಘಟಕ ಹಾಗೂ ವಿವಿಧ ಸಂಘಟನೆಗಳ ಆಶ್ರಯದಲ್ಲಿ ಗುರುಕೃಪ ಮಂಗಲ ಕಾರ್ಯಾಲಯದಲ್ಲಿ ಆಯೋಜಿಸಿದ್ದ ನಿವೃತ್ತ ಶಿಕ್ಷಕರ ಅಭಿನಂದನಾ ಸಮಾರಂಭ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಶಾಸಕ ವಿಠಲ ಕಟಕದೊಂಡ ಮಾತನಾಡಿ, “ವಿದ್ಯಾರ್ಥಿಗಳನ್ನು ಪ್ರಜೆಗಳನ್ನಾಗಿ ರೂಪಿಸುವ ಶಿಕ್ಷಕ ವೃತ್ತಿಗೆ ಎಂದಿಗೂ ನಿವೃತ್ತಿ ಎಂಬುದಿಲ್ಲ. ಇವರು ಸಮಾಜಕ್ಕೆ ಸದಾ ಮಾರ್ಗದರ್ಶಕರಾಗಿರುತ್ತಾರೆ” ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕ ಐ ಎಂ ಬೆದ್ರೆಕರ, ಶಿಕ್ಷಕರ ಸೊಸೈಟಿ ಅಧ್ಯಕ್ಷ ಎಸ್ ಎಂ ಪಾಟೀಲ, ಬಿ ಇ ಒ ಸುಜಾತ ಹೊನೂರ, ಪಟ್ಟಣ ಪಂಚಾಯತಿ ಅಧ್ಯಕ್ಷ ಮಲ್ಲಿಕಾರ್ಜುನ ಧೋತ್ರೆ, ಉಪಾಧ್ಯಕ್ಷ ಇಲಾಯಿ ನದಾಫ್, ಪಟ್ಟಣ ಪಂಚಾಯತಿ ಮಾಜಿ ಅಧ್ಯಕ್ಷ ಬಾಬು ಗೌಡ ಪಾಟೀಲ, ಮುಖಂಡ ಕಾಂತುಗೌಡ ಪಾಟೀಲ, ಮಹಾದೇವ ಹಿರಕುರುಬರ, ಇವ್ನೆಸ್ ಮಖಾನದಾರ, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಸವರಾಜ ಮಜ್ಜಿಗೆ, ಉಪಾಧ್ಯಕ್ಷ ಸಾಲಿಮ್ ಮಖಾನದಾರ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಎಸ್ ಸೋನಾಗಿ ಹಾಗೂ ಉಪಾಧ್ಯಕ್ಷ ಎಸ್ ಬಿ ಪಾಟೀಲ ಇದ್ದರು.
ಇದನ್ನೂ ಓದಿ: ವಿಜಯಪುರ | ಭಾರೀ ಮಳೆ; ಅವಧಿಗೂ ಮುನ್ನವೇ ಅರ್ಧ ಭರ್ತಿಯಾದ ಆಲಮಟ್ಟಿ