ವಿಜಯಪುರ | ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೈಪಿಡಿ ಬಿಡುಗಡೆ

Date:

ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ ಅಂಬೇಡ್ಕರ್ ರವರ 134ನೇ ಜನ್ಮ ಜಯಂತಿ ನಿಮಿತ್ತ ಕೊಡುಗೆಯಾಗಿ ನಾಡಿನ ಎಸ್‌ಎಸ್‌ಎಲ್‌ಸಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆಯಲು ಅನುಕೂಲವಾಗಲು ಪರೀಕ್ಷಾ ಸಹಾಯಕ ಕೈಪಿಡಿ ಬಿಡುಗಡೆಗೊಳಿಸಲಾಗಿದೆ.

- Advertisement -

ವಿಜಯಪುರ ನಗರದ ಗಾಂಧಿ ಚೌಕ ಚರ್ಚ್ ಸಭಾಂಗಣದಲ್ಲಿ ಅನೌಪಚಾರಿಕ ಶಿಕ್ಷಣ ಸಂಸ್ಥೆ ಮತ್ತು ದಲಿತ ವಿದ್ಯಾರ್ಥಿ ಪರಿಷತ್ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಒಂದು ದಿನದ ಕಾರ್ಯಾಗಾರದಲ್ಲಿ, ದಲಿತ ವಿದ್ಯಾರ್ಥಿ ಪರಿಷತ್ತಿನ ಹಿತೈಶಿ ಶಿಕ್ಷಕ ಶಕರುಂದ ಸಿದ್ದಗೊಳಿಸಿರುವ ಕೈಪಿಡಿಯನ್ನು ಲೋಕಾರ್ಪಣೆಗೊಳಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಫಾದರ್ ಟಿಯೋಲೋ ಮೆಚಾದೊ ಮಾತನಾಡಿ, “ವಿದ್ಯಾರ್ಥಿಗಳು ತಮ್ಮ ಗುರಿಯನ್ನ ಸಾಧಿಸಬೇಕಾದರೆ ಛಲ ಬಿಡದೆ ಓದಬೇಕು, ಸಮಯ ಪ್ರಜ್ಞೆ ಮತ್ತು ಜೀವನದಲ್ಲಿ ಶಿಸ್ತು ಪಾಲಿಸಿದಾಗ ಮಾತ್ರ ಸಾಧನೆ ಮಾಡಲು ಸಾಧ್ಯ” ಎಂದರು.

ವಿದ್ಯಾರ್ಥಿ ಪರಷತ್‌ನ ಸಂಸ್ಥಾಪಕ, ರಾಜ್ಯಾಧ್ಯಕ್ಷ ಶ್ರೀನಾಥ ಪೂಜಾರಿ ಮಾತನಾಡಿ, “ವಿದ್ಯಾರ್ಥಿಗಳು ದೇಶದ ಭವಿಷ್ಯತ್ತಿನ ಪ್ರಜೆಗಳು. ಸೈನಿಕರು ಯುದ್ಧಕ್ಕೆ ಹೋಗಬೇಕಾದರೆ ಯಾವರೀತಿ ತಯಾರಿ ಮಾಡುತ್ತಾರೋ ಅದೇ ರೀತಿ ಪರೀಕ್ಷೆ ಬರೆಯಲು ತಾವುಕೂಡ ತಯಾರಿ ಮಾಡಬೇಕು. ಇಂದಿನ ವಿದ್ಯಾರ್ಥಿಗಳು ಮುಂದಿನ ನಾಗರಿಕ ಸಮಾಜದ ಉನ್ನತ ಅಧಿಕಾರಿಗಳಾಗಿಯೂ ಕೆಲಸ ನಿರ್ವಹಿಸುವ ಗುರಿಯನ್ನು ಹೊಂದಿರಬೇಕು. ಮಹಾನ್ ಚೇತನಗಳ ಬಗ್ಗೆ ನಮಗೆ ಅರಿವಿರಬೇಕು” ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಇದನ್ನೂ ಓದಿ: ವಿಜಯಪುರ | ಎಸ್‌ಎಸ್‌ಎಲ್‌ಸಿ ಪರೀಕ್ಷಾ ಸಹಾಯಕ ಕೈಪಿಡಿ ಬಿಡುಗಡೆ

ಈ ವೇಳೆ ದಲಿತ ವಿದ್ಯಾರ್ಥಿ ಪರಿಷತ್‌ನ ರಾಜ್ಯ ಸಂಚಾಲಕ ಬಾಲಾಜಿ ಕಾಂಬಳೆ, ಜಿಲ್ಲಾ ಸಂಚಾಲಕ ಅಕ್ಷಯ ಕುಮಾರ ಅಜಮನಿ, ಪರಿಷತ್ ಮುಖಂಡ ಸಂದೇಶ್ ಕುಮುಟಗಿ, ಶಂಕರ ಬಸರಗಿ, ಯುವರಾಜ್ ಓಲೇಕಾರ್, ಪಂಡಿತ ಯಲಗೋಡ ಮತ್ತು ವಿದ್ಯಾರ್ಥಿಗಳು ಅನೌಪಚಾರಿಕ ಸಂಸ್ಥೆಯ ಸಿಬ್ಬಂದಿಗಳು ಭಾಗಿಯಾಗಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...