ವಿಜಯಪುರ | ಸಬ್ಸಿಡಿ ದರದಲ್ಲಿ ವಿತರಿಸುವ ಸ್ಪ್ರಿಂಕ್ಲರ್ ಪೈಪ್‌ಗಳು ಕಳಪೆ; ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ರೈತರ ಆಗ್ರಹ

Date:

Advertisements

ರಾಜ್ಯದ ರೈತರಿಗೆ ಸಬ್ಸಿಡಿ ದರದಲ್ಲಿ ವಿತರಿಸುತ್ತಿರುವ ಸ್ಪ್ರಿಂಕ್ಲರ್ ಪೈಪ್‌ಗಳು ಕಳಪೆಯಾಗಿವೆಯೆಂದು ಸಿಪೆಟ್‌ನಿಂದ ವರದಿ ಬಂದಿದ್ದು, ಕೂಡಲೇ ಉನ್ನತ ಮಟ್ಟದ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳು ಹಾಗೂ ಪೈಪ್ ಕಂಪೆನಿಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂದು ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಆಗ್ರಹಿಸಿದರು.

ವಿಜಯಪುರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, “ಸ್ಪ್ರಿಂಕ್ಲರ್ ಪೈಪ್‌ಗಳನ್ನು ವಿತರಣೆಯಲ್ಲಿ ಸಾವಿರಾರು ಕೋಟಿ ರೂಪಾಯಿ ಅವ್ಯವಹಾರ ಮಾಡಿ ಸರ್ಕಾರಕ್ಕೆ ಹಾಗೂ ರಾಜ್ಯದ ರೈತರಿಗೆ ಕಳಪೆ ಗುಣಮಟ್ಟದ ಪೈಪ್ ಪೂರೈಕೆ ಮಾಡಲಾಗಿದೆ. ನಾವು ಕಳೆದ 2 ವರ್ಷಗಳಿಂದಲೂ ಇದರ ಬಗ್ಗೆ ಸರ್ಕಾರಕ್ಕೆ ಹಾಗೂ ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದೇವೆ. ಇದರ ಕುರಿತ ತೀವ್ರ ಹೋರಾಟ ಮಾಡಿ ಕೃಷಿ ಇಲಾಖೆ ಆಯುಕ್ತರಿಗೂ ಮನವಿಗಳನ್ನು ಸಲ್ಲಿಸಿದ್ದೆವು. ಆಯುಕ್ತರು ಪೈಪ್‌ಗಳನ್ನು ಸಿಪೆಟ್‌ಗೆ ಕಳುಹಿಸಿ ಗುಣಮಟ್ಟ ಪರಿಶೀಲನೆ ನಡೆಸಲು ಸೂಚಿಸಿದ್ದರು” ಎಂದು ಹೇಳಿದರು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಮಾತನಾಡಿ, “ಸಿಪೇಟ್ ವರದಿ ನೀಡುವಂತೆ ಕೃಷಿ ಇಲಾಖೆ ಅಧಿಕಾರಿಗಳನ್ನು ಕೇಳಿದರೆ, ಮೇಲಾಧಿಕಾರಿಗಳಿಗೆ ಕಳುಹಿಸಿದ ನಂತರ ಅವರ ಅನುಮತಿ ಪಡೆದು ತಮಗೆ ಸಿಪೆಟ್ ವರದಿ ಕೊಡಲಾಗುವುದೆಂದು ಸಬೂಬು ಹೇಳುತ್ತಿದ್ದಾರೆ. ಇವರ ವಿಳಂಬ ನೀತಿ ಗಮನಿಸಿದರೆ ಉದ್ದೇಶ ಪೂರ್ವಕವಾಗಿ ಸತ್ಯಾಂಶವನ್ನು ಹೊರಗೆ ಹಾಕಬಾರದೆಂಬ ಹುನ್ನಾರ ನಡೆಸಿದ್ದಾರೆ” ಎಂದು ಆಕ್ರೋಶ ಹೊರಹಾಕಿದರು.

Advertisements

ತಪಾಸಣೆಗಾಗಿ ಸಿಪೆಟ್‌ಗೆ ವಿತರಿಸಿದ ಪೈಪುಗಳನ್ನು ಸಿಪೆಟ್‌ಗೆ ಕಳಿಸದೇ ಗುಣಮಟ್ಟದ ಪೈಪುಗಳನ್ನು ಕಳಿಸುವ ಹುನ್ನಾರವಿದೆ. ಇದರಲ್ಲಿ ಅಧಿಕಾರಿಗಳ ಹುನ್ನಾರವಿದೆ. ಸಹಸ್ರಾರು ಕೋಟಿ ರೂ.ಗಳ ದುರುಪಯೋಗವಾಗಿದೆ. ಒಮ್ಮೆ ಸ್ಪ್ರಿಂಕ್ಲರ್ ಪೈಪ್‌ಗಳನ್ನು ವಿತರಣೆ ಮಾಡಿದರೆ ಸಾಮಾನ್ಯ ರೈತರಿಗೆ ಜೀವನ ಪರ್ಯಂತ ಸ್ಪ್ರಿಂಕ್ಲರ್ ಪೈಪ್‌ಗಳನ್ನು ವಿತರಿಸುವುದಿಲ್ಲ. ಇದರಿಂದ ರೈತರಿಗೆ ತುಂಬಾ ತೊಂದರೆಯಾಗುತ್ತಿದೆ. ಇದು ಕೇವಲ ಒಂದು ಜಿಲ್ಲೆಯ ಸಮಸ್ಯೆಯಲ್ಲ. ಇಡೀ ರಾಜ್ಯಾದ್ಯಂತ ಎಲ್ಲ ಕಂಪನಿಗಳೂ ಕೂಡಾ ಕಳಪೆ ಸ್ಪ್ರಿಂಕ್ಲರ್ ಪೈಪ್‌ಗಳನ್ನು ತಯಾರಿಸಿ ರೈತರಿಗೆ ಮೋಸ ಮಾಡಿ ಕಂಪನಿಯವರು ಕೋಟ್ಯಂತರ ಹಣ ಲೂಟಿ ಮಾಡಿದ್ದಾರೆ. ಆದ್ದರಿಂದ ಕೇಂದ್ರ ಸರ್ಕಾರ ಈ ಕುರಿತು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥ ಕಂಪನಿಯವರ ಮೇಲೆ ಕಾನೂನು ಕ್ರಮ ಜರುಗಿಸಿ ಕಪ್ಪು ಪಟ್ಟಿಗೆ ಸೇರಿಸಬೇಕು. ಮತ್ತೆ ಅಂತಹವರ ಕಂಪನಿಯ ಹೆಸರಿಟ್ಟು ಬೇರೆ ಪೈಪ್ ತಯಾರಿಸಲು ಅನುಮತಿ ನೀಡಬಾರದು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಎಸ್‌ಸಿ, ಎಸ್‌ಟಿ ಕಾಲೋನಿಗಳಿಗೆ ಸರಳ ಖಾತಾ ಆಂದೋಲನ ಸಭೆ : ಅಧಿಕಾರಿಗಳ ನಿರ್ಲಕ್ಷ್ಯ ಖಂಡಿಸಿ ಸಭೆ ಬಹಿಷ್ಕಾರ

ಈ ಸಂದರ್ಭದಲ್ಲಿ ಪ್ರಹ್ಲಾದ ನಾಗರಾಳ, ರಾಮನಗೌಡ ಪಾಟೀಲ, ಮಹಾದೇವಪ್ಪ ತೇಲಿ, ಪ್ರಕಾಶ ತೇಲಿ, ರಾಜೇಸಾ ನದಾಫ, ಸಂಗಪ್ಪ ಟಕ್ಕೆ, ಜಯಸಿಂಗ ರಜಪೂರ, ಆತ್ಮಾನಂದ ಭೈರೊಡಗಿ, ಸೋಮು ಬಿರಾದಾರ, ಬಸವರಾಜ ನ್ಯಾಮಗೊಂಡ, ಜಕರಾಯ ಪೂಜಾರಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X