ವಿಜಯಪುರ | ರಾಜ್ಯ ಸರ್ಕಾರ ಆ.19ರೊಳಗೆ ಒಳಮೀಸಲಾತಿ ಜಾರಿ ಮಾಡಬೇಕು: ಸಂಸದ ಗೋವಿಂದ ಕಾರಜೋಳ

Date:

Advertisements

ರಾಜ್ಯ ಸರ್ಕಾರ ಆಗಸ್ಟ್‌ 19ರೊಳಗೆ ಒಳಮೀಸಲಾತಿ ಜಾರಿ ಮಾಡಬೇಕು. ಇದು ಮಾಡು ಇಲ್ಲವೇ ಮಡಿ ಹೋರಾಟವಾಗಿದೆ. ಒಂದು ವೇಳೆ ವಿಳಂಬ ಧೋರಣೆ ಅನುಸರಿಸಿದರೆ ಕಾಂಗ್ರೆಸ್ ಸರ್ಕಾರಕ್ಕೆ ಆಡಳಿತ ಮಾಡಲು ಬಿಡುವುದಿಲ್ಲ ಮತ್ತು ರಕ್ತಪಾತವಾಗಲಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ, ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಎಚ್ಚರಿಕೆ ನೀಡಿದರು.

ವಿಜಯಪುರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ರಾಜ್ಯದಲ್ಲಿ ಮೀಸಲಾತಿ ಸಂಬಂಧ ಹಾವನೂರ ವರದಿ, ಸದಾಶಿವ ವರದಿ, ಕಾಂತರಜ ವರದಿ, ಮಧುಸ್ವಾಮಿ ವರದಿ ಹಾಗೂ ನಾಗಮೋಹನದಾಸ್ ವರದಿ ಇದ್ದು, ಎಲ್ಲವೂ ವೈಜ್ಞಾನಿಕವಾಗಿವೆ. ಅದರಲ್ಲೂ, ಮಧು ಸ್ವಾಮಿ ವರದಿ ಹೊರತುಪಡಿಸಿ ಉಳಿದ ನಾಲ್ಕು ಆಯೋಗಗಳನ್ನು ಕಾಂಗ್ರೆಸ್ ನೇಮಕ ಮಾಡಿದೆ. ಎಲ್ಲ ವರದಿಗಳ ಮಾಹಿತಿ ಸಹ ಸರ್ಕಾರದಲ್ಲೇ ಇದ್ದು, ಐದರಲ್ಲಿ ಯಾವುದಾದರೂ ಒಂದನ್ನು ದಾರಿ ಮಾಡಿದರೂ, ಅದಕ್ಕೆ ನಮ್ಮ ಸಮ್ಮತಿ ಇದೆ” ಎಂದು ತಿಳಿಸಿದರು.

“ನ್ಯಾ. ನಾಗಮೋಹನದಾಸ್ ಅವರ ಜಾತಿಗಳ ಹಿಂದುಳಿಯುವಿಕೆ ಆಧಾರದ ಮೇಲೆ ತಮ್ಮ ವರದಿಯಲ್ಲಿ ಗುಂಪುಗಳನ್ನು ಮಾಡಿದ್ದಾರೆ. ಇದು ವೈಜ್ಞಾನಿಕವಾಗಿದೆ. ಅಸ್ಪೃಶ್ಯರಲ್ಲಿ ಅತ್ಯಂತ ಹಿಂದುಳಿದವರಿಗೆ ಶೇ.1ರಷ್ಟು ಹೆಚ್ಚು ಹಿಂದುಳಿದ ಮಾದಿಗ ಸಮುದಾಯಕ್ಕೆ ಶೇ.6ರಷ್ಟು, ಹಿಂದುಳಿದ ಹೊಲಯ ಸಮುದಾಯಕ್ಕೆ ಶೇ.5ರಷ್ಟು, ಕಡಿಮೆ ಹಿಂದುಳಿದ ಕೊರಮ, ಕೊರಚ ಜನಾಂಗಕ್ಕೆ ಶೇ.4ರಷ್ಟು ಹಾಗೂ ಆದಿ ಆಂಧ್ರ, ಆದಿ ಕರ್ನಾಟಕ ಮತ್ತು ಜಾತಿಯನ್ನೇ ಹೇಳದವರಿಗೆ ಶೇ.1ರಷ್ಟು ಮೀಸಲು ನಿಗದಿ ಮಾಡಿದ್ದಾರೆ. ಈ ವರದಿಯನ್ನು ಸಂವಿಧಾನ ಮತ್ತು 2014ರ ಏಪ್ರಿಲ್ 1ರ ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ಮುಂದಿಟ್ಟುಕೊಂಡು ನೋಡಿದಾಗ ಅರ್ಥವಾಗುತ್ತದೆ” ಎಂದರು.

Advertisements

“ರಾಜ್ಯ ಸರ್ಕಾರ ಇದೀಗ ಗೊಂದಲ ಸೃಷ್ಟಿ ಮಾಡುವುದು ಸರಿಯಲ್ಲ. ಜಗಳ ಹತ್ತಿಸುವ ಕೆಲಸವನ್ನು ಕಾಂಗ್ರೆಸ್ ಬಿಡಬೇಕು. ನಾವು ಯಾರಿಗೂ ಅನ್ಯಾಯ ಮಾಡಲು ಹಾಗೂ ತೆಗೆದು ಹಾಕಲು ಹೇಳುವುದಿಲ್ಲ. ಸರ್ಕಾರ ತಂದೆ ಸ್ಥಾನದಲ್ಲಿ ನಿಂತು ಅವರವರ ಪಾಲನ್ನು ಕೊಡಬೇಕು. ಒಳಮೀಸಲಾತಿಯಿಂದ ಯಾರೂ ವಂಚಿತರಾಗಬಾರದು. ವರದಿಯಲ್ಲಿ ತಿದ್ದುಪಡಿ ಮಾಡುವ ಅವಶ್ಯಕತೆ ಇದ್ದರೆ, ಅದನ್ನಾದರೂ ಮಾಡಿ ಒಳಮೀಸಲಾತಿ ಜಾರಿ ಮಾಡಬೇಕು. ನಮ್ಮದು ಯಾವುದೇ ತಕರಾರು ಇಲ್ಲ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ದಲಿತ ಸಂಘಟನೆಗಳ ಒಳಮೀಸಲಾತಿ ಪ್ರತಿಭಟನೆ; ಎಸಿ ಕಛೇರಿಗೆ ಬೀಗ

“ನೆರೆಯ ಆಂಧ್ರ ಮತ್ತು ತೆಲಂಗಾಣದಲ್ಲಿ ಈಗಾಗಲೇ ಒಳಮೀಸಲಾತಿ ಅನುಷ್ಠಾನಗೊಳಿಸಲಾಗಿದೆ. ಆದರೆ, ರಾಜ್ಯದಲ್ಲಿ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ ತಮ್ಮದೇ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಒಳಮೀಸಲಾತಿ ಜಾರಿಗೊಳಿಸುವುದಾಗಿ ನೀಡಿದ ಭರವಸೆಯನ್ನು ಯಾಕೆ ಈಡೇರಿಸುತ್ತಿಲ್ಲ? ನುಡಿದಂತೆ ನಡೆದ ಸರ್ಕಾರ ಅಂದರೆ ಇದೇನಾ? ಆಗಸ್ಟ್‌ 16ರಂದೇ ವಿಶೇಷ ಸಚಿವ ಸಂಪುಟ ಸಭೆ ನಿಗದಿ ಮಾಡಿ ಮುಂಡೂಡಲು ಕಾರಣವೇನು? ಎಲ್ಲ ಜಾತಿಯವರು ರಸ್ತೆಯಲ್ಲಿ ಒಡದಾಡಿಕೊಂಡು ಹೋಗಬೇಕೆಂಬ ಕಾಂಗ್ರೆಸ್‌ನ ಒಡೆದು ಆಳುವ ನೀತಿ ಖಂಡಿನೀಯವಾಗಿದೆ. ಒಳಮೀಸಲಾತಿಯು ಮತ ಬ್ಯಾಂಕ್ ರಾಜಕಾರಣಕ್ಕೆ ಅಲ್ಲ. ಸಾಮಾಜಿಕ ನ್ಯಾಯದ ದೃಷ್ಟಿಯಿಂದ ಇದನ್ನು ಜಾರಿ ಮಾಡಬೇಕು” ಎಂದು ಕಾರಜೋಳ ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X